ಗದಗ : ಯಶ್ ಕಟೌಟ್ ಕಟ್ಟುವಾಗ ವಿದ್ಯುತ್ ಶಾಕ್ ತಗೋಳಿ ಮೂರು ಯುವಕರು ಮೃತಪಟ್ಟು ನಾಲ್ವರು ಯುವಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಸುಣದೂರು ಗ್ರಾಮದಲ್ಲಿ ನಿನ್ನೆ ನಡೆದಿರುವಂತಹ ದುರಂತ ಘಟನೆ ಯಾಗಿತ್ತು.
ಘಟನೆಯ ನಂತರ ನಿನ್ನೆ ಸಾಯಂಕಾಲ ನಟ ಯಶ್ ಗ್ರಾಮಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದರು ನಂತರ ಜಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳು ಅಭಿಮಾನಿಗಳನ್ನು ಭೇಟಿ ಮಾಡಿ ಆರೋಗ್ಯವನ್ನು ವಿಚಾರಿಸಿ ವಾಪಸ್ ತೆರಳುತ್ತಿದ್ದ ಸಂದರ್ಭ ವೇಳೆ ನಿಖಿಲ್ ಎನ್ನುವ ಯುವಕ ಬೆಂಗಾವಲು ವಾಹನಕ್ಕೆ ಡಿಕ್ಕಿ ಹೊಡೆದು ತೀವ್ರವಾಗಿ ಗಾಯಗೊಂಡು ಇಂದು ಬೆಳಿಗ್ಗೆ ಸಾವನ್ನಪ್ಪಿದ್ದಾನೆ.
ಆದರೆ ಈ ಕುರಿತಂತೆ ಗದಗ ಎಸ್ ಪಿ ಬಿಎಸ್ ನೇಮಗೌಡ ಅವರು ಪ್ರತಿಕ್ರಿಯೆ ನೀಡಿದ್ದು, ಯಶ್ ಬೆಂಗವಲು ವಾಹನಕ್ಕೆ ಬೈಕ್ ಡಿಕ್ಕಿಯಾಗಿಲ್ಲ.ಪೊಲೀಸ್ ಠಾಣೆಗೆ ಹೋಗೋ ಜೀಪ್ಗೆ ಬೈಕ್ ಡಿಕ್ಕಿಯಾಗಿದೆ ಎಂದು ಗದಗ ಎಸ್ ಪಿ ಬಿ ಎಸ್ ನೇಮಗೌಡ ಸ್ಪಷ್ಟನೆ ನೀಡಿದ್ದಾರೆ.ಪೊಲೀಸ್ ಜೀಪಿಗೆ ಬೈಕ್ ಡಿಕ್ಕಿ ಹೊಡೆದಿದೆ ನಟ ಯಶ್ ಬೆಂಗಾವಲು ವಾಹನಕ್ಕೆ ಬೈಕ್ ಡಿಕ್ಕಿಯಾಗಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಅಪಘಾತದ ವೇಳೆ ವೃತ್ತ ನಿಖಿಲ್ ಹೆಲ್ಮೆಟ್ ಧರಿಸದೆ ಇರುವುದರಿಂದ ಈ ಕುರಿತು ಪ್ರತಿಕ್ರಿಯೆ ನೀಡಿದ ಎಸ್ ಪಿ ನೇಮಗೌಡ ದಯವಿಟ್ಟು ಪ್ರತಿಯೊಬ್ಬ ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಅನ್ನು ಧರಿಸಿಕೊಂಡು ಬೈಕ್ ಚಲಾಯಿಸಿ. ಹೆಲ್ಮೆಟ್ ಧರಿಸುವ ಕುರಿತು ಈಗಾಗಲೇ ಅನೇಕ ಬಾರಿ ಜನರಲ್ಲಿ ಜಾಗೃತಿ ಮೂಡಿಸುವಂತಹ ಕೆಲಸ ಮಾಡಿದ್ದೇವೆ ಪ್ರಾಣಕ್ಕೆ ಕುತ್ತು ತರುವಂತಹ ಸಂದರ್ಭಗಳು ಇರುವಾಗ ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ ಎಂದು ನಾನು ಸಾರ್ವಜನಿಕರಲ್ಲಿ ಮನವಿ ಮಾಡಿಕೊಳ್ಳುತ್ತೇನೆ ಎಂದು ತಿಳಿಸಿದರು.