ಬೆಂಗಳೂರು : ಕೆಲವು ದಿನಗಳ ಹಿಂದೆ ಬೆಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಕೇರಳದ ಯುವಕ ನಿಫಾಗೆ ಬಲಿಯಾಗಿದ್ದು, ಇದೀಗ ಬೆಂಗಳೂರಿನ ಜನರಲ್ಲಿ ನಿಫಾ ವೈರಸ್ ಕುರಿತು ಆತಂಕಕ್ಕೆ ಒಳಗಾಗಿದ್ದಾರೆ.
ಅಲ್ಲದೆ ಮೃತ ಯುವಕನ ಅಂತ್ಯಸಂಸ್ಕಾರಕ್ಕೆ ಬೆಂಗಳೂರಿನಿಂದ ತೆರಳಿದ್ದ ಸ್ನೇಹಿತರು ಹಾಗೂ ಪ್ರಾಥಮಿಕ ಸಂಪರ್ಕಿತರಿಗೆ ಹೋಂ ಐಸೊಲೇಷನ್ ಮಾಡಲಾಗಿದೆ. 41 ಪ್ರಾಥಮಿಕ ಸಂಪರ್ಕಿತರ ಪತ್ತೆಯಾಗಿದ್ದು 41 ಜನರಿಗೂ ಕಡ್ಡಾಯ ಹೋಂ ಐಸೊಲೇಷನ್ ಮಾಡಲಾಗಿದೆ. ಅದರಲ್ಲಿ ಓರ್ವ ವ್ಯಕ್ತಿಗೆ ಸೋಂಕಿನ ಗುಣಲಕ್ಷಣಗಳು ಕೂಡ ಪತ್ತೆಯಾಗಿದ್ದು, ಆತಂಕಕ್ಕೆ ಎಡೆಮಾಡಿಕೊಟ್ಟಿದೆ.
41 ಸಂಪರ್ಕಿತರ ಪೈಕಿ ಒಬ್ಬರಿಗೆ ನಿಫಾ ಗುಣಲಕ್ಷಣ ಕಂಡು ಬಂದಿದ್ದು ಗುಣಲಕ್ಷಣಗಳಿರುವ ವ್ಯಕ್ತಿಯ ರಕ್ತ ಮತ್ತು ಸೆರಂ ಮಾದರಿ ಪ್ರಯೋಗಾಲಯಕ್ಕೆ ರವಾನಿಸಲಾಗಿದೆ. ಸದ್ಯ ಕೋವಿಡ್ನಲ್ಲಿ ಭಯ ಹುಟ್ಟಿಸಿದ್ದ ಕ್ವಾರಂಟೈನ್ ಈಗ ಮತ್ತೆ ನಿಫಾ ಹೆಸರಲ್ಲಿ ಶುರುವಾಗಿದೆ. ಹೀಗಾಗಿ ಆರೋಗ್ಯ ಇಲಾಖೆ ಬಿ ಅಲರ್ಟ್ ಅಂತಿದ್ದಾರೆ. ಎಲ್ಲಾ ಸಂಪರ್ಕಿತರ ಮೇಲೆ ಆರೋಗ್ಯಾಧಿಕಾರಿಗಳು ನಿಗಾ ಇಟ್ಟಿದ್ದಾರೆ.