ಕಲಬುರಗಿ: ಬ್ಯಾನ್ ಆಗಿರುವ ಪಿಎಫ್ ಐ ಸಂಘಟನೆ ಮುಖಂಡರ ಮನೆಗಳ ಮೇಲೆ ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಎನ್ಐಎ ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ ಪೊಲೀಸರಿಗೂ ಮಾಹಿತಿ ಇಲ್ಲ. ದಾಳಿ ವೇಳೆ ಮಹತ್ವದ ದಾಖಲೆ ಕಲೆ ಹಾಕಿದ್ದಾರೆ ಎನ್ನಲಾಗಿದೆ. ಆದರೆ, ಯಾವೆಲ್ಲ ಮುಖಂಡರ ಮನೆಗಳ ಮೇಲೆ ದಾಳಿ ನಡೆಸಲಾಗಿದೆ ಎನ್ನುವ ಮಾಹಿತಿಯನ್ನು ಅಧಿಕಾರಿಗಳು ಬಿಟ್ಟುಕೊಟ್ಟಿಲ್ಲ. ತನಿಖೆ ಪ್ರಗತಿಯಲ್ಲಿದೆ ಎಂದು ಮಾತ್ರ ಮಾಹಿತಿ ನೀಡಿದ್ದಾರೆ.
ಕಳೆದ ಬಾರಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಜಿಲ್ಲಾಧ್ಯಕ್ಷ ಹಾಗೂ ಖಜಾಂಚಿ ಮನೆಗಳ ಮೇಲೆ ದಾಳಿ ನಡೆಸಿ, ಅವರನ್ನು ಬಂಧಿಸುವ ವೇಳೆ ಪೊಲೀಸರ ಸಹಾಯವನ್ನು ಎನ್ಐಎ ಅಧಿಕಾರಿಗಳು ಪಡೆದಿದ್ದರು. ಆದರೆ, ಈ ಬಾರಿ ಪೊಲೀಸರಿಗೂ ಯಾವುದೇ ಮಾಹಿತಿ ನೀಡಿಲ್ಲ ಎಂದು ಮೂಲಗಳು ತಿಳಿಸಿವೆ.