ಬೆಂಗಳೂರು: ಮಾಗಡಿಯ ಕಾಂಗ್ರೆಸ್ ಶಾಸಕ ಹೆಚ್.ಸಿ ಬಾಲಕೃಷ್ಣ ಅವರು ಲೋಕಸಭೆಯಲ್ಲಿ ಕಾಂಗ್ರೆಸ್ ಪಕ್ಷ ಗೆದ್ರೆ ಮಾತ್ರ ಗ್ಯಾರಂಟಿ ಯೋಜನೆ ಮುಂದುವರಿಕೆ. ಇಲ್ಲವಾದಲ್ಲಿ ರದ್ದು ಎಂಬುದಾಗಿ ಹೇಳಿದ್ದು ವಿವಾದಕ್ಕೆ ಕಾರಣವಾಗಿತ್ತು. ಈ ಸಂಬಂಧ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ರಾಜ್ಯ ಚುನಾವಣಾ ಆಯೋಗಕ್ಕೆ ಅವರ ವಿರುದ್ಧ ದೂರು ನೀಡಿದ್ದಾರೆ.
ಇಂದು ಕೆಆರ್ ಸರ್ಕಲ್ ನಲ್ಲಿರುವಂತ ರಾಜ್ಯ ಚುನಾವಣಾ ಆಯೋಗದ ಕಚೇರಿಗೆ ತೆರಳಿದಂತ ಅವರು, ಚುನಾವಣಾಧಿಕಾರಿಗಳಿಗೆ ದೂರು ನೀಡಿದ್ದಾರೆ. ಅವರು ನೀಡಿದಂತ ದೂರಿನಲ್ಲಿ ಲೋಕಸಭಾ ಚುನಾವಣೆ ಘೋಷಣೆಗೆ ಮುನ್ನವೇ ಮಾಗಡಿ ಶಾಸಕ ಹೆಚ್ ಸಿ ಬಾಲಕೃಷ್ಣ ಅವರು ಮತದಾರರನ್ನು ಸೆಳೆಯೋ ಪ್ರಯತ್ನಕ್ಕೆ ಇಳಿಸಿದ್ದಾರೆ. ಇದೇ ಕಾರಣದಿಂದಾಗಿ ಲೋಕಸಭೆಯಲ್ಲಿ ಕಾಂಗ್ರೆಸ್ ಗೆದ್ದರೇ ಮಾತ್ರವೇ ಗ್ಯಾರಂಟಿ ಯೋಜನೆ ಮುಂದುವರೆಯಲಿದ್ದಾವೆ. ಸೋತರೆ ರದ್ದು ಎಂಬುದಾಗಿ ಹೇಳಿದ್ದಾರೆ ಎಂದು ಆರೋಪಿಸಿದ್ದಾರೆ.
ಮಾಗಡಿಯ ಕಾಂಗ್ರೆಸ್ ಶಾಸಕ ಹೆಚ್.ಸಿ ಬಾಲಕೃಷ್ಣ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಇಂತಹ ಆಮಿಷಗಳನ್ನು ತಡೆಗಟ್ಟೋ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂಬುದಾಗಿ ಚುನಾವಣಾ ಆಯೋಗಕ್ಕೆ ನೀಡಿದಂತ ದೂರಿನಲ್ಲಿ ತಿಳಿಸಿದ್ದಾರೆ. ರ್ಯಾಜದ ಜನತೆಗೆ ಬ್ಲಾಕ್ ಮೇಲ್ ಮಾಡುತ್ತಿದ್ದಾರೆ ಎಂಬುದಾಗಿ ದೂರಿನಲ್ಲಿ ತಿಳಿಸಿದ್ದಾರೆ.