ಮಂಡ್ಯ: ಕೃಷ್ಣರಾಜ ಸಾಗರ ಬಳಿಯಲ್ಲಿರುವಂತ ಕೆ ಆರ್ ಎಸ್ ಬೃಂದಾವನಕ್ಕೆ ಪಿಪಿಪಿ ಮಾದರಿಯಲ್ಲೇ ಹೊಸ ರೂಪ ನೀಡಲಾಗುತ್ತದೆ. ಇದರಿಂದ 8 ರಿಂದ 10 ಸಾವಿರ ಉದ್ಯೋಗ ಸೃಷ್ಠಿಯಾಗಲಿದೆ ಅಂತ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ಕೆಆರ್ ಎಸ್ ಅಣೆಕಟ್ಟು ವೀಕ್ಷಣೆ ನಂತರ ಅಣೆಕಟ್ಟೆ ಬಳಿ ಮತ್ತು ವಿಧಾನಸೌಧದಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಸೋಮವಾರ ಮಾತನಾಡಿದ ಅವರು, “ಕಾವೇರಿ ಬೃಂದಾವನ ಅಮ್ಯೂಸ್ ಮೆಂಟ್ ಉದ್ಯಾನಕ್ಕೆ ಹೊಸ ರೂಪ ನೀಡಲಾಗುವುದು. ಪಿಪಿಪಿ ಮಾದರಿಯಲ್ಲಿ ಇದರ ಅಭಿವೃದ್ದಿ ಮಾಡಲಾಗುವುದು. ಈ ವಿಚಾರ ಇನ್ನೆರಡು ದಿನಗಳಲ್ಲಿ ಕ್ಯಾಬಿನೆಟ್ ಮುಂದೆ ಚರ್ಚೆಗೆ ಬರುತ್ತದೆ. ಈ ಯೋಜನೆಯಿಂದ ಈ ಭಾಗದ 8-10 ಸಾವಿರ ಜನರಿಗೆ ಉದ್ಯೋಗ ಲಭಿಸಲಿದೆ. ಕಳೆದ ಬಜೆಟ್ ನಲ್ಲಿ ಯೋಜನೆ ರೂಪಿಸಲಾಗಿತ್ತು. ಕಾರ್ಯರೂಪಕ್ಕೆ ಬಂದಿರಲಿಲ್ಲ. ಸುಮಾರು 10 ಸಾವಿರಕ್ಕೂ ಹೆಚ್ಚು ಪ್ರವಾಸಿಗರು ದಿನಕ್ಕೆ ಬರುವ ನಿರೀಕ್ಷೆಯಿದೆ. ಅದಕ್ಕೆ ತಕ್ಕಂತೆ ವ್ಯವಸ್ಥೆ ಮಾಡಬೇಕು. ಪ್ರವಾಸಕ್ಕೆ ಬಂದವರು ಒಂದೆರಡು ದಿನ ಇಲ್ಲಿ ಉಳಿದುಕೊಂಡು ಹೋಗುವಂತಹ ವ್ಯವಸ್ಥೆ ಮಾಡಬೇಕು. ಬೆಂಗಳೂರಿನಿಂದ ಒಂದೂವರೆ ತಾಸಿನಲ್ಲಿ ಬರಬಹುದು. ಇಲ್ಲಿಂದ ಸುತ್ತಲಿನ ಪ್ರದೇಶಗಳಿಗೆ ಭೇಟಿ ನೀಡಬಹುದು” ಎಂದು ತಿಳಿಸಿದರು.
ಬೃಂದಾವನದಲ್ಲಿ ಹೊಸ ಯೋಜನೆ ಇರುತ್ತದೆಯೇ? ಅಥವಾ ಹೊಸ ಮಾದರಿ ಇರಲಿದೆಯೇ ಮತ್ತು ಈಗ ಇರುವ ಅವಲಂಭಿತರ ಪರಿಸ್ಥಿತಿ ಏನು ಎಂದು ಪ್ರಶ್ನಿಸಿದಾಗ “ಯೋಜನೆಯ ಸಂಪೂರ್ಣ ವರದಿ ಬಂದಾಗ ಈ ಎಲ್ಲದರ ಬಗ್ಗೆ ಪರಿಶೀಲಿಸಲಾಗುವುದು. ಸ್ಥಳೀಯರು ಯಾವುದೇ ಆತಂಕ ಪಡಬೇಕಾಗಿಲ್ಲ. 10 ಜನರನ್ನು ದೃಷ್ಟಿಯಲ್ಲಿ ಇಟ್ಟುಕೊಂಡರೆ ದೊಡ್ಡ ಯೋಜನೆ ಸಾಕಾರವಾಗುವುದಿಲ್ಲ. ಹೂವಿನ ಹಾರ ಹಾಕುವವರು, ಕಲ್ಲು ಹೊಡೆಯುವವರು ಎಲ್ಲರೂ ಇದ್ದೇ ಇರುತ್ತಾರೆ. ಗುಂಡೂರಾವ್ ಅವರ ಕಾಲದಲ್ಲಿ ಕಾರಂಜಿಗಳನ್ನು ಮಾಡಲಾಯಿತು. ಈಗ ಹೊಸ ರೀತಿಯಲ್ಲಿ ವಿನ್ಯಾಸ ಮಾಡಲಾಗುವುದು. ಕಾವೇರಿ, ಬೃಂದಾವನ ಹೆಸರನ್ನು ಬಿಡುವ ಪ್ರಮೇಯವೇ ಇಲ್ಲ. ಇವು ನಮ್ಮ ಬ್ರಾಂಡ್” ಎಂದರು.
ನಾನು ಎನ್ನುವುದು ಅಹಂಕಾರ, ನಾವು ಎನ್ನುವುದು ಸಂಸ್ಕಾರ: ಡಿಕೆಶಿ ಕುಟುಕಿದ ಕೇಂದ್ರ ಸಚಿವ HDK
BREAKING : ಬೆಳಗಾವಿಯಲ್ಲಿ ಭೀಕರ ಮರ್ಡರ್ : ಮಾರಾಕಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಕೊಲೆ