ಬೆಂಗಳೂರು : ಕರ್ನಾಟಕದ ನೂತನ ಮುಖ್ಯಮಂತ್ರಿ ಆದ ಎರಡನೇ ದಿನಕ್ಕೆ ಆಡಳಿತ ಯಂತ್ರಕ್ಕೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಚುರುಕು ಮುಟ್ಟಿಸಿದ್ದಾರೆ. ಸಿಎಂ ಆದ ಎರಡನೇ ದಿನವೇ ಆಡಳಿತ ಯಂತ್ರಕ್ಕೆ ಡಿಕೆ ಶಿವಕುಮಾರ್ ಅಧಿಕಾರ ವಹಿಸಿಕೊಳ್ಳುತ್ತಿದ್ದಂತೆಯೇ ಎಲ್ಲಾ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆಯ ಮೇಲೆ ಸಭೆ ನಡೆಸಿದ್ದಾರೆ.
ಇಂದು ವಿಧಾನಸೌಧದಲ್ಲಿ ಎಲ್ಲಾ ಇಲಾಕವಾರು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಿಎಂ ಡಿಕೆ ಶಿವಕುಮಾರ್ ಅಧಿಕಾರಿಗಳು ಯಾರ ಮಾತು ಕೇಳದೆ ಕೆಲಸ ಮಾಡಬೇಕು. ಯಾವುದೇ ಒತ್ತಡಕ್ಕೆ ಅಧಿಕಾರಿಗಳು ಮಣಿಯಬಾರದು. ಅಧಿಕಾರಿಗಳಿಂದ ಉತ್ತಮ ಕೆಲಸದ ನಿರೀಕ್ಷೆ ಹೊಂದಿದ್ದೇನೆ. ನಮ್ಮ ಸರ್ಕಾರದಲ್ಲಿ ಜಾತಿ ಧರ್ಮ ರೆಕಮಂಡ್ ಇರಲ್ಲ ಪಾರದರ್ಶಕವಾಗಿ ಕೆಲಸ ಮಾಡಲು ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದೇನೆ 15 ದಿನದಲ್ಲಿ ಆಕ್ಷನ್ ಕಾರ್ಡ್ ಸಿದ್ಧಪಡಿಸಲು ಸೂಚನೆ ನೀಡಿದ್ದೇನೆ ಎಂದರು.
ಎಸ್ಐಆರ್ ನಡೆಯುತ್ತಿದೆ ಯಾರು ಮತದಾನದ ಹಕ್ಕು ಕಳೆದುಕೊಳ್ಳಬಾರದು. ತಪ್ಪು ದಾರಿಗೆ ಎಳೆಯದೆ ಎಸ್ಐಆರ್ ನಡಿಯಬೇಕು ಎಂದು ಡಿಕೆ ಶಿವಕುಮಾರ್ ಅಧಿಕಾರಿಗಳಿಗೆ ಸೂಚಿಸಿದರು. ರಾಜ್ಯದ ಎಲ್ಲಾ ಮತದಾರರಿಗೆ ಎಸ್ಐಆರ್ ಬಗ್ಗೆ ಜಾಗೃತಿ ಮೂಡಿಸಬೇಕು. ಎಸ್ಐಆರ್ ಕುರಿತು ಎಲ್ಲಾ ಸಿದ್ಧತೆ ಮಾಡಿಕೊಳ್ಳಲು ಸೂಚನೆ ನೀಡಿದರು. ಜನರಿಗೆ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸವನ್ನು ಮಾಡಬೇಕು ತಾಲೂಕು ಗ್ರಾಮಗಳಿಗೆ ತೆರಳಿ ಅಧಿಕಾರಿಗಳು ಕೆಲಸ ಮಾಡಬೇಕು. ಎಲ್ಲಾ ಇಲಾಖೆಗಳ ಬಾಕಿ ಕೆಲಸದ ಪಟ್ಟಿ ನೀಡಬೇಕು ಎಂದು ಸೂಚಿಸಿದರು








