ಕೊಪ್ಪಳ : ರಾಜ್ಯದ ಬಡ ಜನತೆಯ ಒಳಿತಿಗಾಗಿ ಗ್ಯಾರಂಟಿ ನೀಡುತ್ತಿದ್ದೇವೆ. ಹೊರತು ರಾಜಕೀಯ ಲಾಭಕ್ಕಾಗಿ ಅಲ್ಲ. ಇನ್ನು ಐದು ವರ್ಷಗಳ ಕಾಲ ನಾವು ಯಾವುದೇ ಗ್ಯಾರಂಟಿಯ ಯೋಜನೆಯನ್ನು ನಿಲ್ಲಿಸುವುದಿಲ್ಲ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದರು.

ಕೊಪ್ಪಳ ಜಿಲ್ಲೆಯ ಕುಷ್ಟಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ಸ್ಥಗಿತಗೊಳ್ಳುವುದಿಲ್ಲ.ಚುನಾವಣೆಯಲ್ಲಿ ಕಾಂಗ್ರೆಸ್‌ ಘೋಷಣೆ ಮಾಡಿದ 5 ಗ್ಯಾರಂಟಿಗಳನ್ನು ತಕ್ಷಣವೇ ಜಾರಿಗೊಳಿಸುವ ಮೂಲಕ ನುಡಿದಂತೆ ನಡೆದಿರುವ ನಾಡು ಕಂಡ ಧೀಮಂತ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ತಿಳಿಸಿದರು.

ನರೇಂದ್ರ ಮೋದಿ ಬರೀ ಸು‍ಳ್ಳು ಹೇಳುತ್ತಾ ಬಂದಿದ್ದಾರೆ. ಈಗ ಚುನಾವಣೆಯಲ್ಲಿ ಮತ್ತೆ ಸುಳ್ಳು ಭರವಸೆಗಳನ್ನು ನೀಡುತ್ತಿದ್ದಾರೆ. ಬಿಜೆಪಿಯವರ ಸುಳ್ಳು ಭರವಸೆಗಳಿಗೆ ಮೋಸ ಹೋಗಬಾರದು ಎಂದರು. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಜನರ ಕಲ್ಯಾಣಕ್ಕಾಗಿ 5 ಗ್ಯಾರಂಟಿಗಳನ್ನು ಜಾರಿಗೊಳಿಸುವ ಮೂಲಕ ನುಡಿದಂತೆ ನಡೆದಿದ್ದಾರೆ. ಬಡವರು, ದೀನ ದಲಿತರು, ಹೆಣ್ಣುಮಕ್ಕಳು ನೆಮ್ಮದಿಯ ಬದುಕು ಕಂಡುಕೊಂಡಿದ್ದಾರೆ ಎಂದರು.

Share.
Exit mobile version