ಬೆಂಗಳೂರು: ಇಂದು ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಸಂಬಂಧ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ ನಡೆಯಿತು. ಈ ಸಭೆಯಲ್ಲಿ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಹೆಸರು ಘೋಷಿಸಲಾಗಿದೆ.
ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಗೆ ಜೆಡಿಎಸ್ ಪಕ್ಷದಿಂದ ಯಾರನ್ನು ನಿಲ್ಲಿಸಲಾಗುತ್ತದೆ ಎಂಬುದು ತೀವ್ರ ಕುತೂಹಲ ಮೂಡಿಸಿತ್ತು. ಅದು ಕೊನೆಗೂ ಬಹಿರಂಗವಾಗಿದೆ. ಜೆಡಿಎಸ್ ಪಕ್ಷದ ಶಾಸಕಾಂಗ ಸಭೆಯಲ್ಲಿ ನಿಖಿಲ್ ಕುಮಾರಸ್ವಾಮಿ ಅವರನ್ನು ಅಭ್ಯರ್ಥಿಯಾಗಿ ಘೋಷಿಸಲಾಗಿದೆ.
ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರ ಸಮ್ಮುಖದಲ್ಲಿ ಶೇಷಾದ್ರಿಪುರಂನಲ್ಲಿನ ಜೆಡಿಎಸ್ ಕಚೇರಿಯಲ್ಲಿ ನಡೆದಂತ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ.
ಈ ಸಭೆಯಲ್ಲಿ ಮಾತನಾಡಿರುವಂತ ನಿಖಿಲ್ ಕುಮಾರಸ್ವಾಮಿ ನಿಮ್ಮೆಲ್ಲರ ಒತ್ತಡಕ್ಕೆ ಮಣಿದು ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. ಹೀಗಾಗಿ ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ನಿಲ್ಲುವುದು ಫೈನಲ್ ಆಗಿದೆ.
ಸಿ.ಟಿ.ರವಿ ಸಹಕಾರ ಯೋಗೇಶ್ವರ್ ಪರವಾಗಿದೆ: ಡಿ.ಕೆ.ಸುರೇಶ್ ಸ್ಪೋಟಕ ಹೇಳಿಕೆ
BREAKING: ಶಿಗ್ಗಾವಿ ವಿಧಾನ ಸಭಾ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ನಾಮಪತ್ರ ಸಲ್ಲಿಕೆ