Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​ವಿವಾಹಪೂರ್ವ ದೈಹಿಕ ಸಂಬಂಧವಿದ್ದರೆ ಅದು ಚಾರಿತ್ರ್ಯದ ಮೇಲೆ ಕಪ್ಪುಚುಕ್ಕೆಯಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

​ಮುಂಬೈ ಇಂಡಿಯನ್ಸ್‌ಗೆ ಗುಡ್ ಬೈ ಹೇಳಲಿದ್ದಾರಾ ಸೂರ್ಯಕುಮಾರ್ ಯಾದವ್? ಇನ್‌ಸ್ಟಾಗ್ರಾಮ್‌ನಿಂದ ಅನ್ ಫಾಲೋ ಮಾಡಿದ ಸ್ಟಾರ್ ಬ್ಯಾಟರ್!

​ಪರೀಕ್ಷಾ ಅಕ್ರಮಗಳ ವಿರುದ್ಧ ‘ಕಾಕ್ರೋಚ್ ಜನತಾ ಪಾರ್ಟಿ’ ಕಹಳೆ: ಜೂನ್ 11ರಂದು ಪುಣೆಯಲ್ಲಿ ಬೃಹತ್ ಪ್ರತಿಭಟನೆ, ಪ್ರಧಾನ್ ರಾಜೀನಾಮೆಗೆ ಆಗ್ರಹ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘KMF’ ಹೊಸ ದಾಖಲೆ: ದಸರಾ, ದೀಪಾವಳಿಯಲ್ಲಿ 1,100 ಮೆಟ್ರಿಕ್ ಟನ್ ‘ನಂದಿನಿ ಸಿಹಿ ಉತ್ಪನ್ನ’ಗಳು ಮಾರಾಟ | Nandini Products
KARNATAKA

‘KMF’ ಹೊಸ ದಾಖಲೆ: ದಸರಾ, ದೀಪಾವಳಿಯಲ್ಲಿ 1,100 ಮೆಟ್ರಿಕ್ ಟನ್ ‘ನಂದಿನಿ ಸಿಹಿ ಉತ್ಪನ್ನ’ಗಳು ಮಾರಾಟ | Nandini Products

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ದಸರಾ ಮತ್ತು ದೀಪಾವಳಿ ಅವಧಿಯಲ್ಲಿ ರಾಜ್ಯದ ಹೆಮ್ಮೆಯ “ನಂದಿನಿ” ಬ್ರಾಂಡ್‌ನಿಂದ ದಾಖಲೆಯ ಸಿಹಿ ಮಾರಾಟವಾಗಿದೆ. ಬರೋಬ್ಬರಿ ದಸರಾ, ದೀಪಾವಳಿಯಲ್ಲಿ 1,100 ಮೆಟ್ರಿಕ್ ಟನ್ ಸಿಹಿ ಉತ್ಪನ್ನಗಳು ಮಾರಾಟವಾಗಿವೆ.

ಈ ಕುರಿತಂತೆ ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳ ನಿಯಮಿತ ವ್ಯವಸ್ಥಾಪಕ ನಿರ್ದೇಶಕ ರು ಮಾಹಿತಿ ನೀಡಿದ್ದು, ಕರ್ನಾಟಕ ಹಾಲು ಮಹಾಮಂಡಳಿ ನಿಯಮಿತ (ಕೆಎಂಎಫ್) ಸಂಸ್ಥೆಯು ಕಳೆದ ಐದು ದಶಕಗಳಿಂದ ರಾಜ್ಯದ ಹೈನುಗಾರಿಕೆ ಮತ್ತು ಸಹಕಾರ ಕ್ಷೇತ್ರದಲ್ಲಿ ಪ್ರಮುಖ ಸ್ಥಾನವನ್ನು ಹೊಂದಿದ್ದು, ಹಾಲು ಉತ್ಪಾದಕರ ರೈತರ ಹಿತದೃಷ್ಟಿಯಿಂದ ರಾಜ್ಯದ ಹೈನು ಸಹಕಾರ ಚಳುವಳಿಯನ್ನು ಬಲಪಡಿಸುವಲ್ಲಿ ಮುಂಚೂಣಿಯಲ್ಲಿದೆ ಎಂದಿದ್ದಾರೆ.

