ನವದೆಹಲಿ: ಎನ್ಡಿಎ ಸರ್ಕಾರ ರಚನೆಯ ಬಗ್ಗೆ ಊಹಾಪೋಹಗಳ ಮಧ್ಯೆ, ಆಡಳಿತಾರೂಢ ಮೈತ್ರಿ ಪಾಲುದಾರರಾದ ನಿತೀಶ್ ಕುಮಾರ್ ಮತ್ತು ಚಂದ್ರಬಾಬು ನಾಯ್ಡು ಬಿಜೆಪಿಗೆ ಬೆಂಬಲ ಪತ್ರವನ್ನು ಹಸ್ತಾಂತರಿಸಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಪಡೆಯದ ಕಾರಣ ಎನ್ ಡಿಎ ಪಕ್ಷಕ್ಕೆ ಬೆಂಬಲ ನೀಡುವಂತೆ ಚಂದ್ರಬಾಬು ನಾಯ್ಡು, ನಿತೀಶ್ ಕುಮಾರ್ ಅವರನ್ನು ಬಿಜೆಪಿ ನಾಯಕರು ಕೋರಿದ್ದರು. ಇದಕ್ಕೆ ಸಕಾರಾತ್ಮಕವಾಗಿಯೇ ಪ್ರತಿಕ್ರಿಯಿಸಿ, ಬೆಂಬಲ ನೀಡುವುದಾಗಿಯೂ ತಿಳಿಸಿದ್ದರು. ಅದರಂತೆ ಇಂದು ದೆಹಲಿಗೆ ಒಂದೇ ವಿಮಾನದಲ್ಲಿ ಆಗಮಿಸಿದ್ದಂತ ಇಬ್ಬರು ನಾಯಕರು, ಬಿಜೆಪಿ ಸಂಸದರ ಸಭೆಯಲ್ಲಿ ಪಾಲ್ಗೊಂಡಿದ್ದರು.
ಇಂದಿನ ಎನ್ ಡಿಎ ಸಭೆಯಲ್ಲಿ ಚಂದ್ರಬಾಬು ನಾಯ್ಡು ಹಾಗೂ ನಿತೀಶ್ ಕುಮಾರ್ ಅವರು, ಬಿಜೆಪಿಗೆ ಬೆಂಬಲ ಸೂಚಿಸುವಂತ ಪತ್ರವನ್ನು ನೀಡಿದ್ದಾರೆ. ಈ ಮೂಲಕ ಎನ್ ಡಿಎ ಕೇಂದ್ರದಲ್ಲಿ ಸರ್ಕಾರ ರಚಿಸೋದಕ್ಕಾಗಿ, ಮೋದಿ 3ನೇ ಅವಧಿಗೆ ಪ್ರಧಾನಿಯಾಗೋದಕ್ಕೆ ಅಧಿಕೃತವಾಗಿ ಬೆಂಬಲ ಘೋಷಣೆ ಮಾಡಿದ್ದಾರೆ. ಹೀಗಾಗಿ ಜೂನ್.8ರಂದು ಮೋದಿ 3ನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸೋದು ಫಿಕ್ಸ್ ಆದಂತೆ ಆಗಿದೆ.
ಕಾಂಗ್ರೆಸ್ನವರು ಅಡ್ವಾನ್ಸ್ ಗ್ಯಾರಂಟಿ ಕೊಟ್ಟು ಮೋಸದಿಂದ 9 ಸ್ಥಾನ ಗೆದ್ದಿದ್ದಾರೆ : ನೂತನ ಸದಸ್ಯ ಗೋವಿಂದ್ ಕಾರಜೋಳ
ʻಪ್ರಧಾನ ಮಂತ್ರಿ’ ಸ್ಥಾನಕ್ಕೆ ‘ನರೇಂದ್ರ ಮೋದಿ’ ರಾಜೀನಾಮೆ : ಈಗ ದೇಶದ ಉಸ್ತುವಾರಿ ಪ್ರಧಾನಿ ಯಾರು?