ಬೆಂಗಳೂರು : ಕೇರಳದಲ್ಲಿ ನಿಪಾ ವೈರಸ್ ಕಂಡುಬಂದಿರುವ ಹಿನ್ನೆಲೆಯಲ್ಲಿ ಕೇರಳ ಗಡಿ ಭಾಗದಲ್ಲಿ ಎಚ್ಚರಿಕೆ ವಹಿಸುತೆ ಸೂಚಿಸಲಾಗಿದೆ ಎಂದು ಇದೇ ವೇಳೆ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ರಾಜ್ಯದಲ್ಲಿ ನಿಪಾ ವೈರಸ್ ನ ಯಾವುದೇ ಪ್ರಕರಣಗಳು ಪತ್ತೆಯಾಗಿಲ್ಲ. ರಾಜ್ಯದಿಂದ ಕೇರಳಕ್ಕೆ ಪ್ರವಾಸ ಕೈಗೊಳ್ಳುವವರು ಎಚ್ಚರಿಕೆ ವಹಿಸಿ ಎಂದು ಮಾರ್ಗಸೂಚಿ ಹೊರಡಿಸಿದ್ದೇವೆ. ತೀರಾ ಅಗತ್ಯವಾಗಿದ್ದರೆ ಮಾತ್ರ ಕೇರಳ ಪ್ರವಾಸ ಕೈಗೊಳ್ಳಿ. ಅನಗತ್ಯವಾಗಿ ಕೇರಳಿಕ್ಕೆ ತೆರಳುವುದು ಬೇಡ ಎಂದು ರಾಜ್ಯದ ಜನರಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ ಮಾಡಿದರು.
ರಾಜ್ಯದಲ್ಲಿ ಇತ್ತಿಚೆಗೆ ಝೀಕಾ ವೈರಸ್ ಪತ್ತೆಯಾಗಿತ್ತು. ಝೀಕಾ ವೈರಸ್ ಅಷ್ಟೊಂದು ಅಪಾಯಕಾರಿಯಲ್ಲ. ಆದರೆ ನಿಪಾ ಬಗ್ಗೆ ಎಚ್ಚರಿಕೆ ವಹಿಸುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಕೂಡ ಮುಂಜಾಗೃತೆ ಕ್ರಮಗಳನ್ನ ಅನುಸರಿಸಲಿದೆ ಎಂದರು.