ಬೆಂಗಳೂರು: ಹುದ್ದೆ ಖಾಯಂ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಆರೋಗ್ಯ ಇಲಾಖೆಯ ಎನ್ ಹೆಚ್ ಎಂ ಗುತ್ತಿಗೆ ಶುಶ್ರೂಷಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಈಗಾಗಲೇ ಆಹೋರಾತ್ರಿ ಥರಣಿ ಸತ್ಯಾಗ್ರಹವನ್ನು ನಡೆಸುತ್ತಿದ್ದು, ನಾಳೆಯಿಂದ ಮತ್ತಷ್ಟು ನೌಕರರು ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ. ಹೀಗಾಗಿ ರಾಜ್ಯಾಧ್ಯಂತ ಆರೋಗ್ಯ ಸೇವೆಯಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ.
ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಕರ್ನಾಟಕ ರಾಜ್ಯ ಗುತ್ತಿಗೆ ಶುಕ್ರೂಷಾಧಿಕಾರಿಗಳ ನೌಕರರ ಕ್ಷೇಮಾಭಿವೃದ್ಧಿ ಸಂಘದಿಂದ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಫೆ.24ರಿಂದ ಆಹೋರಾತ್ರಿ ಧರಣಿ ಪ್ರತಿಭಟನೆಯನ್ನು ನಡೆಸಲಾಗುತ್ತಿದೆ. ನಿನ್ನೆಯಿಂದ ಹಗಲು ರಾತ್ರಿ ಫ್ರೀಡಂ ಪಾರ್ಕ್ ನಲ್ಲೇ ಶುಶ್ರೂಷಕರು ಪ್ರತಿಭಟನೆ ನಡೆಸುತ್ತಿದ್ದಾರೆ.
ಸರ್ಕಾರಕ್ಕೆ ಸಲ್ಲಿಸಿದ ಆರೋಗ್ಯ ಇಲಾಖೆ ಎನ್ ಹೆಚ್ ಎಂ ಗುತ್ತಿಗೆ ನೌಕರರ ಮನವಿಯಲ್ಲಿ ಏನಿದೆ?
ರಾಷ್ಟ್ರೀಯ ಆರೋಗ್ಯ ಅಭಿಯಾನದ ಶುಶೂಷಾಧಿಕಾರಿಗಳಾದ ನಾವು ಸಮಾರು 15-20 ವರ್ಷಗಳಿಂದ ಗುತ್ತಿಗೆ ಆಧಾರದಲ್ಲಿ ಅತೀ ಕಡಿಮೆ ವೇತನದಲ್ಲಿ ಯಾವುದೇ ಸೌಲಭ್ಯಗಳಿಲ್ಲದೇ ಖಾಯಂ ನೌಕರರಷ್ಟೇ ಇಲಾಖೆಯು ವಹಿಸದ ಎಲ್ಲಾ ಕೆಲಸಗಳನ್ನು ಚಾಚೂ ತಪ್ಪದೇ ನಿರ್ವಹಿಸುತ್ತಿದ್ದೇವೆ.
ಕೋವಿಡ್-19 ಸಂದರ್ಭದಲ್ಲೂ ಹೆಣ್ಣುಮಕ್ಕಳೇ ಹೆಚ್ಚಾಗಿರುವ ನಾವು ನಮ್ಮ ಕುಟುಂಬವನ್ನು ಬಿಟ್ಟು ಜೀವದ ಹಂಗೂ ತೊರೆದು ಹಗಲಿರುಳೆನ್ನದೇ ಸಾರ್ವಜನಿಕರಿಗೆ ಪ್ರಾಮಾಣಿಕ ಸೇವೆ ನೀಡಿದ್ದೇವೆ.
ಅಲ್ಪ ವೇತನದಲ್ಲಿ ಇನ್ನಿತರ ಯಾವುದೇ ಸೌಲಭ್ಯಗಳಿಲ್ಲದೇ ಕೌಟುಂಬಿಕ ಜೀವನ ನಿರ್ವಹಣೆ ಕಷ್ಟಕರವಾಗಿದ್ದು ಈಗಾಗಲೇ ಹಲವಾರು ಬಾರಿ ನಮ್ಮ ಕುಂದುಕೊರತೆಗಳು ಹಾಗೂ ಬೇಡಿಕೆಗಳ ಬಗ್ಗೆ ಸರರ್ಕಾರಕ್ಕೆ ಮತ್ತು ಅಧಿಕಾರಿಗಳಿಗೆ ಮನವರಿಕೆ ಮಾಡಿ ಮನವಿ ಅಹವಾಲುಗಳನ್ನು ಸಲ್ಲಿಸಿದ್ದರೂ ಸಹ ಇಲ್ಲಿಯವರೆಗೆ ಯಾವುದೇ ಕ್ರಮ ಕೈಗೊಂಡಿರುವುದಿಲ್ಲ ಆದುದರಿಂದ ನಮ್ಮ ರಾಜ್ಯ ಸಂಘವು ದಿನಾಂಕ:24-02-2025 ರಿಂದ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ “ಅನಿರ್ಧಿಷ್ಟಾವಧಿವರೆಗೆ ಅಹೋರಾತ್ರಿ ಧರಣಿ” ಹಮ್ಮಿಕೊಳ್ಳಲಾಗಿದೆ ಎಂಬುದಾಗಿ ಸಂಘ ತಿಳಿಸಿದೆ.