ಪ್ರತಿದಿನ ರಾಜ್ಯದ ವಿವಿಧ ಹೈನುಗಾರ ರೈತರಿಂದ ಸರಾಸರಿ 1 ಕೋಟಿ ಲೀಟರ್ ಹಾಲು ಸಂಗ್ರಹಿಸಲಾಗುತ್ತಿದ್ದು, ಅದರಲ್ಲಿ ಸುಮಾರು 65 ಲಕ್ಷ ಲೀಟರ್ ಹಾಲು, ಮೊಸರು ಹಾಗೂ ಯುಎಚ್‌ಟಿ ಹಾಲು ಉತ್ಪನ್ನಗಳನ್ನು ರಾಜ್ಯ ಮತ್ತು ಹೊರರಾಜ್ಯ ಮಾರುಕಟ್ಟೆಗಳಲ್ಲಿ ಗ್ರಾಹಕರಿಗೆ ತಲುಪಿಸಲಾಗುತ್ತಿದೆ. “ನಂದಿನಿ” ಬ್ರಾಂಡ್‌ನಡಿಯಲ್ಲಿ ಹಾಲಿನೊಂದಿಗೆ ತುಪ್ಪ, ಬೆಣ್ಣೆ, ಪನೀರ್, ಸಿಹಿತಿನಿಸುಗಳು, ಹಾಲಿನ ಪುಡಿ, ಪಾನೀಯಗಳು ಸೇರಿದಂತೆ 175ಕ್ಕೂ ಅಧಿಕ ಬಗೆಯ ಹಾಲು ಹಾಗೂ ಹಾಲಿನ ಉತ್ಪನ್ನಗಳನ್ನು ರಾಜ್ಯ, ನೆರೆರಾಜ್ಯಗಳು ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು, ಮಹಾರಾಷ್ಟ್ರ, ಗೋವಾ, ಕೇರಳ ಹಾಗೂ ದೆಹಲಿ, ಅಸ್ಸಾಂ ಮತ್ತು ಕೆಲ ಹೊರದೇಶಗಳ ಮಾರುಕಟ್ಟೆಗಳಲ್ಲಿ ಯಶಸ್ವಿಯಾಗಿ ಮಾರಾಟ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಹಾಲು ಮತ್ತು ಹಾಲಿನ ಉತ್ಪನ್ನಗಳ ಶುದ್ಧತೆ, ಗುಣಮಟ್ಟ ಮತ್ತು ಕೈಗೆಟುಕುವ ಬೆಲೆಯು “ನಂದಿನಿ” ಬ್ರಾಂಡ್ ಅನ್ನು ಗ್ರಾಹಕರ ವಿಶ್ವಾಸದ ಪ್ರತೀಕವನ್ನಾಗಿ ಮಾಡಿದೆ ಎಂದಿದ್ದಾರೆ.

ಪ್ರತಿ ವರ್ಷ ದಸರಾ ಮತ್ತು ದೀಪಾವಳಿ ಹಬ್ಬಗಳ ಸಂದರ್ಭದಲ್ಲಿ ಸಿಹಿತಿನಿಸುಗಳಿಗೆ ರಾಜ್ಯದಾದ್ಯಂತ ಹೆಚ್ಚಿನ ಬೇಡಿಕೆ ಕಂಡುಬರುತ್ತದೆ. ಈ ಹಬ್ಬದ ಅವಧಿಯಲ್ಲಿ ನಂದಿನಿ ಬ್ರಾಂಡ್‌ನಡಿಯಲ್ಲಿ ಲಭ್ಯವಿರುವ 40 ಕ್ಕೂ ಹೆಚ್ಚು ಸಿಹಿ ಉತ್ಪನ್ನ ಮಾದರಿಗಳ ಉತ್ಪಾದನೆ ಮತ್ತು ಮಾರಾಟಕ್ಕೆ ಕೆಎಂಎಫ್ ಮುಂಚಿತ ಸಿದ್ಧತೆ ಕೈಗೊಂಡಿತ್ತು ಎಂದು ತಿಳಿಸಿದೆ.

