ಶಿವಮೊಗ್ಗ: ಶಿವಮೊಗ್ಗದಲ್ಲೂ ಸಹ ಎನ್ಐಎ ಅಧಿಕಾರಿಗಳು ನಡೆಸಿದ್ದಾರೆ. ಜಿಲ್ಲೆಯ ಪಿಎಫ್ಐ ರಾಜ್ಯ ವಲಯ ಅಧ್ಯಕ್ಷ ಶಾಹೀದ್ ಖಾನ್ ಮನೆ ಮೇಲೆ ದಾಳಿ ನಡೆಸಿ, ಆತನನ್ನು ವಶಕ್ಕೆ ಪಡೆದಿದ್ದಾರೆ.
BIGG NEWS: ಸಿಎಂ ತವರು ಕ್ಷೇತ್ರಕ್ಕೆ ಬಂಪರ್ ಕೊಡುಗೆ; 50 ಪಿಯುಸಿ ಕಾಲೇಜುಗಳಿಗೆ ಸರ್ಕಾರದಿಂದ ಗ್ರೀನ್ ಸಿಗ್ನಲ್
ನಗರದ ಯಲಕಪ್ಪನ ಬೀದಿಯಲ್ಲಿನ ಶಾಹೀದ್ ನಿವಾಸದ ಮೇಲೆ ಇಂದು ಬೆಳಗಿನ ಜಾವ 2 ಗಂಟೆ ವೇಳೆಗೆ ದಾಳಿ ನಡೆದಿದೆ. ಬೆಳಗ್ಗೆ 6 ಗಂಟೆ ಸುಮಾರಿಗೆ ಪರಿಶೀಲನೆ ಮುಗಿಸಿ, ಶಾಹೀದ್ ಖಾನ್ ವಶಕ್ಕೆ ಪಡೆದು ಕರೆದೊಯ್ಯಲಾಗಿದೆ. ಶಾಹೀದ್ ಖಾನ್ ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು ಹಾಗೂ ಹಾವೇರಿ ಜಿಲ್ಲೆಯ ವಲಯ ಪಿಎಫ್ಐ ಅಧ್ಯಕ್ಷನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
BIGG NEWS: ಸಿಎಂ ತವರು ಕ್ಷೇತ್ರಕ್ಕೆ ಬಂಪರ್ ಕೊಡುಗೆ; 50 ಪಿಯುಸಿ ಕಾಲೇಜುಗಳಿಗೆ ಸರ್ಕಾರದಿಂದ ಗ್ರೀನ್ ಸಿಗ್ನಲ್
ಇನ್ನು ಸದ್ಯ ಬೆಂಗಳೂರು, ಮಂಗಳೂರು, ಶಿರಸಿಯಲ್ಲಿ ಗುರುವಾರ ನಸುಕಿನಲ್ಲಿ ಏಕಕಾಲಕ್ಕೆ ರಾಷ್ಟ್ರೀಯ ತನಿಖಾ ದಳದ (NIA) ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಇದರಲ್ಲಿ 10 ಸ್ಥಳಗಳು ಪಿಎಫ್ಐ, ಎಸ್ಡಿಪಿಐ ಪದಾಧಿಕಾರಿಗಳ ಮನೆಗಳಾಗಿದ್ದರೆ, 2 ಸ್ಥಳಗಳು ಪಿಎಫ್ಐ ಕಚೇರಿಗಳಾಗಿವೆ. ಕೇರಳ, ತಮಿಳುನಾಡು ಮತ್ತು ಆಂಧ್ರ ಪ್ರದೇಶದ ಹಲವೆಡೆಯೂ ದಾಳಿ ನಡೆದಿದೆ.