ಚಿತ್ರದುರ್ಗ: ಪೋಕ್ಸೋ ಕೇಸ್ ನಲ್ಲಿ ಬಂಧಿಸಲ್ಪಟ್ಟು, ಜೈಲು ಸೇರಿರುವಂತ ಮುರುಘಾ ಶ್ರೀಗಳು ಸಲ್ಲಿಸಿದ್ದಂತ ಜಾಮೀನು ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 16ಕ್ಕೆ ನ್ಯಾಯಾಲಯ ಮುಂದೂಡಿಕೆ ಮಾಡಿದೆ. ಈ ಮೂಲಕ ಇಂದು ಸ್ವಾಮೀಜಿಗೆ ಜಾಮೀನು ದೊರೆಯದೇ ಜೈಲೇ ಗತಿ ಎಂಬಂತೆ ಆಗಿದೆ.
ವಿದ್ಯಾರ್ಥಿನಿಯರಿಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ, ಮುರುಘಾ ಮಠದ ಡಾ.ಶಿವಮೂರ್ತಿ ಶಿವಶರಣರ ವಿರುದ್ಧ ಪೋಕ್ಸೋ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಬಳಿಕ ಅವರನ್ನು ಬಂಧಿಸಲಾಗಿತ್ತು. ಇದೀಗ ಜೈಲಿನಲ್ಲಿ ಸ್ವಾಮೀಜಿಯಿದ್ದಾರೆ.
BIG BREAKING NEWS: ಸ್ಯಾಂಡಲ್ ವುಡ್ ನಟ ಮಂಡ್ಯ ರವಿ ಸ್ಥಿತಿ ಗಂಭೀರ | Actor Mandya Ravi
ಈ ಪ್ರಕರಣದಲ್ಲಿ ಮುರುಘಾ ಶ್ರೀಗಳ ಪರ ವಕೀಲರು ಚಿತ್ರದುರ್ಗದ 2ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ ಗೆ ಜಾಮೀನಿಗಾಗಿ ಅರ್ಜಿಯನ್ನು ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದಂತ ಕೋರ್ಟ್, ಇಂದು ಸಂಜೆ 4.30ಕ್ಕೆ ಅರ್ಜಿಯ ವಿಚಾರಣೆ ಮುಂದೂಡಿತ್ತು.
ಈ ಬಳಿಕ ಅರ್ಜಿಯ ವಿಚಾರಣೆ ಆರಂಭಿಸಿದಂತ ನ್ಯಾಯಪೀಠವು, ಈ ಜಾಮೀನು ಅರ್ಜಿಗೆ ಆಕ್ಷೇಪಣೆಗಳೇನಾದರೂ ಇದ್ದರೇ ಸಲ್ಲಿಸುವಂತೆ ಸರ್ಕಾರಿ ವಕೀಲರಿಗೆ ಸೂಚಿಸಿ, ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 16ಕ್ಕೆ ಮುಂದೂಡಿಕೆ ಮಾಡಿದೆ.