ನವದೆಹಲಿ: ನೈಜೀರಿಯಾದ ವ್ಯಕ್ತಿಯೊಬ್ಬರಿಗೆ ದೆಹಲಿಯಲ್ಲಿ ಮಂಕಿಪಾಕ್ಸ್ ಸೋಂಕು ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಈ ಮೂಲಕ ದೆಹಲಿಯಲ್ಲಿ ಮಂಕಿಪಾಕ್ಸ್ ಪ್ರಕರಣಗಳ ಸಂಖ್ಯೆ 2ಕ್ಕೆ ಏರಿಕೆಯಾದ್ರೇ, ದೇಶದಲ್ಲಿ 6ಕ್ಕೇರಿದೆ.
ವಿಶ್ವದ ಹಲವೆಡೆ ತಲ್ಲಣವನ್ನು ಸೃಷ್ಠಿಸಿರುವಂತ ಮಂಕಿಪಾಕ್ಸ್ ಸೋಂಕಿನ ಪ್ರಕರಣಗಳು ಭಾರತಕ್ಕೂ ಕಾಲಿಟ್ಟಿವೆ. ಈಗಾಗಲೇ ಕೇರಳ, ದೆಹಲಿ ಸೇರಿದಂತೆ ದೇಶದ ವಿವಿಧ ರಾಜ್ಯಗಳಲ್ಲಿ ಮಂಕಿಪಾಕ್ಸ್ ಪ್ರಕರಣಗಳು ವರದಿಯಾಗಿವೆ.
ಇದೀಗ ದೆಹಲಿಯಲ್ಲಿ ನೈಜೀರಿಯದ ವ್ಯಕ್ತಿಗೆ ಮಂಕಿಪಾಕ್ಸ್ ಪಾಸಿಟಿವ್ ಎಂಬುದಾಗಿ ದೃಢಪಟ್ಟಿಗದೆ. ಈ ಮೂಲಕ ನಗರದಲ್ಲಿ 2ನೇ ಪ್ರಕರಣ ಇದಾಗಿದೆ. ಅಲ್ಲದೇ ಭಾರತದಲ್ಲಿ ಪ್ರಕರಣಗಳ ಸಂಖ್ಯೆ 6ಕ್ಕೆ ಏರಿಕೆಯಾಗಿದೆ.
ಮತ್ತೊಂದೆಡೆ ಕೇರಳದಲ್ಲಿ ಮಂಕಿಪಾಕ್ಸ್ ಸೋಂಕಿತ ಲಕ್ಷಣಗಳನ್ನು ಹೊಂದಿದ್ದಂತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೇ ನಿನ್ನೆ ಸಾವನ್ನಪ್ಪಿದ್ದರು. ಅವರ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಅದರ ವರದಿಯ ಪ್ರಕಾರ ಅವರಿಗೂ ಮಂಕಿಪಾಕ್ಸ್ ಸೋಂಕು ದೃಢಪಟ್ಟಿದ್ದು, ಇದು ದೇಶದಲ್ಲಿಯೇ ಮಂಕಿಪಾಕ್ಸ್ ನ ಮೊದಲ ಸಾವು ಎಂಬುದಾಗಿ ತಿಳಿದು ಬಂದಿದೆ.