ಮಂಗಳೂರು: ನಿನ್ನೆ ನಗರದಲ್ಲಿ ನಡೆದಿದ್ದಂತ ಆಟೋದಲ್ಲಿನ ಸ್ಪೋಟ ಪ್ರಕರಣದ ಕುರಿತು ಪೊಲೀಸರು ತೀವ್ರ ತನಿಖೆ ನಡೆಸುತ್ತಿದ್ದು, ಹಲವು ಆಯಾಮಗಳಲ್ಲಿ ಹಿರಿಯ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.
ಇದೀಗ ಘಟನೆ ನಡೆದ ಸ್ಥಳಕ್ಕೆ ಹಿರಿಯ ಎನ್ ಐ ಎ (NIA) ಅಧಿಕಾರಿಗಳ ತಂಡ ಧಾವಿಸಿ ತೀವ್ರ ಶೋಧ ಕಾರ್ಯ ನಡೆಸುತ್ತಿದ್ದಾರೆ. ಘಟನೆ ನಡೆದ ಸ್ಥಳದಲ್ಲಿ ಎನ್ ಐ ಎ ಡಿಐಜಿ ಪ್ರಕಾಶ್ ಹಾಗೂ ಎಸ್,ಪಿ ರವಿ ನೇತೃತ್ವದಲ್ಲಿ ತಂಡ ತೀವ್ರ ಶೋಧ ಕಾರ್ಯಾಚರಣೆ ನಡೆಸುತ್ತಿದೆ. ಸ್ಪೋಟ ಪ್ರಕರಣದಲ್ಲಿ ಉಗ್ರರ ಕೈವಾಡವಿದೆ ಎಂದು ಹೇಳಲಾಗಿದ್ದು, ಹಲವರನ್ನು ವಿಚಾರಣೆಗೊಳಪಡಿಸಲಾಗಿದೆ.
ಸ್ಪೋಟದಲ್ಲಿ ಶಂಕಿತ ವ್ಯಕ್ತಿಗೆ ಗಂಭೀರ ಗಾಯ
ಈ ಕುರಿತು ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಮಾಹಿತಿ ನೀಡಿದ್ದು, ಸ್ಪೋಟದಿಂದ ಶಂಕಿತ ವ್ಯಕ್ತಿಗೆ ಗಂಭೀರ ಗಾಯಗಳಾಗಿದೆ. ಸದ್ಯ, ಆತನ ಸ್ಥಿತಿ ಗಂಭೀರವಾಗಿದೆ, ವಿಪರೀತ ಸುಟ್ಟಗಾಯವಾಗಿದ್ದರಿಂದ ಇನ್ಪೆಕ್ಷನ್ ಆಗಬಹುದು ಎಂದು ವೈದ್ಯರು ಆತನ ಜೊತೆ ಮಾತನಾಡಲು ಬಿಡುತ್ತಿಲ್ಲ, ಪ್ರಕರಣದ ಬಗ್ಗೆ ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸುತ್ತಿದ್ದೇವೆ, ಆಟೋ ಚಾಲಕ ಪುರುಷೋತ್ತಮ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಶಶಿಕುಮಾರ್ ಹೇಳಿದ್ದಾರೆ.
BIG NEWS: ಟ್ಯಾಂಕ್ ಸ್ವಚ್ಛಗೊಳಿಸಿದ್ದಕ್ಕೆ ತಿರುಗೇಟು: ಗ್ರಾಮದ ಎಲ್ಲಾ ತೊಂಬೆಗಳಲ್ಲಿ ನೀರು ಕುಡಿದ ದಲಿತ ಯುವಕರು
BIG NEWS: ಮಂಗಳೂರಿನಲ್ಲಿ ‘ಬಾಂಬ್ ಬ್ಲಾಸ್ಟ್’ಗೂ PFIಗೂ ನಂಟು? ಈ ಬಗ್ಗೆ ‘ಸಿಎಂ ಬೊಮ್ಮಾಯಿ’ ಹೇಳಿದ್ದೇನು ಗೊತ್ತಾ?