ವಿಜಯಪುರ: ನಾಲ್ಕು ತಿಂಗಳ ಹಿಂದಷ್ಟೇ ಪ್ರೀತಿಸಿ ಮದುವೆಯಾಗಿದ್ದಂತ ನವ ಜೋಡಿ, ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವಂತ ಘಟನೆ ವಿಜಯಪುರದಲ್ಲಿ ನಡೆದಿದೆ.
ವಿಜಯಪುರ ನಗರದ ಹೊರ ಭಾಗದಲ್ಲಿರುವಂತ ಶ್ರೀ ಸಿದ್ದೇಶ್ವರ ಬಡಾವಣೆಯ ಮನೆಯಲ್ಲಿ ನಾಲ್ಕು ತಿಂಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದಂತ ಮನೋಜ್ ಕುಮಾರ್ ಪೋಳ(30) ಹಾಗೂ ರಾಖಿ(23) ನೇಣಿಗೆ ಶರಣಾಗಿದ್ದಾರೆ.
ಸೋಮವಾರ ತಡರಾತ್ರಿ ಊಟ ಮಾಡಿದ ಬಳಿಕ ನವ ವಿವಾಹಿತರು ಆತ್ಮಹತ್ಯೆ ಮಾಡಿಕೊಂಡಿರೋದಾಗಿ ಹೇಳಲಾಗುತ್ತಿದೆ. ಮನೋಜ್ ಹಾಗೂ ರಾಖಿ ಇಬ್ಬರೇ ಮನೆಯಲ್ಲಿದ್ದಾಗ ಈ ಘಟನೆ ನಡೆದಿದೆ.
ಊರಿಗೆ ಹೋಗಿದ್ದಂತ ಮನೋಜ್ ಕುಮಾರ್ ತಾಯಿ ಇಂದು ಮನೆಗೆ ವಾಪಾಸ್ ಆದಾಗ ಈ ಘಟನೆ ಬೆಳಕಿಗೆ ಬಂದಿದೆ. ನವ ವಿವಾಹಿತ ದಂಪತಿ ಆತ್ಮಹತ್ಯೆಗೆ ಕಾರಣ ಏನೆಂದು ತಿಳಿದು ಬಂದಿಲ್ಲ. ಈ ಸಂಬಂಧ ವಿಜಯಪುರದ ಜಲನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
‘ಶಾಲಾ ವಿದ್ಯಾರ್ಥಿ’ಗಳೇ ಗಮನಿಸಿ: ಇಲ್ಲಿದೆ ಸುಲಭ ‘ಗಣಿತ ವಿಷಯ ಕಲಿಕೆ’ಗೆ ಆಟದೊಂದಿಗೆ ಪಾಠದ ‘ಆ್ಯಪ್’
`BMTC’ ಎಲೆಕ್ಟ್ರಿಕ್ ಬಸ್ಸುಗಳ ಕಾರ್ಯಾಚರಣೆಯಲ್ಲಿ ವ್ಯತ್ಯಯ : ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಖಡಕ್ ವಾರ್ನಿಂಗ್