Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಕುತ್ತಿಗೆಯ ನರಕ್ಕೆ ಸಣ್ಣ ಒತ್ತಡ ಬಿದ್ದರೂ ಜೀವಕ್ಕೆ ಅಪಾಯ’: ದೆಹಲಿ ಸಿಎಂ ರೇಖಾ ಗುಪ್ತಾ ಹಲ್ಲೆ ಪ್ರಕರಣದಲ್ಲಿ ಹೈಕೋರ್ಟ್ ಗಂಭೀರ ಎಚ್ಚರಿಕೆ!

10/04/2026 8:05 PM

ಶಿವಮೊಗ್ಗ: ಉಳವಿಯ ಚಪ್ಪಲಿ ಅಂಗಡಿ ಮಾಲೀಕ ರಾಮು ಪುತ್ರಿ ಸ್ಪೂರ್ತಿ ಅದ್ಭುತ ಸಾಧನೆ: ಪಿಯು ಪರೀಕ್ಷೆಯಲ್ಲಿ 600ಕ್ಕೆ 541 ಅಂಕ

10/04/2026 8:00 PM

ದೆಹಲಿಯ ಇರಾನ್ ರಾಯಭಾರ ಕಚೇರಿಯಲ್ಲಿ ಧ್ವಜ ಹಾರಿಸಿ ಕಂಬನಿ: ಖಮೇನಿ ನಿಧನದ 40ನೇ ದಿನದ ಸ್ಮರಣೆ!

10/04/2026 7:59 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಪತ್ರಿಕಾ ವಿತರಕರು-ಏಜೆಂಟರು ಪತ್ರಿಕೋದ್ಯಮದ ಬೆನ್ನುಮೂಳೆ: ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್
KARNATAKA

ಪತ್ರಿಕಾ ವಿತರಕರು-ಏಜೆಂಟರು ಪತ್ರಿಕೋದ್ಯಮದ ಬೆನ್ನುಮೂಳೆ: ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್

By kannadanewsnow0928/08/2025 2:50 PM

ಮೈಸೂರು: ಪತ್ರಿಕಾ ವಿತರಕರು ಪತ್ರಿಕೆಗಳನ್ನು ವಿತರಿಸುವ ಜೊತೆಗೆ ಚಂದಾ ಹಣ ಸಂಗ್ರಹಿಸುವ ಕೆಲಸವನ್ನೂ ಮಾಡುತ್ತಾ ತಮ್ಮ ಆದಾಯದ ಜೊತೆಗೆ‌ ಸಂಸ್ಥೆಗೂ ಆದಾಯ ತಂದುಕೊಡುವ ಮೂಲಕ ರಾಜ್ಯದ ಆರ್ಥಿಕತೆಯಲ್ಲೂ ತೊಡಗಿಸಿಕೊಂಡಿದ್ದಾರೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ‌ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅಭಪ್ರಾಯಪಟ್ಟರು.

ವಿಶ್ವ ಪತ್ರಿಕಾ ವಿತರಕರ ದಿನದ ಅಂಗವಾಗಿ ಏರ್ಪಡಿಸಿದ್ದ ಪತ್ರಿಕಾ ವಿತರಕರ ಸಮ್ಮೇಳನ‌ ಉದ್ಘಾಟಿಸಿ ಮಾತನಾಡಿದರು.

ಕೊಳಚೆ ಪ್ರದೇಶಗಳಿಂದ ವಿಧಾನಸೌಧದವರೆಗೂ ವ್ಯಾಪಿಸಿರುವ ಪತ್ರಿಕಾ ವಿತರಕರು ಮುದ್ರಣ ಮಾಧ್ಯಮದ ಬೆನ್ನುಮೂಳೆ ಮತ್ತು ಪತ್ರಿಕಾ ಸಂಸ್ಥೆಗಳ ನರಮಂಡಲ ಆಗಿ ಕಲಸ ಮಾಡುತ್ತಾರೆ. ಪತ್ರಿಕೆಯ ಚಂದಾ ಹಣ ಸಂಗ್ರಹಿಸುವ ಜೊತೆಗೆ ಸಣ್ಣ ಜಾಹಿರಾತುದಾರರನ್ನೂ ಸಂಸ್ಥೆಯ ಜೊತೆ ಬೆಸೆಯುತ್ತಾರೆ. (ಪತ್ರಿಕೆಗಳ ಒಳಗೆ ಜಾಹಿರಾತು ಕರಪತ್ರ ಹಾಕುವ insertion) ಎಂದರು.

