ಬೆಂಗಳೂರು : ರಾಜ್ಯದಲ್ಲಿ ಡೆಂಗ್ಯೂ ಜ್ವರದ ಅಬ್ಬರ ಹೆಚ್ಚಾಗಿದ್ದು, ಡೆಂಗ್ಯೂ ನಿಯಂತ್ರಣಕ್ಕೆ ರಾಜ್ಯ ಸರ್ಕಾರವು ಹೊಸ ಕ್ರಮ ಕೈಗೊಂಡಿದ್ದು, ಎರಡರಿಂದ-ಮೂರು ಪ್ರಕರಣಗಳು ಕಂಡುಬಂದ್ರೆ ಆ ಪ್ರದೇಶವನ್ನು ಹಾಟ್ ಸ್ಪಾಟ್ ಎಂದು ಘೋಷಿಸಲಾಗುವುದು ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ವಿಧಾನಪರಿಷತ್ ನಲ್ಲಿ ಈ ಕುರಿತು ಮಾಹಿತಿ ನೀಡಿರುವ ಸಚಿವರು, ಡೆಂಗ್ಯೂ ವೈರಸ್ ನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಡೆಂಗ್ಯೂವನ್ನು ನೋಟಿಫೈ ಕಾಯಿಲೆ ಎಂದು ಘೋಷಿಸಲಾಗಿದೆ. ಯಾವುದೇ ಆಸ್ಪತ್ರೆಯಲ್ಲೂ ದಾಖಲಾಗಿದ್ರೂ ಮಾಹಿತಿ ನೀಡುವ ವ್ಯವಸ್ಥೆ ಮಾಡಿದ್ದೇವೆ. ಡೆಂಗ್ಯೂ ನಿಯಂತ್ರಣಕ್ಕೆ ವಿಶೇಷವಾಗಿ ಟಾಸ್ಕ್ ಪೋರ್ಸ್ ಸಮಿತಿ ರಚಿಸಲಾಗಿದೆ. ಕೋವಿಡ್ಮಾದರಿಯಲ್ಲಿಮಾನಿಟರ್ ಮಾಡುತ್ತೇವೆ. ಒಂದೇ ಏರಿಯಾದಲ್ಲಿ ಎರಡ್ಮೂರು ಕೇಸ್ ಗಳು ಕಂಡುಬಂದ್ರೆ ಏರಿಯಾವನ್ನು ಹಾಟ್ ಸ್ಪಾಟ್ ಅಂತ ಘೋಷಣೆ ಮಾಡಲಾಗುವುದು ಎಂದು ಹೇಳಿದ್ದಾರೆ.
ಪ್ರಸಕ್ತ ವರ್ಷ ನಮ್ಮ ರಾಜ್ಯದಲ್ಲಿ 68 ಸಾವಿರ ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿವೆ. ಕಳೆದ ವರ್ಷ ರಾಜ್ಯದಲ್ಲಿ 25ಸಾವಿರ ಕೇಸ್, ಹೀಗಾಗಿ ಡೆಂಗ್ಯೂ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ ಎಂದು ತಿಳಿಸಿದ್ದಾರೆ.
ಕರ್ನಾಟಕದಲ್ಲಿ ಕಳೆದ 24 ಗಂಟೆಯಲ್ಲಿ 435 ಡೆಂಘಿ ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ. ಈ ಪೈಕಿ ಬೆಂಗಳೂರು ಒಂದರಲ್ಲೇ 363 ಪ್ರಕರಣಗಳು ವರದಿಯಾಗಿವೆ. ಒಟ್ಟು ಕೇಸ್ಗಳ ಸಂಖ್ಯೆ 3487ಕ್ಕೆ ಏರಿಕೆಯಾಗಿದೆ.