ಆರೋಗ್ಯ ಇಲಾಖೆಯ NHM ಗುತ್ತಿಗೆ ನೌಕರರ ಬೇಡಿಕೆಗಳು ಏನು?
- ಗುತ್ತಿಗೆ ಶುಶೂಷಾಧಿಕಾರಿಗಳ “ಸೇವೆ ಖಾಯಂ’ ಮಾಡಬೇಕು
- ಸುಪ್ರೀಂ ಕೋರ್ಟ್ ಆದೇಶದಂತೆ “ಸಮಾನ ಕೆಲಸಕ್ಕೆ ಸಮಾನ ವೇತನ’ ನಿಗಧಿ ಪಡಿಸಬೇಕು.
- ಕನಿಷ್ಠಪಕ್ಷ :- ಖಾಯಂ ಮಾಡುವವರೆಗೆ “ವೈಧ್ಯಕೀಯ ಶಿಕ್ಷಣ ಇಲಾಖೆಯಲ್ಲಿ” ಗುತ್ತಿಗೆ ಶುಶೂಷಾಧಿಕಾರಿಗಳಿಗೆ ವೇತನ ಕೊಟ್ಟಂತೆ ನಮಗೂ ಅದೇ ರೀತಿ ಕೊಡಬೇಕು.
- ಮುಂಬರುವ “ವಿಶೇಷ ನೇರ ನೇಮಕಾತಿಯಲ್ಲಿ ಜೇಷ್ಠತೆಯ ಆಧಾರದ ಮೇಲೆ ಕೃಪಾಂಕ ಮತ್ತು ವಯೋಮತಿ ಸಡಿಲಿಕೆ ನೀಡಬೇಕು. ಈಗಾಗಲೇ ನಮ್ಮ ಇಲಾಖೆಯ ಗುತ್ತಿಗೆ ವೈದ್ಯಾಧಿಕಾರಿಗಳಿಗೆ 30 ಕೃಪಾಂಕ ಕೊಟ್ಟಂತೆ, ನಮಿಗೂ 1 ವರ್ಷದ ಗುತ್ತಿಗೆ ಸೇವೆಗೆ 3 ಕೃಪಾಂಕದಂತೆ ಗರಿಷ್ಠ 30 ಕೃಪಾಂಕ ನೀಡಬೇಕು.[ 8 ವರ್ಷಗಳಿಂದ ನೇಮಕಾತಿ ಆಗಿರುವುದಿಲ್ಲ ]”.
- “ಜಿಲ್ಲೆ ಯಿಂದ ಜಿಲ್ಲೆಗೆ ವರ್ಗಾವಣೆ ನೀಡಬೇಕು. ಇಲ್ಲಿಯವರೆಗೂ 2 ವರ್ಷಗಳಿಂದ ಜಿಲ್ಲೆಯಿಂದ ಜಿಲ್ಲೆಗೆ ವರ್ಗಾವಣೆ ಕೊಡಲು ಹಲವಾರು ಸಭೆಗಳು [EC Meeting] ಗಳನ್ನು ಮಾಡಿದ್ದಾರೆ, Policy ಮಾಡಿ ವರ್ಗಾವಣೆಗೆ ಅವಕಾಶ ಮಾಡಿಕೊಡುವುದಾಗಿ ಹೇಳುವುದೇ ಆಯಿತು ಯಾವುದೇ ಕ್ರಮ ಕೈಗೊಂಡಿರುವುದಿಲ್ಲ.
- ಶುಕ್ರೂಷಾಧಿಕಾರಿ ತರಬೇತಿ ಪಡೆದು “PHCO [2 ANM] ಎದುರು ಹುದ್ದೆಯಲ್ಲಿ ಸೇವೆ ಮಾಡಿರುವ ಶುಶ್ರುಷಾಧಿಕಾರಿಗಳ ಆ ಸೇವೆಯನ್ನು ನೇಮಕಾತಿಯಲ್ಲಿ ಪರಿಗಣಿಸಬೇಕು [ಈಗಾಗಲೇ ಆದೇಶ ಹೊರಡಿಸಿದ್ದಾರೆ ಆದರೆ ಜಾರಿಗೆ ಆಗಿಲ್ಲ].
