Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಭಾರತ ತೈಲ ಖರೀದಿ ಪುನರ್ವಿಮರ್ಶಿಸುತ್ತದೆ ಎಂದು ನಂಬಲು ಯಾವುದೇ ಕಾರಣವಿಲ್ಲ : ರಷ್ಯಾದ ವಿದೇಶಾಂಗ ಸಚಿವ

04/02/2026 8:12 PM

BREAKING : ಪಾಕಿಸ್ತಾನದಲ್ಲಿ ಭದ್ರತಾ ಪಡೆಗಳ ಮೇಲೆ ಟಿಟಿಪಿ ದಾಳಿ, ಕ್ಯಾಪ್ಟನ್ ಸೇರಿದಂತೆ 3 ಸಾವು

04/02/2026 8:04 PM

‘ಯಾವುದೇ ಸಮಸ್ಯೆ ಪತ್ತೆಯಾಗಿಲ್ಲ’ : ಬೋಯಿಂಗ್ 787 ಫ್ಲೀಟ್’ನ ಇಂಧನ ನಿಯಂತ್ರಣ ಸ್ವಿಚ್ ಮರು ಪರಿಶೀಲನೆ ಬಳಿಕ ಏರ್ ಇಂಡಿಯಾ ಸ್ಪಷ್ಟನೆ

04/02/2026 7:54 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮುಂದಿನ ಒಲಂಪಿಕ್ಸ್ ಪದಕ ವಿಜೇತರಿಗೆ ರಾಜ್ಯ ಸರ್ಕಾರದಿಂದ 6 ಕೋಟಿ ರೂ. ನಗದು ಬಹುಮಾನ: CM ಸಿದ್ದರಾಮಯ್ಯ
KARNATAKA

ಮುಂದಿನ ಒಲಂಪಿಕ್ಸ್ ಪದಕ ವಿಜೇತರಿಗೆ ರಾಜ್ಯ ಸರ್ಕಾರದಿಂದ 6 ಕೋಟಿ ರೂ. ನಗದು ಬಹುಮಾನ: CM ಸಿದ್ದರಾಮಯ್ಯ

By kannadanewsnow0722/09/2025 6:53 PM

ಮೈಸೂರು: ಮುಂದಿನ ಒಲಂಪಿಕ್ಸ್ ಪದಕ ವಿಜೇತರಿಗೆ ಕರ್ನಾಟಕ ಸರ್ಕಾರ 6 ಕೋಟಿ ರೂ. ನಗದು ಬಹುಮಾನ ನೀಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ರಾಜ್ಯ ದಸರಾ ಸಿಎಂ ಕಪ್ ಕ್ರೀಡಾಕೂಟ ವನ್ನು ಉದ್ಘಾಟಿಸಿ ಮಾತನಾಡಿದರು.

ಈ ಕ್ರೀಡಾಕೂಟದಲ್ಲಿ ಒಂದು ವಿಭಾಗದಿಂದ 720 ಕ್ರೀಡಾಪಟುಗಳಂತೆ 5 ವಿಭಾಗಗಳಿಂದ ಒಟ್ಟು 3600 ಕ್ರೀಡಾಪಟುಗಳು ಭಾಗವಹಿಸುತ್ತಿದ್ದಾರೆ. ಕ್ರೀಡಾಕೂಟದಲ್ಲಿ ಭಾಗವಹಿಸುವ ಎಲ್ಲಾ ಕ್ರೀಡಾಪಟುಗಳಿಗೆ ಶುಭಕೋರಿದ ಮುಖ್ಯಮಂತ್ರಿಗಳು, ಸೋಲುಗೆಲುವುಗಳಿಗಿಂತ, ಕ್ರೀಡಾಮನೋಭಾವ ಮುಖ್ಯ. ಇಂದು ಚಾಮುಂಡಿವಿಹಾರ ಕ್ರೀಡಾಂಗಣದ ಗ್ಯಾಲರಿ ಹಾಗೂ ಈಜುಕೊಳಗಳಿಗೆ ಅತ್ಯಾಧುನಿಕ ಟೆನ್ಸೈಲ್ ಮೆಂಬ್ರೇನ್ ಛಾವಣಿ ಅಳವಡಿಸುವ ಮತ್ತು ಫುಟ್ಬಾಲ್ ಅಂಕಣ ನಿರ್ಮಿಸುವ ಕಾಮಗಾರಿಯನ್ನು ರೂ. 20.78 ಕೋಟಿ ವೆಚ್ಚದಲ್ಲಿ ಕೈಗೊಳ್ಳಲಾಗುತ್ತಿದೆ ಎಂದರು.

