ತುಮಕೂರು: ನಾಳೆ ಅಯೋಧ್ಯೆ ರಾಮಮಂದಿರಲ್ಲಿ ಶ್ರೀರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆ, ಅಯೋಧ್ಯೆ ರಾಮ ಮಂದಿರ ಉದ್ಘಾಟನೆ, ರಾಮ ಮೂರ್ತಿಗೆ ಪ್ರಾಣ ಪ್ರತಿಷ್ಠಾಪನೆ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ. ಈ ವೇಳೆಯಲ್ಲೇ ವಿವಿಧ ರಾಜ್ಯಗಳು ನಾಳೆ ಸರ್ಕಾರಿ ರಜೆ ಘೋಷಣೆ ಮಾಡಿವೆ. ಆದೇ ರೀತಿ ಕರ್ನಾಟಕದಲ್ಲೂ ನಾಳೆ ಸರ್ಕಾರಿ ರಜೆ ಘೋಷಣೆ ಮಾಡಬೇಕು ಎಂಬುದು ಹಲವರ ಒತ್ತಾಯವಾಗಿತ್ತು. ಆದ್ರೇ ನಾಳೆ ಕರ್ನಾಟಕದಲ್ಲಿ ಸರ್ಕಾರಿ ರಜೆ ಘೋಷಣೆ ಮಾಡಲ್ಲ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ಸ್ಪಷ್ಟ ಪಡಿಸಿದ್ದಾರೆ.
ಇಂದು ತುಮಕೂರಿನಲ್ಲಿ ಕರ್ನಾಟಕ ರತ್ನ ಶತಾಯುಷಿ ಪರಮಪೂಜ್ಯ ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮಿಗಳ ಸ್ಮರಣಾರ್ಥ ನಿರ್ಮಿಸಿರುವ ಸ್ಮೃತಿ ವನ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ನಾಳೆ ನಾನು ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ನೂತನವಾಗಿ ನಿರ್ಮಿಸಿರುವಂತ ರಾಮ ಮಂದಿರವನ್ನು ಉದ್ಘಾಟನೆ ಮಾಡಲಿದ್ದೇನೆ. ಆ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿದ್ದೇನೆ ಎಂದರು.
ದೇಶದ ಹಲವು ರಾಜ್ಯಗಳಲ್ಲಿ ನಾಳೆ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ. ಕರ್ನಾಟಕದಲ್ಲೂ ನಾಳೆ ಸರ್ಕಾರಿ ರಜೆ ಘೋಷಣೆ ಮಾಡ್ತೀರಾ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದಂತ ಅವರು, ನಾಳೆ ಕರ್ನಾಟಕದಲ್ಲಿ ಸರ್ಕಾರಿ ರಜೆ ಘೋಷಣೆ ಮಾಡೋದಿಲ್ಲ ಎಂಬುದಾಗಿ ಕಡ್ಡಿ ಮುರಿದಂತೆ ಸ್ಪಷ್ಟನೆಯನ್ನು ನೀಡಿದ್ದಾರೆ. ಈ ಮೂಲಕ ನಾಳೆ ರಾಮ ಮಂದಿರ ಉದ್ಘಾಟನೆ, ರಾಮಲಲ್ಲಾ ಮೂರ್ತಿಗೆ ಪ್ರಾಣ ಪ್ರತಿಷ್ಠಾಪನೆ ಸಂದರ್ಭದಲ್ಲೇ ಸರ್ಕಾರಿ ರಜೆ ನಿರೀಕ್ಷೆಯಲ್ಲಿದ್ದವರಿಗೆ ಶಾಕ್ ನೀಡಿದ್ದಾರೆ.
ಡೀಪ್‌ಫೇಕ್ ವಿಡಿಯೋ ಮಾಡಿದ ಆರೋಪಿ ಬಂಧನ- ರಶ್ಮಿಕಾ ಮಂದಣ್ಣ ಹೇಳಿದ್ದನು?
BIG NEWS: ‘ಸಿದ್ಧಗಂಗಾ ಸ್ವಾಮೀಜಿಗಳಿಗೆ ‘ಭಾರತ ರತ್ನ’ ನೀಡುವಂತೆ ‘ಕೇಂದ್ರ ಸರ್ಕಾರ’ಕ್ಕೆ ಪತ್ರ – ಸಿಎಂ ಸಿದ್ಧರಾಮಯ್ಯ