2024ರ ದಸರಾ ಮತ್ತು ದೀಪಾವಳಿ ಹಬ್ಬದ ಅವಧಿಯಲ್ಲಿ ಒಟ್ಟು 725 ಮೆಟ್ರಿಕ್ ಟನ್ ಸಿಹಿ ಉತ್ಪನ್ನಗಳನ್ನು ಮಾರಾಟ ಮಾಡಿ ರೂ.33.48 ಕೋಟಿ ವಹಿವಾಟು ದಾಖಲಿಸಲಾಗಿತ್ತು. ಈ ಬಾರಿ 2025ರ ಹಬ್ಬದ ಅವಧಿಗೆ ಹೆಚ್ಚುವರಿ ಬೇಡಿಕೆಯನ್ನು ಪರಿಗಣಿಸಿ, ಸುಮಾರು ಎರಡು ತಿಂಗಳುಗಳ ಮುಂಚಿತವಾಗಿ ಎಲ್ಲ ಸದಸ್ಯ ಹಾಲು ಒಕ್ಕೂಟಗಳ ಸಹಕಾರದೊಂದಿಗೆ ನಿಖರ ಯೋಜನೆ ರೂಪಿಸಿ 1000 ಮೆಟ್ರಿಕ್ ಟನ್ ಮಾರಾಟ ಗುರಿ ನಿಗದಿಪಡಿಸಲಾಯಿತು ಎಂದಿದೆ.

ಸದರಿ ಗುರಿಯನ್ನು ಮೀರಿ ಈ ವರ್ಷ ಕೆಎಂಎಫ್ ಮತ್ತು ಸದಸ್ಯ ಹಾಲು ಒಕ್ಕೂಟಗಳು “ಒಟ್ಟಾಗಿ 1100ಮೆಟ್ರಿಕ್ ಟನ್ ಸಿಹಿ ಉತ್ಪನ್ನಗಳನ್ನು ಮಾರಾಟ ಮಾಡಿದ್ದು, ಒಟ್ಟಾರೆ ರೂ. 46.00 ಕೋಟಿಗಳ ದಾಖಲೆಯ ವಹಿವಾಟು” ಸಾಧಿಸುವ ಮೂಲಕ ಒಂದು ಮಹತ್ವದ ಮೈಲುಗಲ್ಲು ನಿರ್ಮಿಸಲಾಗಿದೆ. ಕಳೆದ ಸಾಲಿಗೆ ಹೋಲಿಕೆ ಮಾಡಿದಾಗ ಶೇ.38 ರಷ್ಟು ವಹಿವಾಟು ಪ್ರಗತಿಯಾಗಿದ್ದು “ಇದು ಕೆ.ಎಂ.ಎಫ್ ಇತಿಹಾಸದಲ್ಲಿಯೇ ಸಾರ್ವಕಾಲಿಕ ದಾಖಲೆಯಾಗಿರುತ್ತದೆ ಎಂದು ತಿಳಿದೆ.

ಈ ಸಾಧನೆ “ನಂದಿನಿ” ಬ್ರಾಂಡ್‌ನ ಗುಣಮಟ್ಟ, ಶುದ್ಧತೆ ಮತ್ತು ಗ್ರಾಹಕರ ವಿಶ್ವಾಸದ ಪ್ರತಿಫಲವಾಗಿದ್ದು, ರಾಜ್ಯದ ಹಾಲು ಉತ್ಪಾದಕರ ಶ್ರಮ ಮತ್ತು ಸಹಕಾರಿ ಬಲದ ದೃಢತೆಗೂ ಸಾಕ್ಷಿಯಾಗಿದೆ ಎಂದಿದ್ದಾರೆ.

BREAKING: ನವದೆಹಲಿಯ ರಾಷ್ಟ್ರಪತಿ ಭವನದ ಬಳಿಯ ಕಟ್ಟಡದಲ್ಲಿ ಬೆಂಕಿ ಅವಘಡ | Rashtrapati Bhawan

ಹಾಸನಾಂಬೆ ದೇವಿ ದರ್ಶನಕ್ಕೆ ಹರಿದು ಬಂದ ಭಕ್ತ ಸಾಗರ: ಬರೋಬ್ಬರಿ 23 ಲಕ್ಷ ಮಂದಿ ದರ್ಶನ

Share. Facebook Twitter LinkedIn WhatsApp Email

Related Posts

ಮಾಜಿ ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ ವಿರುದ್ಧ ಮುಡಾ ಕೇಸ್ : ವಿಚಾರಣೆ ಜುಲೈ 3ಕ್ಕೆ ಮುಂದೂಡಿದ ಹೈಕೋರ್ಟ್

