ನವದೆಹಲಿ: ಬಿಟ್‌ಕಾಯಿನ್ ಅನ್ನು ಕರೆನ್ಸಿಯಾಗಿ ಗುರುತಿಸುವ ಯಾವುದೇ ಪ್ರಸ್ತಾಪವಿಲ್ಲ ಎಂದು ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಸಂಸತ್ತಿನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಇದೇ ವೇಳೆ ಬಿಟ್‌ಕಾಯಿನ್ ವಹಿವಾಟಿನ ಬಗ್ಗೆ ಸರ್ಕಾರವು ಡೇಟಾವನ್ನು ಸಂಗ್ರಹಿಸುವುದಿಲ್ಲ ಎಂದು ಹಣಕಾಸು ಸಚಿವರು ಹೇಳಿದ್ದಾರೆ.
ದೇಶದಲ್ಲಿ ಬಿಟ್‌ಕಾಯಿನ್ ಅನ್ನು ಕರೆನ್ಸಿಯಾಗಿ ಗುರುತಿಸುವ ಯಾವುದೇ ಪ್ರಸ್ತಾಪವನ್ನು ಸರ್ಕಾರ ಹೊಂದಿದೆಯೇ?” ಸಂಸದರಾದ ಸುಮಲತಾ ಅಂಬರೀಶ್ ಮತ್ತು ಡಿಕೆ ಸುರೇಶ್ ಪ್ರಶ್ನೆಗೆ ಉತ್ತರಿಸಿದ ಅವರು ಇಲ್ಲ ಅಂತ ಹೇಳಿದ್ದಾರೆ.
ಬಿಟ್‌ಕಾಯಿನ್ ಡಿಜಿಟಲ್ ಕರೆನ್ಸಿಯಾಗಿದ್ದು ಅದು ಜನರು ಸರಕು ಮತ್ತು ಸೇವೆಗಳನ್ನು ಖರೀದಿಸಲು ಮತ್ತು ಬ್ಯಾಂಕ್‌ಗಳು, ಕ್ರೆಡಿಟ್ ಕಾರ್ಡ್ ವಿತರಕರು ಅಥವಾ ಇತರ ಮೂರನೇ ವ್ಯಕ್ತಿಗಳನ್ನು ಒಳಗೊಳ್ಳದೆ ಹಣವನ್ನು ವಿನಿಮಯ ಮಾಡಿಕೊಳ್ಳಲು ಅನುವು ಮಾಡಿಕೊಡುತ್ತದೆ.