ಚಿಕ್ಕಬಳ್ಳಾಪುರ : ಇಂದು ಬೆಳಗ್ಗೆ 10 ಗಂಟೆಯಿಂದ ಮಾ. 25 ರವರೆಗೆ (ನಾಳೆ) ನಂದಿಗಿರಿಧಾಮಕ್ಕೆ ಪ್ರವಾಸಿಗರ ಪ್ರವೇಶ ನಿಷೇಧ ಹೇರಲಾಗಿದೆ.
ಚಿಕ್ಕಬಳ್ಳಾಪುರಕ್ಕೆ ಪ್ರಧಾನಿ ಮೋದಿ ಭೇಟಿ ಹಿನ್ನೆಲೆ ಇಂದು ಬೆಳಗ್ಗೆ 10 ಗಂಟೆಯಿಂದ ಮಾ.25 ರ ಮಧ್ಯಾಹ್ನ 2 ಗಂಟೆವರೆಗೆ ಪ್ರವಾಸಿಗರ ಪ್ರವೇಶಕ್ಕೆ ನಿಷೇಧ ಹೇರಲಾಗಿದೆ. ನಂದಿಗಿರಿಧಾಮದ ಅತಿಥಿ ಗೃಹದಲ್ಲಿ ಪೊಲೀಸರು, ಅಧಿಕಾರಿಗಳು ತಂಗಲಿದ್ದು, ಈ ಹಿನ್ನೆಲೆ ವಾಹನ ದಟ್ಟಣೆ ಹೆಚ್ಚಾಗದಂತೆ ಕ್ರಮ ಕೈಗೊಳ್ಳಲು ಜಿಲ್ಲಾಡಳಿತ ಈ ನಿರ್ಧಾರ ಕೈಗೊಂಡಿದೆ.
ರಾಜ್ಯದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲು ಮತ್ತು ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆಯ ಮಹಾಸಂಗಮ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮಾರ್ಚ್ 25 ರಂದು ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಮಾ.25ರಂದು ಮೆಡಿಕಲ್ ಕಾಲೇಜನ್ನು ಪ್ರಧಾನಿ ಮೋದಿ ಉದ್ಘಾಟಿಸಲಿದ್ದಾರೆ. ಸತ್ಯಸಾಯಿ ಲೋಕಸೇವಾ ಸಂಸ್ಥೆ 350 ಕೋಟಿ ರೂ ವೆಚ್ಚದಲ್ಲಿ ಕಾಲೇಜು ನಿರ್ಮಾಣವಾಗಿದೆ. ಮಾ.25 ರಂದು ಹೆಚ್ ಎ ಎಲ್ ಏರ್ ಪೋರ್ಟ್ ಗೆ ಆಗಮಿಸುವ ಮೋದಿ ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಚಿಕ್ಕಬಳ್ಳಾಪುರಕ್ಕೆ ತಲುಪಲಿದ್ದಾರೆ. ನಂತರ ಮಧ್ಯಾಹ್ನ 12:55 ಕ್ಕೆ ವೈಟ್ ಫೀಲ್ಡ್ ಮೆಟ್ರೋ ಹೊಸ ಮಾರ್ಗ ಉದ್ಘಾಟನೆ ಮಾಡಲಿದ್ದಾರೆ. ಮಾರ್ಚ್ 25 ರ ಬೆಳಗ್ಗೆ ದೆಹಲಿಯಿಂದ ಬೆಂಗಳೂರಿಗೆ ಆಗಮಿಸುವ ಪ್ರಧಾನಿ ಮೋದಿ ಅವರು ವೈಟ್ ಫೀಲ್ಡ್ ನಲ್ಲಿ ಮಹಾದೇವಪುರ ಕ್ಷೇತ್ರದ ಸತ್ಯ ಸಾಯಿ ಆಶ್ರಮದಿಂದ ವೈಟ್ ಫೀಲ್ಡ್ ಮೆಟ್ರೋ ಸ್ಟೇಷನ್ ವರೆಗೂ ಸುಮಾರು 1 ಕಿ.ಮೀ. ರೋಡ್ ಶೋ ನಡೆಸಲಿದ್ದಾರೆ.. ನಂತರ ಮಧ್ಯಾಹ್ನ ದಾವಣಗೆರೆಯಲ್ಲಿ ನಡೆಯಲಿರುವ ಬಿಜೆಪಿ ವಿಜಯ ಸಂಕಲ್ಪ ರಥಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಟೇಕ್ ಆಫ್ ಆದ ಕೆಲವೇ ಹೊತ್ತಿಗೆ ಮನೆಗೆ ಡಿಕ್ಕಿ ಹೊಡೆದ ಗ್ಲೈಡರ್ ವಿಮಾನ, ಇಬ್ಬರ ಸ್ಥಿತಿ ಗಂಭೀರ | WATCH VIDEO
BREAKING NEWS : ‘ರಾಹುಲ್ ಗಾಂಧಿ’ಗೆ ಜೈಲು ಶಿಕ್ಷೆ ಪ್ರಕಟ ಹಿನ್ನೆಲೆ ; ನಾಳೆ ವಿಪಕ್ಷಗಳ ಸಭೆ ಕರೆದ ‘ಕಾಂಗ್ರೆಸ್’
ಟೇಕ್ ಆಫ್ ಆದ ಕೆಲವೇ ಹೊತ್ತಿಗೆ ಮನೆಗೆ ಡಿಕ್ಕಿ ಹೊಡೆದ ಗ್ಲೈಡರ್ ವಿಮಾನ, ಇಬ್ಬರ ಸ್ಥಿತಿ ಗಂಭೀರ | WATCH VIDEO
BREAKING NEWS : ‘ರಾಹುಲ್ ಗಾಂಧಿ’ಗೆ ಜೈಲು ಶಿಕ್ಷೆ ಪ್ರಕಟ ಹಿನ್ನೆಲೆ ; ನಾಳೆ ವಿಪಕ್ಷಗಳ ಸಭೆ ಕರೆದ ‘ಕಾಂಗ್ರೆಸ್’