ಸುದ್ದಿಗಳು, ಪತ್ರಿಕೆಗಳು ಹಳತಾಗುವ ಮೊದಲು, ಓದುಗರ ಕೈಗೆ ಕಾಫಿ ಲೋಟ ಬರುವ ಮೊದಲು ಪತ್ರಿಕಾ ವಿತರಕರು ಓದುಗರ ಮನೆ ಬಾಗಿಲಿಗೆ ತಲುಪುತ್ತಾರೆ. ಇದಕ್ಕಾಗಿ ಕೋಳಿ ಕೂಗುವ ಮೊದಲೇ ಮನೆಯಿಂದ ಎದ್ದು ಹೊರಡುತ್ತಾರೆ. ನಾವು ಪತ್ರಕರ್ತರು ಬೆಚ್ಚಗೆ ಮಲಗಿರುವಾಗ ಮಳೆ, ಚಳಿ ಮತ್ತು ಪ್ರತೀಕೂಲ ವಾತಾವರಣ ಲೆಕ್ಕಿಸದೆ ಸೈಕಲ್ ತುಳಿಯಬೇಕಿದೆ ಎಂದರು.

ಒಬ್ಬ ಪತ್ರಿಕಾ ವಿತರಕನಿಗೆ ತಿಂಗಳಿಗೆ ಸಿಗುವುದು ಕೆಲವೇ ಸಾವಿರ ರೂಪಾಯಿ ಇರಬಹುದು. ಆದರೆ, ಸಾವಿರಾರು ಪತ್ರಿಕಾ ವಿತರಕರು ಸಂಗ್ರಹಿಸುವ ಚಂದಾ ಹಣ ಮತ್ತು ಸಣ್ಣ ಪ್ರಮಾಣದ ಜಾಹಿರಾತು ಹಣ ಎಲ್ಲಾ ಒಟ್ಟು ಲೆಕ್ಕ ಹಾಕಿದರೆ ಹತ್ತಾರು ಕೋಟಿ‌ ಆಗುತ್ತದೆ. ಹೀಗಾಗಿ ಪತ್ರಿಕೋದ್ಯಮದ ಮತ್ತು ರಾಜ್ಯದ ಆರ್ಥಿಕ ಚಟುವಟಿಕೆಯಲ್ಲೂ ತೊಡಗಿಸಿಕೊಂಡಿರುವ ಸಮುದಾಯವಾಗಿದೆ ಎನ್ನುವುದನ್ನು ನಾವು ಮರೆಯಬಾರದು ಎಂದರು.

ಅಸಂಘಟಿತವಾಗಿಯೇ ಉಳಿದಿದ್ದ ವಿತರಕ‌ ಸಮುದಾಯ ಒಟ್ಟಿಗೇ ಸಂಘಟಿತರಾಗುವ ಅನಿವಾರ್ಯತೆ ಸೃಷ್ಟಿಯಾಗಿದ್ದು ಕೋವಿಡ್ ಸಮಯದಲ್ಲಿ ಸದಾ ಪತ್ರಿಕಾ ಸಂಸ್ಥೆಗಳ ಪಾಲಿಗೆ ಅನಾಥ ರಕ್ಷಕರಾಗುವ ವಿತರಕರು, ಕೋವಿಡ್ ಸಂದರ್ಭದಲ್ಲಿ ತಾವೇ ಸ್ವತಃ ಅನಾಥರಾದರು. ಈ ಹೊತ್ತಲ್ಲಿ ಶಂಬುಲಿಂಗ ಅವರು ವಿತರಕರ ಸಂಘ ಮತ್ತು ಸಂಘಟನೆಗೆ ಜೀವ ತುಂಬಿದರು ಎಂದು ಮೆಚ್ಚುಗೆ ಸೂಚಿಸಿದರು.

ಸಂಘಟನೆ ಮೊದಲ ಹೆಜ್ಜೆ. ಸಂಘಟನೆ ಬೆನ್ನ ಹಿಂದೆಯೇ ನಿಮ್ಮ ಹಕ್ಕುಗಳಿಗೂ ಜೀವ ಬರುತ್ತದೆ. ಬಳಿಕ ಸರ್ಕಾರದ ಸವಲತ್ತುಗಳು ನಿಮ್ಮ ಹಕ್ಕು ಆಗಿ ಒಂದೊಂದಾಗಿ ಜಾರಿ ಆಗುತ್ತವೆ. ಜೊತೆಗೆ ಕೆಲಸದ ಅಭದ್ರತೆಯೂ ಕಡಿಮೆ ಆಗುತ್ತದೆ ಎಂದರು.

