ಬೆಂಗಳೂರು: ಇಂದು ಮಳೆ ಹಾನಿ ಪ್ರದೇಶ ವೀಕ್ಷಣೆಗಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಸಿಟಿ ರೌಂಡ್ಸ್ ಹಾಕಿದ್ದರು. ಈ ವೇಳೆ ಅವರು ನಗರದಲ್ಲಿ ಕಳೆದ ಮೂರು ದಿನಗಳ ಕಾಲ ಜಾಸ್ತಿ ಮಳೆಯಾಗಿದೆ. ಇದರಿಂದಾಗಿ ಅನೇಕ ಬಡಾವಣೆಗಳಲ್ಲಿ ನೀರು ತುಂಬಿಕೊಂಡು ಬೋಟ್ ನಲ್ಲಿ ತಿರುಗಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿಂದೆ ಬೋಟ್ನಲ್ಲಿ ತಿರುಗಾಡುವ ಪರಿಸ್ಥಿತಿ ಇರಲಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಹೇಳಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಮನೆಗಳಲ್ಲಿ ನೀರು ತುಂಬಿಕೊಂಡಿದೆ. ಸುಮಾರು 12 ಅಡಿ ನೀರು ಇತ್ತು. ಈಗ 4 ಅಡಿ ನೀರು ಇದೆ. ಮನೆಯೆಲ್ಲಾ ಖಾಲಿ ಮಾಡಿಕೊಂಡು ಹೋಗಿದ್ದಾರೆ ಎಂದರು.
ಇನ್ನು ನಮ್ಮ ಸರ್ಕಾರವಿದ್ದಾಗ ರಾಜಕಾಲುವೆಗಳನ್ನು ತೆರವುಗೊಳಿಸುವ ಕ್ರಮ ಕೈಗೊಂಡಿದ್ದೇವೆ. ಆದರೆ ಈಗಿನ ಸರ್ಕಾರ ಯಾವುದೇ ರೀತಿಯ ಕ್ರಮ ಕೈಗೊಂಡಿಲ್ಲ. ನಮ್ಮ ಸರ್ಕಾರದಲ್ಲಿ 1953 ಒತ್ತುವರಿ ಜಾಗವನ್ನು ನಾವು ಐಡೆಂಟಿಟಿ ಮಾಡಿದ್ದೇವೆ.
1,300 ಒತ್ತುವರಿ ಜಾಗವನ್ನು ತೆರವು ಮಾಡಿದ್ದೀವಿ. 653 ಒತ್ತವರಿ ಜಾಗವನ್ನು ಇನ್ನೂ ಉಳ್ಕೊಂಡಿವೆ. ನಮ್ಮ ಸರ್ಕಾರ ಹೋಯ್ತು. ಈ ಬಿಜೆಪಿ ಸರ್ಕಾರದವರು ಇದನ್ನು ಮುಂದುವರಿಸಿದರೆ ಈ ಪರಿಸ್ಥಿತಿ ಆಗ್ತಿರಲಿಲ್ಲ ಎಂದು ಸರ್ಕಾರದ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.