ಬೆಂಗಳೂರು : ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶದ ಕುರಿತು ಪರೀಕ್ಷಾ ಮಂಡಳಿ ಹೊಸ ಅಪ್ ಡೇಟ್ ನೀಡಿದ್ದು, ಫಲಿತಾಂಶ ಮೇ. 9 ಅಥವಾ 10 ರಂದು ಪ್ರಕಟವಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ.
ರಾಜ್ಯದಲ್ಲಿ ನಾಳೆ ಎರಡನೇ ಹಂತದ ಲೋಕಸಭೆ ಚುನಾವಣೆಗೆ ಮತದಾನ ಹಿನ್ನೆಲೆಯಲ್ಲಿ ಎಸ್ ಎಸ್ ಎಲ್ ಸಿ ಫಲಿತಾಂಶ ವಿಳಂಬವಾಗಿದ್ದು, ಮೇ 9 ಅಥವಾ 10 ರಂದು ಪ್ರಕಟವಾಗಲಿದೆ ಎಂದು ಮೂಲಗಳು ತಿಳಿಸಿವೆ.
2024ನೇ ಸಾಲಿನ ಎಸ್ ಎಸ್ ಎಲ್ಲಿ ಪರೀಕ್ಷೆಯಲ್ಲಿ ಒಟ್ಟು 8.69 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದರು. ಇದರಲ್ಲಿ 4.41 ಲಕ್ಷ ಬಾಲಕರು 4.28 ಲಕ್ಷ ಬಾಲಕಿಯರು. ಸಾಮಾನ್ಯ ವಿದ್ಯಾರ್ಥಿಗಳ ಜೊತೆಯಲ್ಲಿ 18,225 ಖಾಸಗಿ ವಿದ್ಯಾರ್ಥಿಗಳು 41,375 ಮರು ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಗಳು ಕೂಡ ಸೇರಿದ್ದಾರೆ.
ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತಿರ್ಣ ಪ್ರಮಾಣದಲ್ಲಿ ವರ್ಷದಿಂದ ವರ್ಷಕ್ಕೆ ದಾಖಲೆ ಬರೆಯುತ್ತಿದ್ದ ಫಲಿತಾಂಶವು ಈ ಬಾರಿ ಕುಸಿತ ಕಾಣುವ ಸಾಧ್ಯತೆ ಇದೆ. ಎಲ್ಲಾ ಪರೀಕ್ಷಾ ಕೇಂದ್ರಗಳು, ಕೊಠಡಿಗಳಲ್ಲಿ ಸಿಸಿ ಕ್ಯಾಮೆರಾಗಳ ಅಳವಡಿಸುವುದರಿಂದ ರಾಜ್ಯದ ಎಲ್ಲೆಡೆ ಪರೀಕ್ಷೆ ಕಟ್ಟುನಿಟ್ಟಾಗಿ ನಡೆದಿದೆ. ಹೀಗಾಗಿ ಫಲಿತಾಂಶ ಶೇ. 60ಕ್ಕೆ ಕುಸಿಯಬಹುದು ಎನ್ನಲಾಗಿದೆ.