ವಿಜಯಪುರ: ಜಿಲ್ಲೆಯಲ್ಲಿ ಆಕಸ್ಮಿಕವಾಗಿ ಕೃಷಿ ಹೊಂಡಕ್ಕೆ ಬಿದ್ದು ತಾಯಿ ಹಾಗೂ ಇಬ್ಬರು ಗಂಡು ಮಕ್ಕಳು ಧಾರುಣವಾಗಿ ಹೊಸ ವರ್ಷದಂದೇ ಸಾವನ್ನಪ್ಪಿರುವಂತ ಘಟನೆ ನಡೆದಿದೆ.
ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ತಾಲ್ಲೂಕಿನ ಹರನಾಳ ಬಳಿಯಲ್ಲಿ ಈ ಧಾರುಣ ಘಟನೆ ನಡೆದಿದೆ. ಜಮೀನಿಗೆ ತೆರಳಿದ್ದಂತ ಗೀತಾ ಬಂಡಿ ಹಾಗೂ ಗಂಡು ಮಕ್ಕಳಾದಂತ ಶ್ರವಣ್, ಶರಣ್ ಆಕಸ್ಮಿಕವಾಗಿ ಕೃಷಿ ಹೊಂಡದಲ್ಲಿ ಬಿದ್ದು ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ.
ಅಂದಹಾಗೇ ಗಂಡನ ಜೊತೆಗೆ ಜಗಳವಾಡಿ ಮನೆ ಬಿಟ್ಟು ಗೀತಾ ಬಂದಿದ್ದರು. ಇಂದು ಕೃಷಿ ಹೊಂಡದ ಬಳಿಯಲ್ಲಿ ತೆರಳಿದ್ದಾಗ ಕಾಲು ಜಾರಿ ಬಿದ್ದ ಮಕ್ಕಳನ್ನು ರಕ್ಷಿಸಲು ಹೋಗಿ ಈ ದುರಂತ ನಡೆದಿದೆ ಎನ್ನಲಾಗುತ್ತಿದೆ.
ಮೃತ ಗೀತಾ ತಂದೆ ರಾಮಪ್ಪ ನಾಯ್ಕಡಿ ಎಂಬುವರಿಗೆ ಸೇರಿದಂತೆ ಕೃಷಿ ಹೊಂಡದಲ್ಲಿ ಈ ಧಾರುಣ ಘಟನೆ ನಡೆದಿದೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಈ ಸಂಬಂಧ ದೇವರಹಿಬ್ಬರಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾಜಸ್ಥಾನದಲ್ಲಿ 150 ಅಡಿ ಆಳದ ಕೊಳವೆಬಾವಿಗೆ ಬಿದ್ದಿದ್ದ 3 ವರ್ಷದ ಬಾಲಕಿ ರಕ್ಷಣೆ