Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕೇರಳದಲ್ಲಿ ಸಚಿವ ಜಮೀರ್ ಅಹ್ಮದ್ ಪ್ರಚಾರ ನಡೆಸಿದ್ದ 33 ಕ್ಷೇತ್ರಗಳಲ್ಲಿ 24ರಲ್ಲಿ ಯುಡಿಎಫ್ ಭರ್ಜರಿ ಗೆಲುವು

04/05/2026 9:54 PM

BREAKING: ಭವಾನಿಪುರದಲ್ಲಿ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿಗೆ ಸೋಲು, ಅಧಿಕಾರದತ್ತ ಬಿಜೆಪಿ!

04/05/2026 9:43 PM

ಬೆಂಗಳೂರಿನ ಮೆಟ್ರೋ ಪ್ರಯಾಣಿಕರ ಗಮನಕ್ಕೆ: ಕಬ್ಬನ್ ಪಾರ್ಕ್ ನಿಲ್ದಾಣದ ತಾತ್ಕಾಲಿಕವಾಗಿ ಕ್ಲೋಸ್ | Namma Metro

04/05/2026 9:33 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬಗರ್ ಹುಕುಂ ಅರ್ಜಿ ವಿಲೇವಾರಿ ಮಾಡದೇ ಒಕ್ಕಲೆಬ್ಬಿಸುವಂತಿಲ್ಲ: ಸಚಿವ ಕೃಷ್ಣ ಬೈರೇಗೌಡ ಖಡಕ್ ವಾರ್ನಿಂಗ್
KARNATAKA

ಬಗರ್ ಹುಕುಂ ಅರ್ಜಿ ವಿಲೇವಾರಿ ಮಾಡದೇ ಒಕ್ಕಲೆಬ್ಬಿಸುವಂತಿಲ್ಲ: ಸಚಿವ ಕೃಷ್ಣ ಬೈರೇಗೌಡ ಖಡಕ್ ವಾರ್ನಿಂಗ್

By kannadanewsnow0911/03/2025 6:26 PM

ಬೆಂಗಳೂರು : ಬಡ ಹಾಗೂ ಭೂ ರಹಿತ ರೈತರಿಗೆ ಬಗರ್ ಹುಕುಂ ಯೋಜನೆಯ ಅಡಿಯಲ್ಲಿ ಭೂ ಮಂಜೂರು ಮಾಡಲು ರಾಜ್ಯಾದ್ಯಂತ ಈವರೆಗೆ ಒಟ್ಟಾರೆ 185 ಸಮಿತಿಗಳನ್ನು ರಚಿಸಲಾಗಿದೆ, ಅರ್ಜಿ ವಿಲೇವಾರಿಯನ್ನೂ ತ್ವರಿತಗೊಳಿಸಲಾಗುತ್ತಿದೆ. ಇತ್ತೀಚಿನ ವರ್ಷಗಳಲ್ಲೇ ಇದೊಂದು ಹೊಸ ದಾಖಲೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಅಭಿಪ್ರಾಯಪಟ್ಟರು.

ಸೋಮವಾರು ವಿಧಾನಸಭೆಯ ಪ್ರಶ್ನೋತ್ತರ ಅವಧಿಯಲ್ಲಿ ಬೀದರ್ ದಕ್ಷಿಣ ಕ್ಷೇತ್ರದ ಬಿಜೆಪಿ ಶಾಸಕರಾದ ಶೈಲೇಂದ್ರ ಬೆಲ್ದಾಳೆ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವ ಕೃಷ್ಣ ಬೈರೇಗೌಡ ಅವರು, “ಕಳೆದ ಹಲವು ವರ್ಷಗಳಿಗೆ ಹೋಲಿಸಿದರೆ, ಅತಿಹೆಚ್ಚು ಬಗರ್ ಹುಕುಂ ಸಮಿತಿಗಳನ್ನು ರಚಿಸಿದ್ದು ಪ್ರಸ್ತುತ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲೇ. ಅಲ್ಲದೆ, ಅರ್ಜಿ ವಿಲೇವಾರಿಗೊಳಿಸಿ ಅರ್ಹ ರೈತರಿಗೆ ಭೂ ಮಂಜೂರುಗೊಳಿಸುವ ಪ್ರಕ್ರಿಯೆಗೂ ಸಾಕಷ್ಟು ವೇಗ ತುಂಬಲಾಗುತ್ತಿದೆ. ಸ್ವತಃ ನಾನೇ ನೇರವಾಗಿ ಪರಿಶೀಲಿಸಿ ವಿಲೇ ಕೆಲಸಗಳನ್ನು ಶೀಘ್ರ ಮುಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಈ ಸಂಬಂಧ ಅಧಿಕಾರಿಗಳಿಗೆ ಗಡುವು ನೀಡಿದ್ದು ನಿಜ, ಸರ್ಕಾರವೇ ಅದನ್ನು ಬೆನ್ನಟ್ಟಿರುವುದೂ ನಿಜ” ಎಂದು ತಿಳಿಸಿದರು.

