ಬೆಂಗಳೂರು: ಎಐಸಿಸಿ ಅಧ್ಯಕ್ಷರ ಜತೆ ಚರ್ಚಿಸಿ ಮುಂದೂಡಿಕೆಯಾಗಿರುವ ಮಂಗಳೂರಿನಲ್ಲಿ ನಡೆಯಬೇಕಿರುವ ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಮಾವೇಶಕ್ಕೆ ಹೊಸ ದಿನಾಂಕ ನಿಗದಿಪಡಿಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದಅವರು,ಮಂಗಳೂರಿನಲ್ಲಿಜ.21ಕ್ಕೆ ನಡೆಯಬೇಕಿದ್ದ ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಮಾವೇಶವನ್ನು ಮುಂದೂಡಲಾಗಿದೆ. ಜ.26ರಂದು ಗಣರಾಜ್ಯೋತ್ಸವ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಧ್ವಜಾರೋಹಣಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಈ ವೇಳೆ ಅವರೊಂದಿಗೆ ಚರ್ಚಿಸಿ ಕಾರ್ಯಕರ್ತರ ಸಮಾವೇಶಕ್ಕೆ ಬದಲೀ ದಿನಾಂಕ ಪ್ರಕಟಿಸಲಾಗುವುದು ಎಂದರು.
ಪುಟ್ಟಣ್ಣ ಮೇಲ್ಮನೆ ಅಭ್ಯರ್ಥಿಯಾಗಿದ್ದಾರೆರಾಜ್ಯ ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ಶಿಕ್ಷಕರ ಕ್ಷೇತ್ರದಿಂದ ನಡೆಯುವ ಚುನಾವಣೆಗೆ ಪುಟ್ಟಣ್ಣ ನಮ್ಮ ಪಕ್ಷದ ಅಭ್ಯರ್ಥಿಯಾಗಲಿದ್ದಾರೆ. ನಮ್ಮ ಅಭ್ಯರ್ಥಿ ಗೆಲ್ಲುವಂತೆ ಕಾರ್ಯಕರ್ತರು ಮಾಡಬೇಕು. ಲೋಕಸಭೆ ಚುನಾವಣೆ ನಂತರ ಪಾಲಿಕೆ ಹಾಗೂ ಇತರೆ ಚುನಾವಣೆ ನಡೆಯುತ್ತವೆ. ಕಾರ್ಯಕರ್ತರು, ಮುಖಂಡರ ಸಂಘಟನೆ ನೋಡಿ ಪಾಲಿಕೆ ಚುನಾವಣೆಯಲ್ಲಿ ಅವಕಾಶ ನೀಡಲಾಗುವುದು ಎಂದರು.