ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದಂತ ಕೋಟ್ಯಂತರ ರೂ ಹಗರಣದಲ್ಲಿ ಮಾಜಿ ಸಚಿವ ಬಿ ನಾಗೇಂದ್ರ ಆಪ್ತ ನೆಕ್ಕಂಟಿ ನಾಗರಾಜ್ ಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಸಂಬಂಧ ಜಾಮೀನು ಕೋರಿ ನೆಕ್ಕಂಟಿ ನಾಗರಾಜ್ ಸಲ್ಲಿಸಿದ್ದಂತ ಅರ್ಜಿಯನ್ನು ಮಾನ್ಯ ಮಾಡಿದಂತ ನ್ಯಾಯಮೂರ್ತಿ ಎಸ್ ವಿಶ್ವಜಿತ್ ಶೆಟ್ಟಿ ಅವರಿದ್ದಂತ ಏಕಸದಸ್ಯ ಹೈಕೋರ್ಟ್ ನ್ಯಾಯಪೀಠವು ಷರತ್ತು ಬದ್ದ ಜಾಮೀನು ಮಂಜೂರು ಮಾಡಿದೆ.
ನ್ಯಾಯಾಲಯ ಆರೋಪಿ ನೆಕ್ಕಂಟಿ ನಾಗರಾಜ್ ಗೆ ಒಂದು ಲಕ್ಷ ರೂಪಾಯಿ ಮೌಲ್ಯದ ವೈಯಕ್ತಿಕ ಬಾಂಡ್, ಇಬ್ಬರ ಭದ್ರತೆ ಒದಗಿಸಬೇಕು. ನ್ಯಾಯಾಲಯ ವಿನಾಯ್ತಿ ನೀಡದ ಹೊರತು ವಿಚಾರಣೆಯ ಎಲ್ಲಾ ದಿನ ನ್ಯಾಯಾಲಯದಲ್ಲಿ ಹಾಜರಿರಬೇಕು. ಪ್ರಾಸಿಕ್ಯೂಷನ್ ಸಾಕ್ಷಿಗಳ ಮೇಲೆ ಪ್ರಭಾವ ಬೀರಬಾರದು. ಪ್ರಕರಣ ವಿಲೇವಾರಿಯಾಗುವವರೆಗೂ ನ್ಯಾಯಾಲಯದ ಅನುಮತಿ ಪಡೆಯದೇ ವ್ಯಾಪ್ತಿ ತೊರೆಯುವಂತಿಲ್ಲ ಎನ್ನುವುದು ಸೇರಿದಂತೆ ಹಲವು ಷರತ್ತು ವಿಧಿಸಿ, ಜಾಮೀನ ನೀಡಿದೆ.
Crime News: ಟೊಮೆಟೋ ಬೆಳೆನಷ್ಟದ ಸಾಲ ತೀರಿಸಲು ಕಳ್ಳತನಕ್ಕಿಳಿದ ಆರೋಪಿ ಅರೆಸ್ಟ್