ಸಿಸೇರಿಯನ್ ಹೆರಿಗೆಗಳಿಗೆ ಕಡಿವಾಣ ಹಾಕಲು ನೂತನ ಕಾರ್ಯಕ್ರಮ ಜಾರಿ: ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: ರಾಜ್ಯದಲ್ಲಿ ಸಿಸೇರಿಯನ್ ಹೆರಿಗೆಗಳನ್ನ ನಿಯಂತ್ರಿಸುವ ನಿಟ್ಟಿನಲ್ಲಿ ಮುಂದಿನ ತಿಂಗಳು ನೂತನ ಕಾರ್ಯಕ್ರಮ ಜಾರಿಗೊಳೊಸುತ್ತಿರುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಳಗಾವಿಯ ಸುವರ್ಣಸೌಧದಲ್ಲಿ ಇಂದು ವಿಧಾನ ಪರಿಷತ್ ಕಲಾಪದಲ್ಲಿ ಪರಿಷತ್ ಸದಸ್ಯ ಜಗದೇವ ಗುತ್ತೇದಾರ ಅವರ ಪ್ರಶ್ನೆಗೆ ಉತ್ತರಿಸುವ ವೇಳೆ ಸಚಿವರು ಈ ವಿಷಯ ತಿಳಿಸಿದರು. ರಾಜ್ಯದಲ್ಲಿ ಪ್ರತಿ ವರ್ಷ ಸಿಸೇರಿಯನ್‌ ಹೆರಿಗೆ ಪ್ರಮಾಣ ಹೆಚ್ಚಾಗುತ್ತಿದೆ. 2021-2022 ರಲ್ಲಿ 35% ಇದ್ದ ಸಿಸೇರಿಯನ್‌ ಪ್ರಮಾಣ, 2022-23 ಕ್ಕೆ 38%ಕ್ಕೆ ಏರಿಕೆಯಾಗಿತ್ತು. ಪ್ರಸ್ತುತ ರಾಜ್ಯದಲ್ಲಿ ಸಿಸೇರಿಯನ್‌ ಹೆರಿಗೆ ಪ್ರಮಾಣ … Continue reading ಸಿಸೇರಿಯನ್ ಹೆರಿಗೆಗಳಿಗೆ ಕಡಿವಾಣ ಹಾಕಲು ನೂತನ ಕಾರ್ಯಕ್ರಮ ಜಾರಿ: ಸಚಿವ ದಿನೇಶ್ ಗುಂಡೂರಾವ್