ಪಾಟ್ನಾ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಮಹಾಮೈತ್ರಿಕೂಟ ಸರ್ಕಾರ ಬುಧವಾರ ರಾಜ್ಯ ವಿಧಾನಸಭೆಯಲ್ಲಿ ವಿಶ್ವಾಸಮತ ಗೆದ್ದಿದೆ. ಕುಮಾರ್ ನೇತೃತ್ವದ ಸರ್ಕಾರದ ಬಹುಮತವನ್ನು ಸಾಬೀತುಪಡಿಸಲು ಇಂದು ಬಿಹಾರ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆ ನಡೆಯಿತು.
ಸಚಿವ ಮುನಿರತ್ನ ರೌಡಿಸಂ ಮೂಲಕ ಭ್ರಷ್ಟಾಚಾರ: ರಾಜೀನಾಮೆಗೆ ಕಾಂಗ್ರೆಸ್ ಆಗ್ರಹ
ವಿಶೇಷವೆಂದರೆ, ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ‘ಮಹಾಘಟಬಂಧನ್’ ಮೈತ್ರಿ ಸರ್ಕಾರದ ಬಹುಮತವನ್ನು ಸಾಬೀತುಪಡಿಸಲು ವಿಶ್ವಾಸಮತ ಯಾಚನೆಗೂ ಮುನ್ನ ಭಾರತೀಯ ಜನತಾ ಪಕ್ಷದ ವಿಜಯ್ ಕುಮಾರ್ ಸಿನ್ಹಾ ಅವರು ಇಂದು ಬಿಹಾರ ವಿಧಾನಸಭೆಯ ಸ್ಪೀಕರ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಜೆಡಿಯುನ ನರೇಂದ್ರ ನಾರಾಯಣ್ ಯಾದವ್ ಅವರ ಹೆಸರನ್ನು ಸಿನ್ಹಾ ಅವರು ಶಿಫಾರಸು ಮಾಡಿದ್ದರು.
We (RJD and JDU) have taken the pledge to work together for the development of Bihar. Leaders from across the country called me and congratulated me on this decision and I urged all of them to fight together in the 2024 elections: Bihar CM Nitish Kumar in Legislative Assembly pic.twitter.com/gUUmXuujMm
— ANI (@ANI) August 24, 2022