ವಿಜಯನಗರ : ಹೊಸ ಜಿಲ್ಲೆ ವಿಜಯನಗರಕ್ಕೆ ನೂತನ ಜಿಲ್ಲಾಧಿಕಾರಿಯಾಗಿ ಟಿ.ವೆಂಕಟೇಶ್ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ವಿಜಯನಗರಕ್ಕೆ ಮೊದಲ ಜಿಲ್ಲಾಧಿಕಾರಿಯಾಗಿ ವಿಶೇಷಾಧಿಕಾರಿಯಾಗಿ ಅನಿರುದ್ಧ ನೇಮಕವಾಗಿದ್ದರು. ಇದೀಗ ಅವರನ್ನು ವರ್ಗಾವಣೆ ಮಾಡಲಾಗಿದೆ. ನೂತನ ಜಿಲ್ಲೆ ವಿಜಯನಗರಕ್ಕೆ ನೂತನ ಜಿಲ್ಲಾಧಿಕಾರಿಯಾಗಿ ಟಿ ವೆಂಕಟೇಶ್ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕ ವೆಂಕಟೇಶ್ ರನ್ನು ನೂತನ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಲಾಗಿದೆ.
ಅದೇ ರೀತಿ ವಿಜಯನಗರದ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಯಾಗಿದ್ದ ಡಾ ಅರುಣ್ ಕೆ ಅವರನ್ನು ಸರ್ಕಾರ ವರ್ಗಾವಣೆ ಮಾಡಿದ್ದು, ಅವರ ಜಾಗಕ್ಕೆ ಶ್ರೀ ಹರಿ ಬಾಬು ಅವರನ್ನು ನೇಮಿಸಿ ಆದೇಶಿಸಲಾಗಿದೆ.
BIGG NEWS : ಐದು ‘ಮೇಕ್-2 ಯೋಜನೆ’ಗಳಿಗೆ ಸೇನೆ ಅನುಮೋದನೆ, ಸ್ವಾವಲಂಬಿಯತ್ತ ಸಾಗಿದ ಭಾರತ |Make II projects
BREAKING NEWS : ಬೆಂಗಳೂರಿನ ಖಾಸಗಿ ಶಾಲೆಯಲ್ಲಿ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು
‘ಬಸವಲಿಂಗ ಶ್ರೀ’ ಆತ್ಮಹತ್ಯೆ ಪ್ರಕರಣ : ಆರೋಪಿಗಳ ಕಸ್ಟಡಿ ಅಂತ್ಯ, ನಾಳೆ ಕೋರ್ಟ್ ಗೆ ಹಾಜರು