ನವದೆಹಲಿ : ದೇಶದ ಹಲವು ರಾಜ್ಯಗಳಲ್ಲಿ ಚಳಿ ವಿಪರೀತವಾಗಿ ಹೆಚ್ಚಾಗುತ್ತಿದೆ. ಮುಂದಿನ 24 ಗಂಟೆಗಳಲ್ಲಿ ವಾಯುವ್ಯ ಭಾರತದಲ್ಲಿ ದಟ್ಟವಾದ ಮಂಜಿನ ಪರಿಸ್ಥಿತಿ ಇರಲಿದೆ. 3 ರಿಂದ 4 ದಿನಗಳವರೆಗೆ ದಟ್ಟವಾದ ಮಂಜು ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ.
ಚಳಿಯ ಜೊತೆಗೆ ಹಗುರವಾದ ಗಾಳಿ ಇರಲಿದೆ ಎಂದೇಳಿರುವ ಐಎಂಡಿ, ಹರಿಯಾಣ, ಚಂಡೀಗಢ, ಪಂಜಾಬ್ ಮತ್ತು ದೆಹಲಿ, ಪಶ್ಚಿಮ ಉತ್ತರ ಪ್ರದೇಶದ ಹಲವು ಭಾಗಗಳು ಮತ್ತು ಉತ್ತರ ರಾಜಸ್ಥಾನದ ಮೇಲೆ ಮುಂದಿನ 24 ಗಂಟೆಗಳಲ್ಲಿ ದಟ್ಟವಾದ ಮಂಜು ಮುಂದುವರಿಯುವ ಸಾಧ್ಯತೆಯಿದೆ ಎಂದು ಹೇಳಿದೆ.
ಇದಲ್ಲದೆ, ಮುಂದಿನ ಮೂರು ದಿನಗಳಲ್ಲಿ ಅರುಣಾಚಲ ಪ್ರದೇಶ, ಅಸ್ಸಾಂ ಮತ್ತು ಮೇಘಾಲಯ ಮತ್ತು ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರದಲ್ಲಿ ದಟ್ಟವಾದ ಮಂಜು ಇರುತ್ತದೆ ಎಂದು IMD ತಿಳಿಸಿದೆ.
Viral Video : ಕೊರೊನಾದಿಂದ ಪಾರಾಗಲು ಚೀನಾ ದಂಪತಿಗಳ ಮಸ್ತ್ ಪ್ಲ್ಯಾನ್, ಮಾಡಿದ್ದೇನು ಗೊತ್ತಾ.?
ಪ್ರಧಾನಿ ಮೋದಿ ಸಹೋದರನ ಕಾರು ಅಪಘಾತ : ಗಾಯಾಳುಗಳ ಆರೋಗ್ಯ ಸ್ಥಿತಿ ಬಗ್ಗೆ ಸಚಿವ ಸುಧಾಕರ್ ಮಾಹಿತಿ