ಬೆಂಗಳೂರು: ಮುಂಬರುವಂತ ರಾಜ್ಯ ಆರೋಗ್ಯ ಇಲಾಖೆಯ ಶುಶ್ರೂಷಕರ ನೇಮಕಾತಿ ಸಂದರ್ಭದಲ್ಲಿ ಹಾಲಿ ಕರ್ತವ್ಯ ನಿರ್ವಹಿಸುತ್ತಿರುವಂತ ಎನ್ ಹೆಚ್ ಎಂ ನೌಕರರಿಗೆ ಕೃಪಾಂಕ ನೀಡಲಾಗುತ್ತದೆ ಎಂಬುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭರವಸೆ ನೀಡಿದ್ದಾರೆ. ಈ ಮೂಲಕ ಎನ್ ಹೆಚ್ ಎಂ ಗುತ್ತಿಗೆ ನೌಕರರಿಗೆ ಗುಡ್ ನ್ಯೂಸ್ ನೀಡಿದ್ದಾರೆ.
ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿದ್ದಂತ ನೌಕರರ ಪ್ರತಿಭನಾ ಸ್ಥಳಕ್ಕೆ ಭೇಟಿ ನೀಡಿ, ಬೇಡಿಕೆಯನ್ನು ಆಲಿಸಿದರು. ಆ ಬಳಿಕ ಮಾತನಾಡಿದಂತ ಅವರು, NHM ಯೋಜನೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಪಾಲುದಾರಿಕೆಯಲ್ಲಿ ನಡೆಯುತ್ತಿದ್ದು, ವೇತನ ಹೆಚ್ಚಳ ವಿಚಾರವಾಗಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ ಅಮುಮೋದನೆ ಪಡೆಯಬೇಕಾಗುತ್ತದೆ.. ಈ ನಿಟ್ಟಿನಲ್ಲಿ ಮಾರ್ಚ್ 10 ರಂದು ಸಭೆ ನಡೆಸಿ, ಸರ್ಕಾರ ತನ್ನ ನಿಲುವು ತೆಗೆದುಕೊಳ್ಳಲಿದೆ ಎಂದು ಭರವಸೆ ನೀಡಿದರು.
ಇನ್ನು ನರ್ಸ್ ನೇಮಕಾತಿ ವೇಳೆ NHM ಅಡಿ ಕಾರ್ಯ ನಿರ್ವಹಿಸುತ್ತಿರುವವರಿಗೆ ಕೃಪಾಂಕ ನೀಡುವ ಮೂಲಕ ಆದ್ಯತೆ ನೀಡಲಾಗುವುದು. ಅಲ್ಲದೇ ಅಂತರ್ಜಿಲ್ಲಾ ವರ್ಗಾವಣೆಗೆ ಒಂದು ಬಾರಿ ಅವಕಾಶ ಕಲ್ಪಿಸುವುದಾಗಿ ಭರವಸೆ ನೀಡಿದದು.
ಈ ಹಿನ್ನಲೆಯಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರ ಭರವಸೆ ಹಿನ್ನೆಲೆಯಲ್ಲಿ NHM ಶುಶ್ರೂಷಕೀಯರು ತಮ್ಮ ಪ್ರತಿಭಟನೆ ಹಿಂಪಡೆದರು. ಈ ಮೂಲಕ ಕಳೆದ ಆರು ದಿನಗಳಿಂದ ನಡೆಸುತ್ತಿದ್ದಂತ ಎನ್ ಹೆಚ್ ಎಂ ಗುತ್ತಿಗೆ ನೌಕರರ ಅಹೋ ರಾತ್ರಿ ಮುಷ್ಕರ ಅಂತ್ಯಗೊಂಡಂತೆ ಆಗಿದೆ.
ವರದಿ: ವಸಂತ ಬಿ ಈಶ್ವರಗೆರೆ
16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಸಿಎಂ ಸಿದ್ಧರಾಮಯ್ಯ ಚಾಲನೆ
ಟ್ರಂಪ್ ಜೊತೆ ಮಾತಿನ ಚಕಮಕಿ:’ಜೆಲೆನ್ಸ್ಕಿ’ಗೆ ಯುರೋಪಿಯನ್ ಮಿತ್ರರಾಷ್ಟ್ರಗಳು, ಕೆನಡಾ ಬೆಂಬಲ | Trump-Zelensky