- ನಾವು ಸರ್ಕಾರಕ್ಕೆ ಹಾಗೂ ಸಾಮಾನ್ಯ ಜನರಿಗೆ ಸೇವೆ ಮಾಡುವಲ್ಲಿ ತೊಂದರೆ ಕೊಡಲು ಇಚ್ಚಿಸುವುದಿಲ್ಲ. ಆದರೆ ನಮ್ಮನ್ನ ಎಲ್ಲಾ ಸೌಲಭ್ಯಗಳಿಂದಲೂ ಕಡೆಗಣಿಸಿರುವುದರಿಂದ ನಮ್ಮ ಮೂಲಭೂತ ಹಕ್ಕುಗಳನ್ನು ಪಡೆಯಲು ನಾವು ಈ ಮುಷ್ಕರವನ್ನು ಮಾಡುವುದು ಅನಿವಾರ್ಯವಾಗಿದೆ.
ಈ ಮೇಲಿನ ಎಲ್ಲಾ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯ ಆರೋಗ್ಯ ಇಲಾಖೆಯ ಎನ್ ಹೆಚ್ ಎಂ ನೌಕರರು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ನಾಳೆಯಿಂದ ಮತ್ತಷ್ಟು ನೌಕರರು ಕೆಲಸಕ್ಕೆ ಗೈರಾಗಿ ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದು, ರಾಜ್ಯಾಧ್ಯಂತ ಆರೋಗ್ಯ ಸೇವೆಯಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ.
ಕರ್ನಾಟಕ ರಾಜ್ಯ ಗುತ್ತಿಗೆ ಶುಕ್ರೂಷಾಧಿಕಾರಿಗಳ ನೌಕರರ ಕ್ಷೇಮಾಭಿವೃದ್ಧಿ ಸಂಘದ ಪ್ರತಿಭಟನೆಗೆ KSHCOEA BMS ಸಂಘ ಬೆಂಬಲ
ಈ ಕುರಿತು ಮಾತನಾಡಿರುವಂತ ಸಂಘದ ಅಧ್ಯಕ್ಷರಾದಂತ ಶ್ರೀಕಾಂತ್ ಸ್ವಾಮಿ ಅವರು ಮಾತನಾಡಿ, ನಿನ್ನೆಯಿಂದ ಫ್ರೀಡಂ ಪಾರ್ಕ್ ನಲ್ಲಿ ಎನ್ ಹೆಚ್ ಎಂ ಗುತ್ತಿಗೆ ನೌಕರರು ಪ್ರತಿಭಟನೆ ನಡೆಸುತ್ತಿದ್ದಾರೆ. ಅವರ ಪ್ರತಿಭಟನೆಗೆ ನಮ್ಮ ಸಂಘವು ಬೆಂಬಲ ನೀಡುವುದಾಗಿ ಘೋಷಿಸಿದ್ದಾರೆ.
ಈಗಾಗಲೇ ಮಣಿಪುರದಲ್ಲಿ ಎನ್ ಹೆಚ್ ಎಂ ನೌಕರರನ್ನು ಖಾಯಂ ಮಾಡಿಕೊಳ್ಳಲಾಗಿದೆ. ಬಿಹಾರದಲ್ಲೂ ಖಾಯಂ ಮಾಡುವಂತ ನಿರ್ಧಾರಕ್ಕೆ ಬರಲಾಗಿದೆ. ಕರ್ನಾಟಕದಲ್ಲೂ ಎನ್ ಹೆಚ್ ಎಂ ಗುತ್ತಿಗೆ ನೌಕರರನ್ನು ಖಾಯಂ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದರು.
ವರದಿ: ವಸಂತ ಬಿ ಈಶ್ವರಗೆರೆ
ಪತಿಯ ಒಪ್ಪಿಗೆ ಇದ್ದರೆ ಅರ್ಹ ವಯಸ್ಸಿನ ವಿವಾಹಿತ ಮಹಿಳೆ ಐವಿಎಫ್ ಚಿಕಿತ್ಸೆ ಪಡೆಯಬಹುದು: ಹೈಕೋರ್ಟ್
BREAKING : ಬಾಲಿವುಡ್ ನಟ ‘ಗೋವಿಂದ’ 37 ವರ್ಷಗಳ ದಾಂಪತ್ಯದಲ್ಲಿ ಬಿರುಕು ; ವಿಚ್ಛೇದನಕ್ಕೆ ಮುಂದಾದ ದಂಪತಿ