1 Min Read

GOOD NEWS : ಆಯುಷ್ಮಾನ್ ಯೋಜನೆಯಡಿ APL ಕುಟುಂಬಗಳಿಗೆ ಹೆಚ್ಚಿನ ನೆರವು ನೀಡಲು ಚಿಂತನೆ : ಸಚಿವ ಯು.ಟಿ‌ ಖಾದರ್

2 Mins Read

ಬೆಂಗಳೂರಲ್ಲಿ 5 ಸಾವಿರ ಲಂಚಕ್ಕೆ ಬೇಡಿಕೆ : ಕಾನೂನು ಮಾಪನಶಾಸ್ತ್ರದ ಸಹಾಯಕ ನಿಯಂತ್ರಕಿ ಲೋಕಾಯುಕ್ತ ಬಲೆಗೆ!

1 Min Read
Recent News

​ವಿವಾಹಪೂರ್ವ ದೈಹಿಕ ಸಂಬಂಧವಿದ್ದರೆ ಅದು ಚಾರಿತ್ರ್ಯದ ಮೇಲೆ ಕಪ್ಪುಚುಕ್ಕೆಯಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

​ಮುಂಬೈ ಇಂಡಿಯನ್ಸ್‌ಗೆ ಗುಡ್ ಬೈ ಹೇಳಲಿದ್ದಾರಾ ಸೂರ್ಯಕುಮಾರ್ ಯಾದವ್? ಇನ್‌ಸ್ಟಾಗ್ರಾಮ್‌ನಿಂದ ಅನ್ ಫಾಲೋ ಮಾಡಿದ ಸ್ಟಾರ್ ಬ್ಯಾಟರ್!

​ಪರೀಕ್ಷಾ ಅಕ್ರಮಗಳ ವಿರುದ್ಧ ‘ಕಾಕ್ರೋಚ್ ಜನತಾ ಪಾರ್ಟಿ’ ಕಹಳೆ: ಜೂನ್ 11ರಂದು ಪುಣೆಯಲ್ಲಿ ಬೃಹತ್ ಪ್ರತಿಭಟನೆ, ಪ್ರಧಾನ್ ರಾಜೀನಾಮೆಗೆ ಆಗ್ರಹ

​ಹಣ ಉಳಿತಾಯಕ್ಕೆ ಇಲ್ಲಿದೆ ಸರಳ ದಾರಿ: ನಿಮ್ಮ ಜೀವನಶೈಲಿಯಲ್ಲಿ ಸಣ್ಣ ಬದಲಾವಣೆ ಮಾಡಿ ಆರ್ಥಿಕ ಭದ್ರತೆ ಪಡೆಯಿರಿ!

State News
KARNATAKA

ಮಾಜಿ ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ ವಿರುದ್ಧ ಮುಡಾ ಕೇಸ್ : ವಿಚಾರಣೆ ಜುಲೈ 3ಕ್ಕೆ ಮುಂದೂಡಿದ ಹೈಕೋರ್ಟ್

By ಸುರೇಶ್‌ KARNATAKA 1 Min Read

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ मुख्यमंत्री ಸಿದ್ದರಾಮಯ್ಯ ಹಾಗೂ ಅವರ ಪತ್ನಿ ಪಾರ್ವತಿ ಅವರ…

GOOD NEWS : ಆಯುಷ್ಮಾನ್ ಯೋಜನೆಯಡಿ APL ಕುಟುಂಬಗಳಿಗೆ ಹೆಚ್ಚಿನ ನೆರವು ನೀಡಲು ಚಿಂತನೆ : ಸಚಿವ ಯು.ಟಿ‌ ಖಾದರ್

ಬೆಂಗಳೂರಲ್ಲಿ 5 ಸಾವಿರ ಲಂಚಕ್ಕೆ ಬೇಡಿಕೆ : ಕಾನೂನು ಮಾಪನಶಾಸ್ತ್ರದ ಸಹಾಯಕ ನಿಯಂತ್ರಕಿ ಲೋಕಾಯುಕ್ತ ಬಲೆಗೆ!

BREAKING : ಶಿವಮೊಗ್ಗದಲ್ಲಿ ಶಾಸಕ ಬಿಕೆ ಸಂಗಮೇಶ ಪುತ್ರನ ಆಪ್ತನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ : ಬೆಚ್ಚಿ ಬಿದ್ದ ಜನತೆ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.