ಬೆಂಗಳೂರು : ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿರುವ ಎಲ್‌ಇಟಿ ಶಂಕಿತ ಉಗ್ರನ ಜಿಹಾದಿ ಬೋಧನೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ (NIA) ಬೆಂಗಳೂರು ಸೇರಿದಂತೆ ದೇಶದ ಏಳು ರಾಜ್ಯಗಳ 17 ಕಡೆ NIA ಮಂಗಳವಾರ ದಾಳಿ ನಡೆಸಿದೆ.
ಋತುಬಂಧವು ರೋಗವಲ್ಲ ,ಭಯಪಡದಿರಿ: ತಜ್ಞರು | Menopause is not a disease
ಅಲ್ಲದೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಲಷ್ಕರ್-ಎ-ತೋಯ್ಬಾ ಭಯೋತ್ಪಾದಕ ಸಂಘಟನೆಯ (ಎಲ್‌ಇಟಿ)ಯ ಶಂಕಿತ ಉಗ್ರನ ಜಿಹಾದಿ ಬೋಧನೆ ಪ್ರಕರಣ ಸಂಬಂಧ ರಾಜ್ಯದ ಮಂಗಳೂರು ಹಾಗೂ ಬೆಂಗಳೂರು ಸೇರಿದಂತೆ ದೇಶದ ಏಳು ರಾಜ್ಯಗಳ 17 ಕಡೆ NIA ಮಂಗಳವಾರ ದಾಳಿ ನಡೆಸಿದೆ.
ರಾಜ್ಯದಲ್ಲಿ ಮಹಿಳೆಯರ ಕುಂದುಕೊರತೆಗಳ ಪರಿಹಾರಕ್ಕಾಗಿ 24 ಗಂಟೆಯೂ ಕಾಲ್ ಸೆಂಟರ್: ಮಹಿಳಾ ಆಯೋಗ ಚಿಂತನೆ
ಮಂಗಳೂರಿನ ನವೀದ್, ಬೆಂಗಳೂರಿನ ಹೆಣ್ಣೂರು ಸಮೀಪದ ಸೈಯದ್ ಖೈಲ್ ಎಂಬುವರಿಗೆ ಎನ್‌ಐಎ ಬಿಸಿ ತಟ್ಟಿದ್ದು, ಈ ದಾಳಿ ವೇಳೆ ಲ್ಯಾಪ್‌ಟಾಪ್, ಮೊಬೈಲ್ ಹಾಗೂ ಹಣ ಜಪ್ತಿ ಮಾಡಿದೆ. ಈ ಪ್ರಕರಣ ಸಂಬಂಧ ಎನ್‌ಐಎ ಎರಡನೇ ಬಾರಿ ದಾಳಿ ನಡೆಸಿದೆ. ಈಗಾಗಲೇ ಈ ಪ್ರಕರಣ ಕುರಿತು ಒಂದು ಹಂತದ ತನಿಖೆ ಪೂರ್ಣಗೊಳಿಸಿ ನ್ಯಾಯಾಲಯಕ್ಕೆ ಎನ್‌ಐಎ ಆರೋಪಪಟ್ಟಿ ಸಹ ಸಲ್ಲಿಸಿದೆ.
ನೀರಿನ ಸಮಸ್ಯೆ ಬಗೆಹರಿಸಲು ತಾಲೂಕು ಮಟ್ಟದಲ್ಲಿ ನಿಯಂತ್ರಣಾ ಕೊಠಡಿ-ಸಹಾಯವಾಣಿ ಕೇಂದ್ರ ಸ್ಥಾಪನೆ : ಸಿಎಂ ಸಿದ್ದರಾಮಯ್ಯ
2023ರಲ್ಲಿ ಜು.19 ರಂದು ಹೆಬ್ಬಾಳ ಸಮೀಪ ಸುಲ್ತಾನ್‌ಪಾಳ್ಯದಲ್ಲಿ ದಾಳಿ ನಡೆಸಿ ಬೆಂಗಳೂರಿನ ಸರಣಿ ಬಾಂಬ್ ಸ್ಫೋಟ ಕೃತ್ಯ ಸಂಚು ರೂಪಿಸಿದ್ದ ಎಲ್‌ಇಟಿ ಶಂಕಿತ ಉಗ್ರರಾದ ಸೈಯದ್ ಸುಹೇಲ್‌ಖಾನ್, ಪುಲಿಕೇಶಿ ನಗರದ ಮೊಹಮದ್ ಫೈಜಲ್ ರಬ್ಬಾನಿ, ಕೊಡಿಗೇಹಳ್ಳಿಯ ಮಹಮದ್ ಉಮರ್, ಜಾಹೀದ್ ತಬ್ರೇಜ್ ಹಾಗೂ ಆರ್.ಟಿ.ನಗರದ ಸೈಯದ್ ಮುದಾಸೀರ್ ಪಾಷನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ಈ ಪ್ರಕರಣವನ್ನು ಬಳಿಕ ಎನ್‌ಐಎ ತನಿಖೆ ಕೈಗೊಂಡಿತ್ತು.