ಪಾಟ್ನಾ: 2024 ರ ಸಾರ್ವತ್ರಿಕ ಚುನಾವಣೆಯ ನಂತರ ಬಿಜೆಪಿಯೇತರ ಪಕ್ಷಗಳು ಕೇಂದ್ರದಲ್ಲಿ ಸರ್ಕಾರ ರಚಿಸಿದರೆ ದೇಶದ ಎಲ್ಲಾ ಹಿಂದುಳಿದ ರಾಜ್ಯಗಳಿಗೆ ವಿಶೇಷ ಸ್ಥಾನಮಾನ ನೀಡಲಾಗುವುದು ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಇಂದು ಘೋಷಿಸಿದ್ದಾರೆ.
ಇಂದು ಬಿಬಿಎಂಪಿ ವ್ಯಾಪ್ತಿಯ 4 ವಲಯಗಳ ವಿವಿಧ ಸ್ಥಳಗಳಲ್ಲಿ 29 ಒತ್ತುವರಿಗಳ ತೆರವು
ನಮಗೆ ಸರ್ಕಾರ ರಚಿಸಲು ಅವಕಾಶ ಸಿಕ್ಕರೆ ಹಿಂದುಳಿದ ರಾಜ್ಯಗಳಿಗೆ ವಿಶೇಷ ಸ್ಥಾನಮಾನ ನೀಡುವುದು ಖಚಿತ. ನಾನು ಕೇವಲ ಬಿಹಾರದ ಬಗ್ಗೆ ಮಾತ್ರವಲ್ಲ, ವಿಶೇಷ ಸ್ಥಾನಮಾನ ಪಡೆಯಬೇಕಾದ ಇತರ ರಾಜ್ಯಗಳ ಬಗ್ಗೆಯೂ ಮಾತನಾಡುತ್ತಿದ್ದೇನೆ ಎಂದು ಅವರು ಮಾಧ್ಯಮಗಳಿಗೆ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಕಳೆದ ತಿಂಗಳು ಬಿಜೆಪಿಯಿಂದ ಬೇರ್ಪಟ್ಟ ನಿತಿನ್ ಕುಮಾರ್, ತೇಜಸ್ವಿ ಯಾದವ್ ಅವರ ರಾಷ್ಟ್ರೀಯ ಜನತಾ ದಳ ಮತ್ತು ಕಾಂಗ್ರೆಸ್ ಬೆಂಬಲದೊಂದಿಗೆ ಬಿಹಾರದಲ್ಲಿ ಹೊಸ ಸರ್ಕಾರವನ್ನು ರಚಿಸಿದರು. 2007 ರಿಂದ ಬಿಹಾರಕ್ಕೆ ವಿಶೇಷ ಸ್ಥಾನಮಾನಕ್ಕಾಗಿ ಒತ್ತಾಯಿಸುತ್ತಿದ್ದಾರೆ. ಈ ವಿಷಯವನ್ನು ಜನತಾ ದಳವು ಕಾರ್ಯತಂತ್ರವಾಗಿ ಎತ್ತಿದೆ.
ಪ್ರಸ್ತುತ, ದೇಶದಲ್ಲಿ 11 ವಿಶೇಷ ವರ್ಗದ ರಾಜ್ಯಗಳಿವೆ. ಅವುಗಳೆಂದರೆ, ಅರುಣಾಚಲ ಪ್ರದೇಶ, ಅಸ್ಸಾಂ, ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ (ಈಗ ಕೇಂದ್ರಾಡಳಿತ ಪ್ರದೇಶ), ಮಣಿಪುರ, ಮೇಘಾಲಯ, ಮಿಜೋರಾಂ, ನಾಗಾಲ್ಯಾಂಡ್, ಸಿಕ್ಕಿಂ, ತ್ರಿಪುರಾ ಮತ್ತು ಉತ್ತರಾಖಂಡ್.
ವಿಶ್ವಕಪ್ ಟಿ20ಗೆ 15 ಸದಸ್ಯರ ಪಾಕಿಸ್ತಾನ ತಂಡ ಪ್ರಕಟ ; ‘ಶಾಹೀನ್ ಅಫ್ರಿದಿ’ ಕಮ್ಬ್ಯಾಕ್