ಬೆಂಗಳೂರು: ಚಿಕ್ಕಮಗಳೂರಿನಲ್ಲಿ ಸ್ಥಾಪಿಸಲಾಗಿದ್ದಂತ ಸರ್ಕಾರಿ ಮೆಡಿಕಲ್ ಕಾಲೇಜಿಗೆ ( Chikkamagaluru Government Medical College ) ಈ ವರ್ಷದಿಂದಲೇ 150 ಸೀಟುಗಳ ಭರ್ತಿಗೆ ರಾಷ್ಟ್ರೀಯ ವೈದ್ಯಕೀಯ ಆಯೋಗವು ಅನುಮತಿ ನೀಡಿದೆ. ಈ ಮೂಲಕ MBBS ವ್ಯಾಸಂಗದ ( MBBS Course ) ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಲಾಗಿದೆ.
ಈ ಕುರಿತಂತೆ ಟ್ವಿಟ್ಟರ್ ನಲ್ಲಿ ( Twitter ) ಮಾಹಿತಿ ಹಂಚಿಕೊಂಡಿರುವಂತ ವೈದ್ಯಕೀಯ ಹಾಗೂ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ( Minister Dr K Sudhakar ) ಅವರು, ಕಳೆದವಾರವಷ್ಟೇ ಹಾವೇರಿ ಮತ್ತು ಯಾದಗಿರಿಯ ನೂತನ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಪ್ರವೇಶಾತಿ ಆರಂಭಕ್ಕೆ ಅನುಮತಿ ನೀಡಿದ್ದ ರಾಷ್ಟ್ರೀಯ ವೈದ್ಯಕೀಯ ಆಯೋಗ (NMC) ಇಂದು ಚಿಕ್ಕಮಗಳೂರಿನ ನೂತನ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ 2022-23ನೇ ಶೈಕ್ಷಣಿಕ ಸಾಲಿನಿಂದ 150 ಎಂಬಿಬಿಎಸ್ ಸೀಟುಗಳೊಂದಿಗೆ ಪ್ರವೇಶಾತಿ ಆರಂಭಿಸಲು ಅನುಮತಿ ನೀಡಿದೆ ಎಂದು ತಿಳಿಸಿದ್ದಾರೆ.
ಕಳೆದವಾರವಷ್ಟೇ ಹಾವೇರಿ ಮತ್ತು ಯಾದಗಿರಿಯ ನೂತನ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಪ್ರವೇಶಾತಿ ಆರಂಭಕ್ಕೆ ಅನುಮತಿ ನೀಡಿದ್ದ ರಾಷ್ಟ್ರೀಯ ವೈದ್ಯಕೀಯ ಆಯೋಗ (NMC) ಇಂದು ಚಿಕ್ಕಮಗಳೂರಿನ ನೂತನ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ 2022-23ನೇ ಶೈಕ್ಷಣಿಕ ಸಾಲಿನಿಂದ 150 ಎಂಬಿಬಿಎಸ್ ಸೀಟುಗಳೊಂದಿಗೆ ಪ್ರವೇಶಾತಿ ಆರಂಭಿಸಲು ಅನುಮತಿ ನೀಡಿದೆ.
1/3 pic.twitter.com/TPWrZ8fLwA
— Dr Sudhakar K (@mla_sudhakar) August 4, 2022
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಂಪುಟದಲ್ಲಿ ಸಚಿವನಾಗಿ ಪ್ರಮಾಣ ವಚನ ಸ್ವೀಕರಿಸಿ 1 ವರ್ಷ ಪೂರೈಸಿದ ದಿನದಂದೇ ಈ ಸುದ್ದಿ ಬಂದಿರುವುದು ಸಂತಸವಾಗಿದೆ. ವೈದ್ಯಕೀಯ ಶಿಕ್ಷಣ ಸಚಿವನಾಗಿ ಕಳೆದ 3 ವರ್ಷಗಳಲ್ಲಿ ರಾಜ್ಯಕ್ಕೆ 4 ವೈದ್ಯಕೀಯ ಕಾಲೇಜು ಮತ್ತು 700 ಹೆಚ್ಚುವರಿ ಎಂಬಿಬಿಎಸ್ ಸೀಟು ಕಲ್ಪಿಸಿರುವುದು ಹೆಮ್ಮೆ ಹಾಗೂ ತೃಪ್ತಿ ಮೂಡಿಸದೆ ಎಂದು ಹೇಳಿದ್ದಾರೆ.
https://twitter.com/mla_sudhakar/status/1555189239322910720
ರಾಜ್ಯದ ವೈದ್ಯಕೀಯ ಶಿಕ್ಷಣ ಕ್ಷೇತ್ರವನ್ನು ಬಲಪಡಿಸುವ ನಿಟ್ಟಿನಲ್ಲಿ ನನ್ನ ಎಲ್ಲ ಪ್ರಯತ್ನಗಳಿಗೆ ಬೆಂಬಲ ನೀಡಿದ ನಿಕಟಪೂರ್ವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕರ್ನಾಟಕದ ಸಮಸ್ತ ಜನತೆಯ ಪರವಾಗಿ ಕೃತಜ್ಞತೆ ಸಲ್ಲಿಸುತ್ತೇನೆ ಎಂದಿದ್ದಾರೆ.
https://twitter.com/mla_sudhakar/status/1555189242745491457