ಈ ವೇಳೆ ಮಧ್ಯಪ್ರವೇಶಿಸಿದ ಶಾಸಕ ಶೈಲೇಂದ್ರ ಬೆಲ್ದಾಳೆ, “ರಾಜ್ಯದಲ್ಲಿ ಎಲ್ಲೂ ಸರಿಯಾಗಿ ಬಗರ್ ಹುಕುಂ ಸಮಿತಿ ರಚಿಸಿಯೇ ಇಲ್ಲ. ಬೀದರ್ ಜಿಲ್ಲೆಯ ನಾಲ್ಕು ಕ್ಷೇತ್ರಗಳಲ್ಲಿ ಬಿಜೆಪಿ ಶಾಸಕರಿದ್ದು, ಆ ಕಾರಣಕ್ಕಾಗಿಯೇ ಸರ್ಕಾರ ಈವರೆಗೂ ಬಗರ್ ಹುಕುಂ ಸಮಿತಿ ಸಚಿಸಿಲ್ಲವೇ..? ಎಂದು ಮರುಪ್ರಶ್ನೆ ಹಾಕಿದರು.

ಶಾಸಕರ ಅನುಮಾನಗಳಿಗೆ ಸಮಂಜಸ ಉತ್ತರದ ಮೂಲಕ ತೆರೆ ಎಳೆಯಲು ಮುಂದಾದ ಸಚಿವರು, “ಬೀದರ್ ದಕ್ಷಿಣ ಕ್ಷೇತ್ರದಲ್ಲಿ ಸಮಿತಿ ರಚನೆ ಆಗಿಲ್ಲ, ಆಗಬೇಕು ಎಂದು ಒಪ್ಪಿಕೊಳ್ಳುತ್ತೇನೆ. ಅಲ್ಲದೆ, ಆದಷ್ಟು ಶೀಘ್ರದಲ್ಲಿ ಅವರ ಕ್ಷೇತ್ರದಲ್ಲಿ ಸಮಿತಿ ರಚನೆಗೆ ಸಂಬಂಧಿಸಿ ಕ್ರಮ ತೆಗೆದುಕೊಳ್ಳಲು ನಾನು ಬದ್ಧನಾಗಿದ್ದೇನೆ. ಆದರೆ, ರಾಜ್ಯಾದ್ಯಂತ ಎಲ್ಲೂ ಬಗರ್ ಹುಕುಂ ಸಮಿತಿಯೇ ರಚನೆಯಾಗಿಲ್ಲ ಎಂದು ಆಧಾರವಿಲ್ಲದೆ ಹೇಳುವುದು ಸರಿಯಲ್ಲ. ರಾಜ್ಯಾದ್ಯಂತ ದಾಖಲೆಯ 185 ಸಮಿತಿ ರಚನೆ ಆಗಿದೆ. ಆರ್ಟಿಐ ನಲ್ಲಿ ಪ್ರಶ್ನೆ ಕೇಳಿದರೂ ಸೂಕ್ತ ಮಾಹಿತಿ ನೀಡುತ್ತೇನೆ” ಎಂದು ಸವಾಲೆಸೆದರು.

ಮುಂದುವರೆದು, “ಬೀದರ್ ಜಿಲ್ಲೆಯ ನಾಲ್ಕು ತಾಲೂಕುಗಳಷ್ಟೇ ಅಲ್ಲ, ಏಳೂ ತಾಲೂಕುಗಳಲ್ಲೂ ಬಗರ್ ಹುಕುಂ ಸಮಿತಿ ರಚಿಸಲಾಗಿಲ್ಲ. ಅಲ್ಲದೆ, ರಾಜ್ಯದ ಇನ್ನೂ 13 ಕ್ಷೇತ್ರಗಳಲ್ಲಿ ಸಮಿತಿ ರಚನೆ ಕೆಲಸ ಬಾಕಿ ಇದೆ. ಈ ಸಂಬಂಧ ನಾನು ಅವರಿವರ ಮೇಲೆ ಸಬೂಬು ಹೇಳುವುದಿಲ್ಲ. ಏಕೆಂದರೆ ಇದು ನನ್ನ ಜವಾಬ್ದಾರಿ. ಹೀಗಾಗಿ ಬೀದರ್ ದಕ್ಷಿಣ ಸೇರಿದಂತೆ ಬಗರ್ ಹುಕುಂ ಸಮಿತಿ ರಚನೆಗೆ ಬಾಕಿ ಇರುವ ಎಲ್ಲಾ ಕ್ಷೇತ್ರದಲ್ಲೂ ಮುಂದಿನ ಹತ್ತು ದಿನಗಳಲ್ಲಿ ಸಮಿತಿ ರಚಿಸಲು ಅಗತ್ಯ ಕ್ರಮ ತೆಗೆದುಕೊಳ್ಳಲು ನಾನು ಬದ್ಧನಾಗಿದ್ದೇನೆ” ಎಂದು ಉತ್ತರಿಸಿದರು.