ವಿತರಕ ಸಮುದಾಯದ ಪರವಾಗಿ ಈ ಸಮ್ಮೇಳನದಲ್ಲಿ ಕೆಲವೊಂದು ಬೇಡಿಕೆಗಳನ್ನು ಇಡಲಾಗಿದೆ. ಅವೆಲ್ಲವನ್ನೂ ಪರಿಶೀಲಿಸಿ, ಹಂತ ಹಂತವಾಗಿ ಕ್ರಮ ಕೈಗೊಳ್ಳುವ ಸಾಧ್ಯತೆಗಳ ಬಗ್ಗೆ ಚರ್ಚಿಸುತ್ತೇನೆ. ಪತ್ರಿಕಾ ವಿತರಕರಿಗೆ ಸರ್ಕಾರದ ಸವಲತ್ತುಗಳು ಸಿಗಬೇಕು ಎನ್ನುವುದು ಒಂದು‌ ಕಡೆ ಇರಲಿ. ಜೊತೆಗೆ ಪತ್ರಿಕಾ ಸಂಸ್ಥೆಗಳೂ, ಇನ್ನಿತರೆ ಉದ್ಯಮಿಗಳ ಮೂಲಕ CSR ನಿಧಿಯಿಂದ ಈ ಸಮುದಾಯಕ್ಕೆ ಅನುಕೂಲ ಕಲ್ಪಿಸುವ ಅವಕಾಶಗಳೂ ಇವೆ. ಈ ದಿಕ್ಕಿನಲ್ಲೂ‌ ಗಮನ ಹರಿಸುವ ಅಗತ್ಯವಿದೆ ಎಂದರು.‌

ಸುತ್ತೂರು ಶ್ರೀ ಮಠದ ಜಗದ್ಗುರು ಶಿವರಾತ್ರಿ ದೇಶೀಕೇಂದ್ರ ಮಹಾಸ್ವಾಮೀಜಿ ಅವರ ದಿವ್ಯ ಸಾನ್ನಿಧ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ KUWJ ಅಧ್ಯಕ್ಷರಾದ ಶಿವಾನಂದ ತಗಡೂರು ಮತ್ತು ಪತ್ರಿಕಾ ವಿತರಕರ ಮಹಾ ಸಂಘದ ಅಧ್ಯಕ್ಷರಾದ ಶಂಬುಲಿಂಗ ಅವರು ಸೇರಿ ಹಲವು ಮಹನೀಯರು ಉಪಸ್ಥಿತರಿದ್ದರು.

ವಾರಂಟಿಯಿದ್ದರೂ ರಿಪೇರಿಗೆ ಹಣ ಕೇಳಿದ ‘ಓಲಾ ಸರ್ವಿಸ್ ಸೆಂಟರ್’ಗೆ 67,348 ಪರಿಹಾರ ನೀಡಲು ಕೋರ್ಟ್ ಆದೇಶ

BREAKING : ಧರ್ಮಸ್ಥಳ ಕೇಸ್ ಗೆ ಬಿಗ್ ಟ್ವಿಸ್ಟ್ : ಮಾಸ್ಕ್ ಮ್ಯಾನ್ `ಚಿನ್ನಯ್ಯ’ ವಿರುದ್ಧ ಸೌಜನ್ಯಾ ತಾಯಿ `SIT’ಗೆ ದೂರು.!

Share. Facebook Twitter LinkedIn WhatsApp Email

Related Posts

ಶಿವಮೊಗ್ಗ: ಉಳವಿಯ ಚಪ್ಪಲಿ ಅಂಗಡಿ ಮಾಲೀಕ ರಾಮು ಪುತ್ರಿ ಸ್ಪೂರ್ತಿ ಅದ್ಭುತ ಸಾಧನೆ: ಪಿಯು ಪರೀಕ್ಷೆಯಲ್ಲಿ 600ಕ್ಕೆ 541 ಅಂಕ

10/04/2026 8:00 PM2 Mins Read

ಏ.15ರಂದು ಆದಿಚುಂಚನಗಿರಿಗೆ ಪ್ರಧಾನಮಂತ್ರಿಗಳ ಆಗಮನ: ಮಂಡ್ಯ ಡಿಸಿ ಕುಮಾರ ಅಧಿಕಾರಿಗಳಿಗೆ ಈ ಸೂಚನೆ

10/04/2026 7:35 PM2 Mins Read

ಕಲಿಯುವಿಕೆಗೆ ವಯಸ್ಸಿಲ್ಲ ಅಡ್ಡಿ: ಮಂಗಳೂರಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತಾಯಿ-ಮಗಳ ಪಾಸ್!

