ನವದೆಹಲಿ: 38 ವರ್ಷದ ಮಹಿಳೆಯ ಮೇಲೆ ನಡೆದ ಕ್ರೂರ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮಹಿಳಾ ಆಯೋಗ (ಡಿಸಿಡಬ್ಲ್ಯು) ಗಾಜಿಯಾಬಾದ್ ಪೊಲೀಸರಿಗೆ ನೋಟಿಸ್ ಜಾರಿ ಮಾಡಿದೆ. ದೆಹಲಿ ನಿವಾಸಿಯಾದ ಮಹಿಳೆಯೊಬ್ಬರನ್ನು ಸೆಣಬಿನ ಚೀಲದಲ್ಲಿ ಸುತ್ತಿ, ಆಕೆಯ ಕೈಗಳು ಮತ್ತು ಕಾಲುಗಳನ್ನು ಕಟ್ಟಿ ಕಬ್ಬಿಣದ ರಾಡ್ ಅನ್ನು ಅವಳ ಖಾಸಗಿ ಭಾಗಕ್ಕೆ ಸೇರಿಸಿರುವುದು ಕಂಡುಬಂದಿದೆ ಎಂದು ಡಿಸಿಡಬ್ಲ್ಯೂ ತಿಳಿಸಿದೆ.
ಮಹಿಳೆ ಅಕ್ಟೋಬರ್ 16 ರಂದು ತನ್ನ ಸಹೋದರನ ಹುಟ್ಟುಹಬ್ಬದ ಆಚರಣೆಯಲ್ಲಿ ಪಾಲ್ಗೊಳ್ಳಲು ಗಾಜಿಯಾಬಾದ್ನಲ್ಲಿ ಆಟೋ ರಿಕ್ಷಾಕ್ಕಾಗಿ ಕಾಯುತ್ತಿದ್ದಾಗ ನಾಲ್ವರು ಪುರುಷರುಎಸ್ಯುವಿ ಕಾರಿನಲ್ಲಿ ಅವಳನ್ನು ಅಪಹರಿಸಿ ಅತ್ಯಾಚಾರ ನಡೆಸಿದ್ದಾರೆ ಎನ್ನಲಾಗಿದೆ. ಎರಡು ದಿನಗಳ ಕಾಲ ಸಾಮೂಹಿಕ ಅತ್ಯಾಚಾರ ಎಸಗಿ ಚಿತ್ರಹಿಂಸೆ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಮಹಿಳೆಗೆ ದೆಹಲಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ, ಆದರೆ ಅವರ ಸ್ಥಿತಿ ತುಂಬಾ ಗಂಭೀರವಾಗಿದೆ ಎಂದು ಹೇಳಲಾಗಿದೆ.
ಡಿಸಿಡಬ್ಲ್ಯೂ ಮುಖ್ಯಸ್ಥೆ ಸ್ವಾತಿ ಮಲಿವಾಲ್, “ಈ ಘಟನೆಯು ತುಂಬಾ ಭಯಾನಕ ಮತ್ತು ಆತಂಕಕಾರಿಯಾಗಿದೆ. ಇದು ನನಗೆ ನಿರ್ಭಯಾ ಪ್ರಕರಣವನ್ನು ನೆನಪಿಸುತ್ತದೆ. ಎಲ್ಲಾ ಆರೋಪಿಗಳನ್ನು ತಕ್ಷಣವೇ ಬಂಧಿಸಬೇಕು ಮತ್ತು ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು. ಮಹಿಳೆಯರು ಮತ್ತು ಮಕ್ಕಳು ಎಷ್ಟು ಸಮಯದವರೆಗೆ ಇಂತಹ ಅತಿರೇಕದ ಕ್ರೌರ್ಯಕ್ಕೆ ಒಳಗಾಗುತ್ತಾರೆ ಎಂದು ನನಗೆ ಅರ್ಥವಾಗುತ್ತಿಲ್ಲ.”