ಅರ್ಜಿ ವಿಲೇಯಾಗದೆ ರೈತರಿಗೆ ತೊಂದರೆ ಸಲ್ಲ..!

ಬಗರ್ ಹುಕುಂ ಯೋಜನೆಯ ಅಡಿ ಸಲ್ಲಿಸಲಾಗಿರುವ ನಮೂನೆ 53 ಹಾಗೂ ನಮೂನೆ 57 ಅರ್ಜಿ ವಿಲೇವಾರಿಯಾಗದೆ ಅಧಿಕಾರಿಗಳು ರೈತರಿಗೆ ತೊಂದರೆ ನೀಡುವುದು ಅಥವಾ ಒಕ್ಕಲೆಬ್ಬಿಸುವಂತಿಲ್ಲ. ರಾಜ್ಯದಲ್ಲಿ ಇಂತಹ ಯಾವುದೇ ಪ್ರಕರಣ ಕಂಡು ಬಂದರೆ ನನ್ನ ಗಮನಕ್ಕೆ ತನ್ನಿ ಎಂದು ಸಚಿವ ಕೃಷ್ಣ ಬೈರೇಗೌಡ ಸದನಕ್ಕೆ ತಿಳಿಸಿದರು.

ಈ ಬಗ್ಗೆಯೂ ವಿಸ್ಕೃತ ಮಾಹಿತಿ ನೀಡಿದ ಅವರು, “ರೈತರು ಭೂ ಮಂಜೂರಾತಿಗಾಗಿ ನಮೂನೆ 53, ನಮೂನೆ 57 ಅರ್ಜಿ ಹಾಕಿದ್ದರೆ, ಅರ್ಜಿ ಇತ್ಯರ್ಥ ಆಗುವ ಮೊದಲು ಅವರನ್ನು ಭೂಮಿಯಿಂದ ಒಕ್ಕಲೆಬ್ಬಿಸಲು ಸಾಧ್ಯವಿಲ್ಲ. ಅಲ್ಲದೆ, ಅರ್ಜಿ ಹಾಕಿರುವ ಕಡೆ ಬೆಳೆ ತೆಗೆದುಕೊಳ್ಳಲೂ ಸಹ ಅಧಿಕಾರಿಗಳು ಅಡ್ಡಿಪಡಿಸಬಾರದು. ಈ ಸಂಬಂಧ ಸ್ಪಷ್ಟವಾದ ಕಾನೂನನ್ನು ರೂಪಿಸಲಾಗಿದೆ. ಭಾಗಶಃ ಬಗರ್ ಹುಕುಂ ಯೋಜನೆಗೆ ಸಂಬಂಧಿಸಿ ಇಷ್ಟು ಸ್ಪಷ್ಟವಾಗಿ ಹಿಂದೆ ಯಾವತ್ತು ಸುತ್ತೋಲೆ ಹೊರಡಿಸಿಲ್ಲ” ಎಂದು ಅವರು ಅಭಿಪ್ರಾಯಪಟ್ಟರು.

ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿರುವ ತನಕ ಗ್ಯಾರಂಟಿ ನಿಲ್ಲಿಸಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್ ಘೋಷಣೆ

BREAKING: ಬೆಂಗಳೂರಲ್ಲಿ ‘ವರುಣನ ಆರ್ಭಟ’: ಬೇಸಿಗೆಯ ಬಿಸಿಲಿಗೆ ತತ್ತರಿಸಿದ್ದ ಜನರಿಗೆ ತಂಪೆರೆದ ‘ಮಳೆರಾಯ’ | Rain in Bengaluru

Share. Facebook Twitter LinkedIn WhatsApp Email

Related Posts

ಕೇರಳದಲ್ಲಿ ಸಚಿವ ಜಮೀರ್ ಅಹ್ಮದ್ ಪ್ರಚಾರ ನಡೆಸಿದ್ದ 33 ಕ್ಷೇತ್ರಗಳಲ್ಲಿ 24ರಲ್ಲಿ ಯುಡಿಎಫ್ ಭರ್ಜರಿ ಗೆಲುವು

