ಬೆಂಗಳೂರು : ತರಾತುರಿಯಲ್ಲಿ NEP (ರಾಷ್ಟ್ರೀಯ ಶಿಕ್ಷಣ ನೀತಿ) ಜಾರಿ ವಿರೋಧಿಸಿ ಡಿ.17 ರಂದು ರಾಜ್ಯದ ಎಲ್ಲಾ ವಿಶ್ವವಿದ್ಯಾಲಯ ಬಂದ್ ಗೆ ಕರೆ ನೀಡಲಾಗಿದೆ ಎಂದು NSUI  ಅಧ್ಯಕ್ಷ ಕೀರ್ತಿ ಗಣೇಶ್ ಹೇಳಿದ್ದಾರೆ.

ಈ ಬಗ್ಗೆ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ ಅವರು ಸರ್ಕಾರ ತರಾತುರಿಯಲ್ಲಿ ಎನ್ ಇ ಪಿ ಜಾರಿಗೆ ತಂದಿದೆ. ಇದರಿಂದ ಮಕ್ಕಳು ಹಾಗೂ ಪೋಷಕರಿಗೆ ಬಹಳ ತೊಂದರೆಯಾಗುತ್ತಿದ್ದು, ಮಕ್ಕಳು ಗೊಂದಲದಲ್ಲಿದ್ದಾರೆ. ಈ ಬಗ್ಗೆ ಕಾಲೇಜು ಪ್ರಾಂಶುಪಾರನ್ನು ವಿಚಾರಿಸಿದ್ರೆ ಸರಿಯಾದ ಮಾಹಿತಿ ಸಿಗಲ್ಲ ಎಂದಿದ್ದಾರೆ.

ಸರ್ಕಾರ ತರಾತುರಿಯಲ್ಲಿ ಯಾವುದೇ ಮುಂದಾಲೋಚನೆ ಮಾಡದೇ ಎನ್ ಇ ಪಿ ಜಾರಿಗೆ ತಂದಿದೆ. ಇದರಿಂದ ಬಹಳಷ್ಟು ವಿದ್ಯಾರ್ಥಿಗಳು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ ಎಂದು ಹೇಳಿದರು. ಎನ್ ಇ ಪಿ ಜಾರಿ ವಿರೋಧಿಸಿ ಡಿ.17 ರಂದು ರಾಜ್ಯದ ಎಲ್ಲಾ ವಿಶ್ವವಿದ್ಯಾಲಯ ಬಂದ್ ಗೆ ಕರೆ ನೀಡಲಾಗಿದೆ ಎಂದು ಕೀರ್ತಿ ಗಣೇಶ್ ಹೇಳಿದ್ದಾರೆ.

ಇದಲ್ಲದೇ ಸರ್ಕಾರಿ ಕಾಲೇಜುಗಳಲ್ಲಿ ಹೆಚ್ಚುವರಿ ಶುಲ್ಕ ಪಡೆಯಲಾಗುತ್ತಿದೆ. ಶುಲ್ಕ ಕಡಿಮೆ ಮಾಡಿ ಎಂದು ಮನವಿ ಮಾಡಿದ್ದೇವೆ, ಸರ್ಕಾರ ನಮ್ಮ ವಿವಿಧ ಬೇಡಿಕೆ ಈಡೇರಿಸಬೇಕು ಎಂದು ಆಗ್ರಹಿಸಿದ್ದಾರೆ.

ಪ್ರಾಥಮಿಕ ಶಿಕ್ಷಣದಲ್ಲೂ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ
ರಾಜ್ಯದಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದ ಪ್ರಾಥಮಿಕ ಶಿಕ್ಷಣದಲ್ಲೂ ರಾಷ್ಟ್ರೀಯ ಶಿಕ್ಷಣ ನೀತಿ (NEP) ಯನ್ನು ಜಾರಿಗೆ ತರಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಇತ್ತೀಚೆಗೆ ತಿಳಿಸಿದ್ದಾರೆ.ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಪ್ರಸಕ್ತ ವರ್ಷ ಉನ್ನತ ಶಿಕ್ಷಣದಲ್ಲಿ ಜಾರಿಗೆ ತರಲಾಗಿದ್ದು, ಮುಂದಿನ ಶೈಕ್ಷಣಿಕ ವರ್ಷ ಪ್ರಾಥಮಿಕ ಶಿಕ್ಷಣದಲ್ಲೂ ಎನ್ ಇಪಿ ಜಾರಿಗೆ ತರಲಾಗುವುದು ಎಂದು ಹೇಳಿದ್ದಾರೆ.

ಕಲಿಕಾ ಪ್ರಕ್ರಿಯೆ ಇನ್ನಷ್ಟು ಸರಳೀಕರಣಗೊಳಿಸಬೇಕೆಂಬ ಉದ್ದೇಶದಿಂದ ಕೇಂದ್ರ ಸರ್ಕಾರ ರಾಷ್ಟ್ರೀಯ ಶಿಕ್ಷಣ ನೀತಿ ರೂಪಿಸಿದೆ. ಅದನ್ನು ನಾವು ಯಶಸ್ವಿಯಾಗಿ ಅನುಷ್ಠಾನಗೊಳಿಸುತ್ತಿದ್ದೇವೆ. ಇದು ಜ್ಞಾನದ ಶತಮಾನ, ಇಲ್ಲಿ ಜ್ಞಾನವಂತರು ಮಾತ್ರ ಯಶಸ್ವಿಯಾಗಲು ಸಾಧ್ಯ. ಹೀಗಾಗಿ ವಿದ್ಯಾರ್ಥಿ ವಿಕೇಂದ್ರಿತ ಶಿಕ್ಷಣ ವ್ಯವಸ್ಥೆಯನ್ನು ಕೇಂದ್ರ ಸರ್ಕಾರ ಅಳವಡಿಸಲು ಮುಂದಾಗಿದೆ ಎಂದು ತಿಳಿಸಿದ್ದಾರೆ.

Karnataka Politics: ರಾಜ್ಯ ‘ಕಾಂಗ್ರೆಸ್’ ಅಧ್ಯಕ್ಷ ಒಬ್ಬ ರೌಡಿ – ಶಾಸಕ ಎಂ.ಪಿ ರೇಣುಕಾಚಾರ್ಯ

Share.
Exit mobile version