10/04/2026 7:01 PM1 Min Read
Recent News

‘ಕುತ್ತಿಗೆಯ ನರಕ್ಕೆ ಸಣ್ಣ ಒತ್ತಡ ಬಿದ್ದರೂ ಜೀವಕ್ಕೆ ಅಪಾಯ’: ದೆಹಲಿ ಸಿಎಂ ರೇಖಾ ಗುಪ್ತಾ ಹಲ್ಲೆ ಪ್ರಕರಣದಲ್ಲಿ ಹೈಕೋರ್ಟ್ ಗಂಭೀರ ಎಚ್ಚರಿಕೆ!

10/04/2026 8:05 PM

ಶಿವಮೊಗ್ಗ: ಉಳವಿಯ ಚಪ್ಪಲಿ ಅಂಗಡಿ ಮಾಲೀಕ ರಾಮು ಪುತ್ರಿ ಸ್ಪೂರ್ತಿ ಅದ್ಭುತ ಸಾಧನೆ: ಪಿಯು ಪರೀಕ್ಷೆಯಲ್ಲಿ 600ಕ್ಕೆ 541 ಅಂಕ

10/04/2026 8:00 PM

ದೆಹಲಿಯ ಇರಾನ್ ರಾಯಭಾರ ಕಚೇರಿಯಲ್ಲಿ ಧ್ವಜ ಹಾರಿಸಿ ಕಂಬನಿ: ಖಮೇನಿ ನಿಧನದ 40ನೇ ದಿನದ ಸ್ಮರಣೆ!

10/04/2026 7:59 PM

ಎಲೆಕ್ಟ್ರಿಕ್ ಕಾರಿಗೂ ದಂಡ ಹಾಕಿದ ಪೊಲೀಸರು! ಟಾಟಾ ತಿಯಾಗೊ ಇವಿಗೆ ‘ಮಾಲಿನ್ಯ ಪತ್ರ’ ಕೇಳಿ ಪೇಚಿಗೆ ಸಿಲುಕಿದ ಇಲಾಖೆ!

10/04/2026 7:49 PM
State News
KARNATAKA

ಶಿವಮೊಗ್ಗ: ಉಳವಿಯ ಚಪ್ಪಲಿ ಅಂಗಡಿ ಮಾಲೀಕ ರಾಮು ಪುತ್ರಿ ಸ್ಪೂರ್ತಿ ಅದ್ಭುತ ಸಾಧನೆ: ಪಿಯು ಪರೀಕ್ಷೆಯಲ್ಲಿ 600ಕ್ಕೆ 541 ಅಂಕ

By kannadanewsnow0910/04/2026 8:00 PM KARNATAKA 2 Mins Read

ಶಿವಮೊಗ್ಗ: ಛಲವೊಂದಿದ್ದರೆ ಎಂತಹ ಕಷ್ಟದ ಪರಿಸ್ಥಿತಿಯಲ್ಲೂ ಯಶಸ್ಸು ಗಳಿಸಬಹುದು ಎಂಬುದನ್ನು ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ವಿದ್ಯಾರ್ಥಿನಿ ಸ್ಪೂರ್ತಿ ಆರ್.…

ಏ.15ರಂದು ಆದಿಚುಂಚನಗಿರಿಗೆ ಪ್ರಧಾನಮಂತ್ರಿಗಳ ಆಗಮನ: ಮಂಡ್ಯ ಡಿಸಿ ಕುಮಾರ ಅಧಿಕಾರಿಗಳಿಗೆ ಈ ಸೂಚನೆ

10/04/2026 7:35 PM

ಕಲಿಯುವಿಕೆಗೆ ವಯಸ್ಸಿಲ್ಲ ಅಡ್ಡಿ: ಮಂಗಳೂರಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತಾಯಿ-ಮಗಳ ಪಾಸ್!

10/04/2026 7:01 PM

BREAKING: ಕೆಇಎಯಿಂದ ಕರ್ನಾಟಕ ‘KCET-2026ರ ಪರೀಕ್ಷೆ’ಗೆ ಪ್ರವೇಶ ಪತ್ರ ಬಿಡುಗಡೆ; ಹೀಗೆ ಡೌನ್ ಲೋಡ್ ಮಾಡಿ

10/04/2026 6:41 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.