ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ಬಳಿಯ ಬೈಸರನ್ ಕಣಿವೆಯಲ್ಲಿ ರಾಜಸ್ಥಾನದ ಪ್ರವಾಸಿಗರ ಗುಂಪಿನ ಮೇಲೆ ದಾಳಿ ನಡೆಸಲಾಯಿತು. ಕಣಿವೆಯ ಮೇಲ್ಭಾಗದಲ್ಲಿ ಗುಂಡಿನ ದಾಳಿ ನಡೆದಿದ್ದು, ಇವಂದು ಗುಂಡಿನ ದಾಳಿಯಲ್ಲಿ ಇದುವರೆಗೂ 20ಕ್ಕೂ ಹೆಚ್ಚು ಪ್ರವಾಸಿಗರು ಸಾವನ್ನಪ್ಪಿದ್ದು ಸಾವಿನ ಸಂಖ್ಯೆ ಮತ್ತಷ್ಟು ಏರಿಕೆ ಆಗುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
ಹೌದು ಉಗ್ರರ ಗುಂಡಿನ ದಾಳಿಯಲ್ಲಿ ಸುಮಾರು 20ಕ್ಕೂ ಹೆಚ್ಚು ಪ್ರವಾಸಿಗರು ಮೃತಪಟ್ಟಿದ್ದಾರೆ ಎನ್ನಲಾಗುತ್ತಿದ್ದು ಕಾಶ್ಮೀರದಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ಇಂದು ಉಗ್ರರು ಭೀಕರ ಗುಂಡಿನ ದಾಳಿ ನಡೆಸಿದ್ದಾರೆ. ಇದೇ ಸಂದರ್ಭದಲ್ಲಿ ಹನಿಮೂನ್ ಗೆ ಎಂದು ತೆರಳಿದ್ದ ನವ ದಂಪತಿಗಳ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ.
ಉಗ್ರರ ಗುಂಡಿನ ದಾಳಿಗೆ ಹನುಮೂನ್ ಗೆ ಎಂದು ಬಂದಿದ್ದ ನವವಿವಾಹಿತ ಸಾವನಪ್ಪಿದ್ದಾನೆ. ಎಂದು ತಿಳಿದು ಬಂದಿದೆ. ಮುಸ್ಲಿಂ ಅಲ್ಲ ಎಂದು ತಿಳಿಯುತ್ತಿದ್ದಂತೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಹನಿಮೂನ್ ಗೆ ಎಂದು ಬಂದು ಉಗ್ರರ ಗುಂಡಿನ ದಾಳಿಗೆ ಪತಿ ಬಲಿಯಾಗಿದ್ದಾನೆ. ಗಂಡನ ಶವದ ಮುಂದೆ ಪತ್ನಿ ಕುಳಿತಿರುವ ಫೋಟೋ ಇದೀಗ ವೈರಲ್ ಆಗಿದೆ.