04/05/2026 9:54 PM1 Min Read

ಬೆಂಗಳೂರಿನ ಮೆಟ್ರೋ ಪ್ರಯಾಣಿಕರ ಗಮನಕ್ಕೆ: ಕಬ್ಬನ್ ಪಾರ್ಕ್ ನಿಲ್ದಾಣದ ತಾತ್ಕಾಲಿಕವಾಗಿ ಕ್ಲೋಸ್ | Namma Metro

04/05/2026 9:33 PM1 Min Read

ಮಲೆನಾಡಿನ ವಿನಾಶಕ್ಕೆ ಬಿಡುವುದಿಲ್ಲ: ಬೇಸೂರು ಅಣು ಸ್ಥಾವರಕ್ಕೆ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ತೀವ್ರ ವಿರೋಧ

04/05/2026 9:24 PM2 Mins Read
Recent News

ಕೇರಳದಲ್ಲಿ ಸಚಿವ ಜಮೀರ್ ಅಹ್ಮದ್ ಪ್ರಚಾರ ನಡೆಸಿದ್ದ 33 ಕ್ಷೇತ್ರಗಳಲ್ಲಿ 24ರಲ್ಲಿ ಯುಡಿಎಫ್ ಭರ್ಜರಿ ಗೆಲುವು

04/05/2026 9:54 PM

BREAKING: ಭವಾನಿಪುರದಲ್ಲಿ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿಗೆ ಸೋಲು, ಅಧಿಕಾರದತ್ತ ಬಿಜೆಪಿ!

04/05/2026 9:43 PM

ಬೆಂಗಳೂರಿನ ಮೆಟ್ರೋ ಪ್ರಯಾಣಿಕರ ಗಮನಕ್ಕೆ: ಕಬ್ಬನ್ ಪಾರ್ಕ್ ನಿಲ್ದಾಣದ ತಾತ್ಕಾಲಿಕವಾಗಿ ಕ್ಲೋಸ್ | Namma Metro

04/05/2026 9:33 PM

ಮಲೆನಾಡಿನ ವಿನಾಶಕ್ಕೆ ಬಿಡುವುದಿಲ್ಲ: ಬೇಸೂರು ಅಣು ಸ್ಥಾವರಕ್ಕೆ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ತೀವ್ರ ವಿರೋಧ

04/05/2026 9:24 PM
State News
KARNATAKA

ಕೇರಳದಲ್ಲಿ ಸಚಿವ ಜಮೀರ್ ಅಹ್ಮದ್ ಪ್ರಚಾರ ನಡೆಸಿದ್ದ 33 ಕ್ಷೇತ್ರಗಳಲ್ಲಿ 24ರಲ್ಲಿ ಯುಡಿಎಫ್ ಭರ್ಜರಿ ಗೆಲುವು

By kannadanewsnow0904/05/2026 9:54 PM KARNATAKA 1 Min Read

ತಿರುವನಂತಪುರಂ: ಕೇರಳ ವಿಧಾನಸಭಾ ಚುನಾವಣೆಯಲ್ಲಿ ಯುಡಿಎಫ್ (UDF) ಮೈತ್ರಿಕೂಟವು ಭರ್ಜರಿ ಜಯಭೇರಿ ಬಾರಿಸಿದೆ. ಈ ಚುನಾವಣಾ ಯಶಸ್ಸಿನಲ್ಲಿ ಕರ್ನಾಟಕದ ವಸತಿ…

ಬೆಂಗಳೂರಿನ ಮೆಟ್ರೋ ಪ್ರಯಾಣಿಕರ ಗಮನಕ್ಕೆ: ಕಬ್ಬನ್ ಪಾರ್ಕ್ ನಿಲ್ದಾಣದ ತಾತ್ಕಾಲಿಕವಾಗಿ ಕ್ಲೋಸ್ | Namma Metro

04/05/2026 9:33 PM

ಮಲೆನಾಡಿನ ವಿನಾಶಕ್ಕೆ ಬಿಡುವುದಿಲ್ಲ: ಬೇಸೂರು ಅಣು ಸ್ಥಾವರಕ್ಕೆ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ತೀವ್ರ ವಿರೋಧ

04/05/2026 9:24 PM

ಸಾಗರದ ಬೇಸೂರು ಅಣು ಸ್ಥಾವರಕ್ಕೆ ವಿರೋಧ: ದಾಖಲೆ ನೀಡದಿದ್ದರೆ ಕಾನೂನುಭಂಗ ಚಳವಳಿ- ತೀ.ನ.ಶ್ರೀನಿವಾಸ್ ಎಚ್ಚರಿಕೆ

04/05/2026 8:21 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.