ಬಿಹಾರ : ಬಿಹಾರದ ಪುರ್ನಿಯಾ ಜಿಲ್ಲೆಯ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಕಚೇರಿಯಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ ಗುರುವಾರ ದಾಳಿ ಮಾಡಿ ಶೋಧ ನಡೆಸುತ್ತಿದೆ.
ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ), ಜಾರಿ ನಿರ್ದೇಶನಾಲಯ (ಇಡಿ) ಮತ್ತು ರಾಜ್ಯ ಪೊಲೀಸ್ ಪಡೆಗಳ ಜಂಟಿ ತಂಡವು ತಮಿಳುನಾಡು, ಕೇರಳ, ಕರ್ನಾಟಕ ಮತ್ತು ಅಸ್ಸಾಂ ಸೇರಿದಂತೆ 10 ರಾಜ್ಯಗಳಲ್ಲಿ ನಡೆದ ದಾಳಿಯಲ್ಲಿ 100 ಕ್ಕೂ ಹೆಚ್ಚು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ನಾಯಕರನ್ನು ಬಂಧಿಸಿದೆ.
ಮೂಲಗಳ ಪ್ರಕಾರ, “ಭಯೋತ್ಪಾದನೆಗೆ ಧನಸಹಾಯ, ತರಬೇತಿ ಶಿಬಿರ”ಗಳನ್ನು ಆಯೋಜಿಸುವುದು ಮತ್ತು ನಿಷೇಧಿತ ಸಂಘಟನೆಗಳಿಗೆ ಸೇರಲು ಜನರನ್ನು ಪ್ರೇರೆಪಿಸುತ್ತಿದ್ದರು ಈ ಕ್ರಮಗಳಲ್ಲಿ ತೊಡಗಿರುವ ವ್ಯಕ್ತಿಗಳ ವಸತಿ ಮತ್ತು ಅಧಿಕೃತ ಆವರಣದಲ್ಲಿ ಎನ್ಐಎ ಅಧಿಕಾರಿಗಳು ಶೋಧಗಳನ್ನು ನಡೆಸಲಾಗುತ್ತಿದೆ.
NIA searches underway at PFI office in Bihar's Purnia
Read @ANI Story | https://t.co/1AVk2J1ia0#NIARaid #PFI #Bihar pic.twitter.com/E1xpK0npWH
— ANI Digital (@ani_digital) September 22, 2022