ವಿನೇಶ್ ಫೋಗಟ್ ಅವರು ಅಂತರಾಷ್ಟ್ರೀಯ ಮಟ್ಟದ ಕ್ರೀಡಾಪಟು ಸಮಾರಂಭದಲ್ಲಿ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ
ಪ್ರಶಸ್ತಿ ಪುರಸ್ಕೃತ ಅಂತರರಾಷ್ಟ್ರೀಯ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್ ಭಾಗವಹಿಸಿರುವುದು ವಿಶೇಷ. ಕುಸ್ತಿ ಕೇವಲ ಪುರುಷರ ಕ್ರೀಡೆ ಎಂದು ಪರಿಗಣಿಸಲಾಗಿದ್ದ ಕಾಲದಲ್ಲಿ ಸಾಮಾಜಿಕ ಅಡೆತಡೆಗಳು ಮತ್ತು ಹಿನ್ನಡೆಗಳನ್ನು ಅನುಭವಿಸಿದರೂ ಅಂತರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳಾಗಿದ್ದಾರೆ. ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಭಾಗವಹಿಸಿ, ಭಾರತದ ಕೀರ್ತಿ ಮೆರೆದ ವಿನೇಶ್ ಅವರು ಹರಿಯಾಣ ರಾಜ್ಯದಲ್ಲಿ ಶಾಸಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ ಎಂದರು.

ಕ್ರೀಡಾಪಟುಗಳಿಗೆ ಸರ್ಕಾರದ ನೆರವು: ಸರ್ಕಾರ ಕ್ರೀಡಾಪಟುಗಳಿಗೆ ಎಲ್ಲ ರೀತಿಯ ಸಹಕಾರವನ್ನು ನೀಡುತ್ತಿದೆ. ಮುಂದಿನ ಒಲಿಂಪಿಕ್ಸ್ಗೆ ತರಬೇತಿ ಪಡೆಯಲು ರಾಜ್ಯದ 60 ಅತ್ಯಂತ ಪ್ರತಿಭಾನ್ವಿತ ಕ್ರೀಡಾಪಟುಗಳಿಗೆ ವಾರ್ಷಿಕ ತಲಾ ರೂ 10.00 ಲಕ್ಷ ಸಹಾಯಧನ ನೀಡಿ ತರಬೇತಿ ನೀಡಲಾಗುವುದು. ಅಲ್ಲದೇ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಪದಕವಿಜೇತ ಕ್ರೀಡಾಪಟುಗಳಿಗೆ ಸರ್ಕಾರ 6 ಕೋಟಿ ರೂ.ಗಳ ನಗದು ಬಹುಮಾನವನ್ನೂ ನೀಡಲಿದೆ. ಕ್ರೀಡಾಪಟುಗಳಿಗೆ ಸರ್ಕಾರಿ ಉದ್ಯೋಗ ಒದಗಿಸಲು ಎಲ್ಲ ಇಲಾಖೆಗಳಲ್ಲಿ ಶೇ.2 ರಷ್ಟು ಮೀಸಲಾತಿಯನ್ನೂ, ಹಾಗೂ ಪೊಲೀಸ್ ಇಲಾಖೆಯಲ್ಲಿ 2 ರಿಂದ ಶೇ.3 ರಷ್ಟು ಕ್ರೀಡಾಮೀಸಲಾತಿಯನ್ನು ನೀಡಲಾಗುತ್ತಿದೆ ಎಂದರು.
ಸದೃಢ ಆರೋಗ್ಯಕ್ಕೆ ಕ್ರೀಡೆ-ವ್ಯಾಯಾಮ ಇಂದಿನ ಯುವಜನತೆ ಶಿಕ್ಷಣ ಹಾಗೂ ಕ್ರೀಡೆಗೆ ಹೆಚ್ಚು ಒತ್ತು ನೀಡಿದರೆ ಅವರ ದೈಹಿಕ ಹಾಗೂ ಮಾನಸಿಕ ವಿಕಸನಕ್ಕೆ ಸಹಕಾರಿಯಾಗಿದೆ. ಸದೃಢ ಆರೋಗ್ಯಕ್ಕೆ ಕ್ರೀಡೆ ಹಾಗೂ ವ್ಯಾಯಾಮ ಅತ್ಯಗತ್ಯ ಎಂದರು.

Government will give Rs 6 crore cash prize to next Olympics medal winners - Chief Minister Siddaramaiah ಮುಂದಿನ ಒಲಂಪಿಕ್ಸ್ ಪದಕ ವಿಜೇತರಿಗೆ ರಾಜ್ಯ ಸರ್ಕಾರದಿಂದ 6 ಕೋಟಿ ರೂ. ನಗದು ಬಹುಮಾನ: CM ಸಿದ್ದರಾಮಯ್ಯ
Share. Facebook Twitter LinkedIn WhatsApp Email

Related Posts

ಫೆ.26, 27 ಎರಡು ದಿನಗಳ ಕಾಲ ರಸ್ತೆ ಸಂಚಾರ ಗಣತಿ ಕಾರ್ಯ ಆರಂಭ

04/02/2026 7:28 PM1 Min Read

BIG NEWS : ವಿಧಾನಸಭೆಯಲ್ಲಿ ‘ಜಿ ರಾಮ್ ಜಿ’ ಕಾಯ್ದೆ ವಿರುದ್ಧದ ನಿರ್ಣಯ ಅಂಗೀಕಾರ

04/02/2026 7:24 PM1 Min Read

BREAKING : ಫೆ.9 ರಿಂದ ನಮ್ಮ ಮೆಟ್ರೋ ಪ್ರಯಾಣದ ಪರಿಷ್ಕೃತ ದರ ಜಾರಿ | Metro Ticket Prize Hike

04/02/2026 7:04 PM1 Min Read
Recent News

ಭಾರತ ತೈಲ ಖರೀದಿ ಪುನರ್ವಿಮರ್ಶಿಸುತ್ತದೆ ಎಂದು ನಂಬಲು ಯಾವುದೇ ಕಾರಣವಿಲ್ಲ : ರಷ್ಯಾದ ವಿದೇಶಾಂಗ ಸಚಿವ

04/02/2026 8:12 PM

BREAKING : ಪಾಕಿಸ್ತಾನದಲ್ಲಿ ಭದ್ರತಾ ಪಡೆಗಳ ಮೇಲೆ ಟಿಟಿಪಿ ದಾಳಿ, ಕ್ಯಾಪ್ಟನ್ ಸೇರಿದಂತೆ 3 ಸಾವು

04/02/2026 8:04 PM

‘ಯಾವುದೇ ಸಮಸ್ಯೆ ಪತ್ತೆಯಾಗಿಲ್ಲ’ : ಬೋಯಿಂಗ್ 787 ಫ್ಲೀಟ್’ನ ಇಂಧನ ನಿಯಂತ್ರಣ ಸ್ವಿಚ್ ಮರು ಪರಿಶೀಲನೆ ಬಳಿಕ ಏರ್ ಇಂಡಿಯಾ ಸ್ಪಷ್ಟನೆ

04/02/2026 7:54 PM

ಕರ್ನಾಟಕವನ್ನು ರಕ್ಷಣೆ ಮಾಡಿ ಎಂದು ಕೈಮುಗಿದು ಬೇಡುತ್ತೇನೆ : ರಾಜ್ಯಸಭೆಯಲ್ಲಿ ಮಾಜಿ ಪ್ರಧಾನಿ HD ದೇವೇಗೌಡ ಗದ್ಗದಿತ!

04/02/2026 7:46 PM
State News
KARNATAKA

ಫೆ.26, 27 ಎರಡು ದಿನಗಳ ಕಾಲ ರಸ್ತೆ ಸಂಚಾರ ಗಣತಿ ಕಾರ್ಯ ಆರಂಭ

By kannadanewsnow0504/02/2026 7:28 PM KARNATAKA 1 Min Read

ಬಳ್ಳಾರಿ : ಕರ್ನಾಟಕ ರಾಜ್ಯದ ಲೋಕೋಪಯೋಗಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ರಾಜ್ಯ ಹೆದ್ದಾರಿಗಳು ಹಾಗೂ ಜಿಲ್ಲಾ ಮುಖ್ಯ ರಸ್ತೆಗಳ ಮೇಲೆ…

BIG NEWS : ವಿಧಾನಸಭೆಯಲ್ಲಿ ‘ಜಿ ರಾಮ್ ಜಿ’ ಕಾಯ್ದೆ ವಿರುದ್ಧದ ನಿರ್ಣಯ ಅಂಗೀಕಾರ

04/02/2026 7:24 PM

BREAKING : ಫೆ.9 ರಿಂದ ನಮ್ಮ ಮೆಟ್ರೋ ಪ್ರಯಾಣದ ಪರಿಷ್ಕೃತ ದರ ಜಾರಿ | Metro Ticket Prize Hike

04/02/2026 7:04 PM

ವಸಂತ್ ನಾಯಕ ಹತ್ಯೆ ಪ್ರಕರಣ : ಜ್ಯೋತಿಷಿ ಕಮಲಾಕರ್ ಭಟ್ ಸೇರಿದಂತೆ 7 ಆರೋಪಿಗಳಿಗೆ 8 ದಿನ ನ್ಯಾಯಾಂಗ ಬಂಧನ

04/02/2026 6:13 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.