ಕಠ್ಮಾಂಡ್: ನೇಪಾಳದ ಕ್ರಿಕೆಟ್ ತಂಡದ ಮಾಜಿ ನಾಯಕ ಸಂದೀಪ್ ಲಾಮಿಚಾನೆ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪ ಮೇಲೆ ನೇಪಾಳ ನ್ಯಾಯಾಲಯ 8 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.
ಶಿಶಿರ್ ರಾಜ್ ಧಾಕಲ್ ಅವರ ಪೀಠವು ಇಂದು ವಿಚಾರಣೆ ನಡೆಸಿದ ನಂತರ ಪರಿಹಾರ ಮತ್ತು ದಂಡದೊಂದಿಗೆ 8 ವರ್ಷಗಳ ಜೈಲು ಶಿಕ್ಷೆಯ ತೀರ್ಪನ್ನು ಪ್ರಕಟಿಸಿತು. ನ್ಯಾಯಾಲಯದ ಅಧಿಕಾರಿ ರಾಮು ಶರ್ಮಾ ಈ ಸುದ್ದಿಯನ್ನು ದೃಢಪಡಿಸಿದ್ದಾರೆ. ನವೆಂಬರ್ನಲ್ಲಿ ನಡೆದ ಟಿ 20 ಏಷ್ಯಾ ಫೈನಲ್ಸ್ನಲ್ಲಿ ಒಮಾನ್ ವಿರುದ್ಧ ನೇಪಾಳ ಪರ ಕೊನೆಯ ಬಾರಿಗೆ ಆಡಿದ್ದರು.