ಸುಭಾಷಿತ :

Wednesday, January 29 , 2020 9:37 PM

ಬ್ರೇಕಿಂಗ್ : ನಿರ್ಭಯಾ ಗ್ಯಾಂಗ್ ರೇಪ್ ಪ್ರಕರಣ : ಆರೋಪಿಯಿಂದ ಕ್ಷಮಾದಾನ ಅರ್ಜಿ ವಾಪಾಸ್ ಪಡೆಯುವುದಾಗಿ ಘೋಷಣೆ


Saturday, December 7th, 2019 5:08 pm

ನವದೆಹಲಿ : ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ನಿರ್ಭಯ ಅತ್ಯಾಚಾರ ಪ್ರಕರಣದ ಅಪರಾಧಿ, ಮರಣದಂಡನೆಗೆ ಗುರಿಯಾಗಿರುವ ವಿನಯ್ ಶರ್ಮಾ ತಾನು ಕ್ಷಮಾದಾನ ನೀಡುವಂಚೆ ಕೋರಿ ಸಲ್ಲಿಸಿದ್ದ ಅರ್ಜಿ ಹಿಂಪಡೆಯುವುದಾಗಿ ತಿಳಿಸಿದ್ದಾನೆ.

ತನ್ನ ಹೆಸರಿನಲ್ಲಿ ರಾಷ್ಟ್ರಪತಿ ರಾಮ್‌ ನಾಥ್‌ ಕೋವಿಂದ್‌ಗೆ ಸಲ್ಲಿಸಲಾಗಿರುವ ಅರ್ಜಿಗೆ ತಾನು  ಸಹಿಯೇ ಹಾಕಿಲ್ಲ. ಹೀಗಾಗಿ ಈ ಅರ್ಜಿಯನ್ನು ಕೂಡಲೇ ಹಿಂಪಡೆಯುವುದಾಗಿ ವಿನಯ್‌ ಶರ್ಮಾ ಅರ್ಜಿ ಸಲ್ಲಿಸಿದ್ದಾನೆ.

ವಿನಯ್‌ ಶರ್ಮಾ ಕ್ಷಮಾದಾನ ಅರ್ಜಿಯನ್ನು ತಿರಸ್ಕರಿಸಿ, ದಿಲ್ಲಿ ಲೆಫ್ಟಿನೆಂಟ್‌ ಗವರ್ನರ್‌ ಅನಿಲ್‌ ಬೈಜಾಲ್‌ ಕೇಂದ್ರ ಗೃಹ ಸಚಿವಾಲಯಕ್ಕೆ ವರದಿ ನೀಡಿದ್ದರು. ನಿರ್ಭಯಾ ಪ್ರಕರಣ ರಾಷ್ಟ್ರವನ್ನೇ ಬೆಚ್ಚಿ ಬೀಳಿಸಿದ ಕುಕೃತ್ಯವಾಗಿದ್ದು, ಯಾವುದೇ ಕಾರಣಕ್ಕೂ ಅಪರಾಧಿಗೆ ಕ್ಷಮೆ ನೀಡಬಾರದು ಎಂದು ತಮ್ಮ ವರದಿಯಲ್ಲಿ ತಿಳಿಸಿದ್ದರು. ಅಂತೆಯೇ ಗೃಹ ಸಚಿವಾಲಯವೂ ರಾಷ್ಟ್ರಪತಿ ಕೋವಿಂದ್‌ ಅವರಿಗೆ ಕ್ಷಮಾದಾನ ಅರ್ಜಿ ತಿರಸ್ಕರಿಸುವಂತೆಯೇ  ಶಿಫಾರಸು ಮಾಡಿತ್ತು. ಆದರೆ ಇದೀಗ ವಿನಯ್‌ ಶರ್ಮಾ ಅರ್ಜಿಯಲ್ಲಿರುವ ಸಹಿ ತನ್ನದಲ್ಲ ಎಂದಿದ್ದು, ಅರ್ಜಿಯನ್ನು ಹಿಂಪಡೆಯುವುದಾಗಿ ಸ್ಪಷ್ಟಪಡಿಸಿದ್ದಾನೆ…

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Trending stories
State
Health
Tour
Astrology
Cricket Score
Poll Questions