ಬೆಂಗಳೂರು: ವಿಧಾನ ಸಭಾ ಕ್ಷೇತ್ರದಿಂದ, ಶಿಕ್ಷಕರ ಕ್ಷೇತ್ರದಿಂದ ಹಾಗೂ ಪದವೀಧರರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ನೂತನವಾಗಿ ಚುನಾಯಿತರಾಗಿರುವ ಒಟ್ಟು 17 ಶಾಸಕರುಗಳು ಜೂನ್ 24 ರಂದು ಬೆಳಿಗ್ಗೆ 11 ಗಂಟೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ನೂತನವಾಗಿ ಚುನಾಯಿತರಾದ ಶಾಸಕರುಗಳಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ ಎಂದು ವಿಧಾನ ಪರಿಷತ್ ಸಚಿವಾಲಯದ ಪ್ರಕಟಣೆ ತಿಳಿಸಿದೆ.