ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ನಡೆದ ನೇಹಾ ಕೊಲೆ ಪ್ರಕರಣದ ತನಿಖೆಯ ಹಾದಿ ತಪ್ಪಿಸಲು ಕಿಡಿಗೇಡಿಗಳು ಇನ್ ಸ್ಟಾಗ್ರಾಮ್ ನಲ್ಲಿ ಫೇಕ್ ಅಕೌಂಟ್ ಕ್ರಿಯೇಟ್ ಮಾಡಿ ಫೋಟೋಗಳನ್ನು ವೈರಲ್ ಮಾಡಲಾಗುತ್ತಿದೆ ಎಂದು ನೇಹಾ ತಂದೆ ನಿರಂಜನ್ ಹೇಳಿದ್ದಾರೆ.
ನೇಹಾ ಹತ್ಯೆ ಪ್ರಕರಣದ ತನಿಖೆಯನ್ನು ಹಾದಿ ತಪ್ಪಿಸಲು ಕಿಡಿಗೇಡಿಗಳು ನೇಹಾ-ಫಯಾಜ್ ಹೆಸರಿನಲ್ಲಿ ಫೇಕ್ ಅಕೌಂಟ್ ಕ್ರಿಯೆಟ್ ಮಾಡಿ ಫೋಟೋಗಳು ಮತ್ತು ವಿಡಿಯೋಗಳನ್ನು ವೈರಲ್ ಮಾಡಲಾಗುತ್ತಿದೆ. ಹೀಗಾಗಿ ನೇಹಾ ಹತ್ಯೆಗೆ ಇನ್ನು ಹಲವರು ಕೈಜೋಡಿಸಿದ್ದಾರೆ. ಪೊಲೀಸರು ಎಚ್ಚೆತ್ತುಕೊಂಡು ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ನಾನೇ ಸೈಬರ್ ಠಾಣೆಗೆ ದೂರು ನೀಡುತ್ತೇನೆ ಎಂದು ನಿರಂಜನ ಹಿರೇಮಠ ಹೇಳಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ಜಸ್ಟಿಸ್ ಫಾರ್ ಲವ್ ಎಂಬ ಅಭಿಯಾನ ಶುರುವಾಗಿದ್ದು, ಇದರಲ್ಲಿ ನೇಹಾ ಹಾಗೂ ಫಯಾಜ್ ಜೊತೆಗಿರುವ ಫೋಟೋಗಳನ್ನು ಹಾಕಿಕೊಳ್ಳುವ ಮೂಲಕ ಹತ್ಯೆಯನ್ನು ಸಮರ್ಥಿಸಿ ಪೋಸ್ಟ್ ಹಾಕಲಾಗುತ್ತಿದೆ. ಇದಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ.