ಬೆಂಗಳೂರು: ರಾಜ್ಯದಲ್ಲಿ ಅಡಿಕೆ ತೋಟಗಳಲ್ಲಿ ಹಬ್ಬಿರುವ ಎಲೆಚುಕ್ಕೆ ರೋಗದ ಬಗ್ಗೆ ಅಧ್ಯಯನ ನಡೆಸಿ, ಪರಿಹಾರ ಕಂಡುಕೊಳ್ಳಲು ಕೇಂದ್ರ ಸರಕಾರದ ಏಳು ಮಂದಿ ತಜ್ಞರನ್ನು ಒಳಗೊಂಡ ತಜ್ನರ ಸಮಿತಿ ಮುಂದಿನ ವಾರ ರಾಜ್ಯಕ್ಕೆ ಆಗಮಿಸಲಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ( Home Minister Araga Jnanendra ) ತಿಳಿಸಿದ್ದಾರೆ.
ಈ ಬಗ್ಗೆ ಮಾಧ್ಯಮಗಳ ಜತೆ ಇಂದು ಮಾತನಾಡಿರುವ ಸಚಿವರು ಮಲೆನಾಡು ಹಾಗೂ ಕರಾವಳಿ ಭಾಗದ ರೈತರು ಎದುರಿಸುತ್ತಿರುವ ಸಂಕಷ್ಟಕ್ಕೆ ಕೇಂದ್ರ ಸರಕಾರ ತಕ್ಷಣ ಸ್ಪಂದಿಸಿದ್ದು ಅಡಿಕೆ ಬೆಳೆಗೆ ಎದುರಾಗಿರುವ ರೋಗ ನಿವಾರಣೆಗೆ ಸಮಿತಿ ಪರಿಹಾರ ಕಂಡುಕೊಳ್ಳಲು ಸಹಕಾರಿಯಾಗಲಿ ಎಂದು ಹಾರೈಸಿದ್ದಾರೆ.
ಇತ್ತೀಚೆಗಷ್ಟೇ ರಾಜ್ಯ ಅಡಿಕೆ ಬೆಳೆಗಾರರ ಆತಂಕಕ್ಕೆ ಕಾರಣವಾದ ಎಲೆ ಚುಕ್ಕೆ ರೋಗಕ್ಕೆ ಪರಿಹಾರ ಬಯಸಿ ನಿಕಟಪೂರ್ವ ಮುಖ್ಯಮಂತ್ರಿಗಳೂ ಹಾಗೂ ಹಿರಿಯ ಬಿಜೆಪಿ ನಾಯಕರಾದ ಬಿ ಎಸ್ ಯಡಿಯೂರಪ್ಪ ನೇತೃತ್ವದಲ್ಲಿ, ಕೇಂದ್ರ ಕೃಷಿ ಸಚಿವ ನರೆಂದ್ರ ಸಿಂಗ್ ತೋಮರ್ ಅವರಿಗೆ, ನವದೆಹಲಿಯಲ್ಲಿ ನಿಯೋಗ ಭೇಟಿಯಾಗಿ ಮನವಿ ಸಲ್ಲಿಸಿದ್ದು ಕೇಂದ್ರ ಸರಕಾರ ಸಮಸ್ಯೆಯ ಪರಿಹಾರಕ್ಕೆ ಪೂರಕವಾಗಿ ಸ್ಪಂದಿಸಿ ಸಮಿತಿ ರಚಿಸಿದೆ ಎಂದರು.
ರಾಜ್ಯದಲ್ಲಿ ಸುಮಾರು 20 ಸಾವಿರ ಹೆಕ್ಟೇರ್ ಪ್ರದೇಶದ ಅಡಿಕೆ ತೋಟಗಳು ಎಲೆ ಚುಕ್ಕೆ ರೋಗಕ್ಕೆ ಬಲಿಯಾಗಿದ್ದು ಕಾಳ್ಗಿಚ್ಚಿನಂತೆ ಇತರೆಡೆ ಹರಡುತ್ತಿದೆ ಎಂದು ಆತಂಕ ವ್ಯಕ್ತಪಡಿಸಿ ಇದೇ ನವೆಂಬರ್ 22ರಂದು, ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿಗೆ ಆಗಮಿಸುವ, ಸಂಶೋಧನಾ ತಜ್ಞರನ್ನು ಭೇಟಿಯಾಗಿ ಪರಿಸ್ಥಿತಿಯ ಮನವರಿಕೆ ಮಾಡಿಕೊಡುವೆ ಎಂದು ತಿಳಿಸಿದ್ದಾರೆ.
ಮೊದಲ ಬಾರಿಗೆ ‘ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆ’ಗೆ ‘ರೋಬೊಟಿಕ್ ತಂತ್ರಜ್ಞಾನ’ ಪರಿಚಯಿಸಿದ ‘ಫೋರ್ಟಿಸ್ ಆಸ್ಪತ್ರೆ’
ಸರಿಸುಮಾರು ಐವತ್ತು ಲಕ್ಷ ಜನರಿಗೆ ಪ್ರತ್ಯಕ್ಷವಾಗಿ ಹಾಗೂ ಪರೋಕ್ಷವಾಗಿ ಜೀವನೋಪಾಯ ಕಲ್ಪಿಸಿಕೊಟ್ಟಿ ರುವ ಅಡಿಕೆ ಬೆಳೆ ನಮ್ಮ ಭಾಗದ ರೈತರ ಆರ್ಥಿಕ ಜೀವನಾಡಿಯಾಗಿದೆ ಎಂದು ಹೇಳಿದ್ದಾರೆ.
ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕರಾವಳಿ ಭಾಗದಲ್ಲಿ ರೈತ ಸಮುದಾಯದ ಜೀವನಾಡಿಯದ ಅಡಿಕೆ ಬೆಳೆ ಎಲೆ ಚುಕ್ಕೆ ರೋಗದಿಂದ ನಲುಗಿದ್ದು, ನಿಯಂತ್ರಣ ಬಗ್ಗೆ ಕೇಂದ್ರ ಸರಕಾರದ ಗಮನ ಸೆಳೆಯಲು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನೇತೃತ್ವದ ನಿಯೋಗದಲ್ಲಿ, ಶಿವಮೊಗ್ಗ ಸಂಸದ ಬಿ ವೈ ರಾಘವೇಂದ್ರ, ಗೃಹ ಸಚಿವ ಆರಗ ಜ್ಞಾನೇಂದ್ರ, ಬಿಜೆಪಿ ಶಾಸಕ ಹರತಾಳು ಹಾಲಪ್ಪ ಹಾಗೂ ಮಾಜಿ ವಿಧಾನ ಪರಿಷತ್ ಸದಸ್ಯ ಕೃಷ್ಣ ಭಟ್ ಸೇರಿದಂತೆ ಇತರ ಗಣ್ಯರೂ ಇದ್ದರು.