ನವದೆಹಲಿ: ಬಿಹಾರ ಸಚಿವ ನಿತಿನ್ ನಬಿನ್ ಅವರನ್ನು ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಕಾರ್ಯಾಧ್ಯಕ್ಷರನ್ನಾಗಿ ನೇಮಿಸಲಾಗಿದೆ.
ಭಾರತೀಯ ಜನತಾ ಪಕ್ಷ (ಬಿಜೆಪಿ) ಭಾನುವಾರ ಬಿಹಾರ ಸಚಿವ ನಿತಿನ್ ನಬಿನ್ ಅವರನ್ನು ರಾಷ್ಟ್ರೀಯ ಕಾರ್ಯಕಾರಿ ಅಧ್ಯಕ್ಷರನ್ನಾಗಿ ನೇಮಕ ಮಾಡಿರುವುದಾಗಿ ಘೋಷಿಸಿದ್ದು, ಈ ನಿರ್ಧಾರ ತಕ್ಷಣದಿಂದ ಜಾರಿಗೆ ಬಂದಿದೆ.
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಹೊರಡಿಸಿದ ಅಧಿಕೃತ ಆದೇಶದಲ್ಲಿ, ಈ ನೇಮಕಾತಿಯನ್ನು ಪಕ್ಷದ ಸಂಸದೀಯ ಮಂಡಳಿ ಅನುಮೋದಿಸಿದೆ ಎಂದು ತಿಳಿಸಲಾಗಿದೆ. ನಿತಿನ್ ನವೀನ್ ಪ್ರಸ್ತುತ ಬಿಹಾರ ಸರ್ಕಾರದಲ್ಲಿ ಸಚಿವರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
“ಬಿಜೆಪಿ ಸಂಸದೀಯ ಮಂಡಳಿಯು ಬಿಹಾರ ಸರ್ಕಾರದ ಸಚಿವರಾದ ಶ್ರೀ ನಿತಿನ್ ನವೀನ್ ಅವರನ್ನು ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಕಾರ್ಯಕಾರಿ ಅಧ್ಯಕ್ಷರನ್ನಾಗಿ ನೇಮಿಸಿದೆ” ಎಂದು ಆದೇಶದಲ್ಲಿ ತಿಳಿಸಲಾಗಿದೆ.
Bihar Minister Nitin Nabin appointed as the National Working President of the Bharatiya Janata Party pic.twitter.com/zvo7aUNvX9
— ANI (@ANI) December 14, 2025








