ಹುಬ್ಬಳ್ಳಿ : ಹುಬ್ಬಳಿಯ ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ತಂಡ ಇಂದು ನೇಹಾ ಮನೆಗೆ ಭೇಟಿ ನೀಡಿ ಹತ್ಯೆ ಪ್ರಕರಣದ ಕುರಿತು ಮಾಹಿತಿ ಪಡೆದುಕೊಂಡಿದೆ.
ನೇಹಾ ಕೊಲೆ ಪ್ರಕರಣ ಸಂಬಂಧ ಇಂದು ನೇಹಾ ಮನೆಗೆ ಭೇಟಿ ನೀಡಿದ ಸಿಐಡಿ ಅಧಿಕಾರಿಗಳ ತಂಡ ಸುಮಾರು ೧ ಗಂಟೆಗಳ ಕಾಲ ವಿಚಾರಣೆ ನಡೆಸಿದೆ.
ನೇಹಾ ತಂದೆ ನಿರಂಜನ್ ಹಿರೇಮಠ, ಗೀತಾ ಹಿರೇಮಠ ಅವರ ಬಳಿ ಸುಮಾರು ೧ ಗಂಟೆಗಳ ಸಿಐಡಿ ಅಧಿಕಾರಿಗಳ ತಂಡ ವಿಚಾರಣೆ ನಡೆಸಿದ್ದು, ಹತ್ಯೆ ಕುರಿತು ಮಾಹಿತಿ ಪಡೆದುಕೊಂಡಿದೆ. ನೇಹಾ ಹತ್ಯೆ ಪ್ರಕರಣದ ಆರೋಪಿ ಫಯಾಜ್ ನನ್ನು ಸದ್ಯ ಸಿಐಡಿ ವಶಕ್ಕೆ ಪಡೆದುಕೊಂಡಿದೆ.