ನವದೆಹಲಿ : ಹಿಜಾಬ್ ( Hijab Row) ವಿವಾದದ ಕುರಿತು ಸುಪ್ರೀಂಕೋರ್ಟ್ (Supreme Court) ಇಂದು ಐತಿಹಾಸಿಕ ತೀರ್ಪು (Verdict) ಪ್ರಕಟಿಸಿದೆ. ನ್ಯಾಹೇಮಂತ್ ಗುಪ್ತಾ, ನ್ಯಾ ಸುಧಾಂಶು ಧುಲಿಯಾ ನ್ಯಾಯಮೂರ್ತಿಗಳು ವಿಭಿನ್ನ ತೀರ್ಪು ನೀಡಿದ್ದಾರೆ. ಮುಸ್ಲಿಂ ವಿದ್ಯಾರ್ಥಿಯರ ಮೇಲ್ಮನವಿ ವಜಾ ಮಾಡಲಾಗಿದೆ ಎಂದು ನ್ಯಾಯ ಮೂರ್ತಿ ಹೇಮಂತ್ ಗುಪ್ತಾ ಆದೇಶ ಹೊರಡಿಸಿದ್ದಾರೆ. ನ್ಯಾ ಸುಧಾಂಶು ಧುಲಿಯಾ ಹೈಕೋರ್ಟ್ ತೀರ್ಪು ರದ್ದುಗೊಳಿಸಿದ್ದಾರೆ. ಹೀಗಾಗಿ ಹಿಜಾಬ್ ಪ್ರಕರಣ ಸಿಜೆಐ ಪೀಠಕ್ಕೆ ವರ್ಗಾವಣೆ ಮಾಡಲಾಗಿದೆ. ಹೀಗಾಗಿ ಕರ್ನಾಟಕದ ಶಾಲಾ ಕಾಲೇಜುಗಳಲ್ಲಿ ಸದ್ಯಕ್ಕೆ ಹಿಜಾಬ್ ಧರಿಸಿ ಬರುವ ಹಾಗಿಲ್ಲ ಮುಖ್ಯ ನ್ಯಾಯಮೂರ್ತಿಗಳ ಅಂಗಳಕ್ಕೆ ಕೇಸ್ ವರ್ಗಾವಣೆ ಮಾಡಲಾಗಿದೆ.
BIGG BREAKING NEWS : ಮುಸ್ಲಿಂ ವಿದ್ಯಾರ್ಥಿಗಳ ಮೇಲ್ಮನವಿ ಅರ್ಜಿ ವಜಾ : ಹಿಜಾಬ್ ಪ್ರಕರಣ ಸಿಜೆಐ ಪೀಠಕ್ಕೆ ವರ್ಗಾವಣೆ
ಹಿಜಾಬ್ ಧರಿಸಲು ಅನುಮತಿ ಕೋರಿ ಹೈಕೋರ್ಟ್ ಆದೇಶ ಪ್ರಶ್ನಿಸಿ ವಿದ್ಯಾರ್ಥಿನಿಯರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ತೀರ್ಪು ಪ್ರಕಟಿಸಿದೆ. ನ್ಯಾಯಮೂರ್ತಿ ಹೇಮಂತ್ ಗುಪ್ತಾ ಅವರು ನಿವೃತ್ತರಾಗುವ ಮೊದಲು ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಮೇಲಿನ ನಿಷೇಧವನ್ನು ತೆಗೆದುಹಾಕಲು ನಿರಾಕರಿಸಿದ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ಬಗ್ಗೆ ಸುಪ್ರೀಂ ಕೋರ್ಟ್ ತನ್ನ ತೀರ್ಪು ನೀಡಿದೆ.
ಇನ್ನು ಉಡುಪಿಯ ಬಾಲಕಿಯರ ಸರ್ಕಾರಿ ಪಿಯು ಕಾಲೇಜಿನ ಆರು ವಿದ್ಯಾರ್ಥಿನಿಯರು ಹಿಜಾಬ್ಗೆ ತರಗತಿಯಲ್ಲಿ ನಿರ್ಬಂಧ ವಿಧಿಸಿದ ಕಾಲೇಜಿನ ನಿರ್ಧಾರವನ್ನು ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋಗಿದ್ದರು.ಈ ಕುರಿತು ವಿಚಾರಣೆ ನಡೆಸಿದ್ದ ಹೈಕೋರ್ಟ್ ಶಾಲಾ, ಕಾಲೇಜಿನ ತರಗತಿಗಳಿಗೆ ಹಿಜಾಬ್ ಧರಿಸಿ ಹಾಜರಾಗುವುದನ್ನು ನಿಷೇಧಿಸಿ ಸರ್ಕಾರ ಹೊರಡಿಸಿದ್ದ ಆದೇಶವನ್ನು ಎತ್ತಿಹಿಡಿತ್ತು. ಅಲ್ಲದೆ, ಹಿಜಾಬ್ ಧಾರಣೆ ಇಸ್ಲಾಂನ ಅವಿಭಾಜ್ಯ ಅಂಗವಲ್ಲ ಎಂದೂ ವ್ಯಾಖ್ಯಾನಿಸಿತ್ತು.
BIGG BREAKING NEWS : ಮುಸ್ಲಿಂ ವಿದ್ಯಾರ್ಥಿಗಳ ಮೇಲ್ಮನವಿ ಅರ್ಜಿ ವಜಾ : ಹಿಜಾಬ್ ಪ್ರಕರಣ ಸಿಜೆಐ ಪೀಠಕ್ಕೆ ವರ್ಗಾವಣೆ
ಹೈಕೋರ್ಟ್ ತೀರ್ಪು ಪ್ರಶ್ನಿಸಿ ವಿದ್ಯಾರ್ಥಿಗಳು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಶಾಲಾ ಕಾಲೇಜುಗಳಲ್ಲಿ ಸಮಾನತೆ, ಸಮಗ್ರತೆ ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಭಂಗ ತರುವಂತಹ ಬಟ್ಟೆಗಳನ್ನು ಧರಿಸುವುದನ್ನು ನಿಷೇಧಿಸಿದ ರಾಜ್ಯ ಸರ್ಕಾರದ ಫೆಬ್ರವರಿ 5, 2022 ರ ಆದೇಶ ಸೇರಿದಂತೆ ವಿವಿಧ ಅಂಶಗಳ ಬಗ್ಗೆ ಅರ್ಜಿದಾರರ ಪರ ವಕೀಲರು ವಾದಿಸಿದ್ದರು.
ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವುದನ್ನು ಬೆಂಬಲಿಸಿ ನಡೆದ ಪ್ರತಿಭಟನೆಯು ಕೆಲವು ವ್ಯಕ್ತಿಗಳ “ಸ್ವಯಂಪ್ರೇರಿತ ಕೃತ್ಯ”ವಲ್ಲ ಎಂದು ಪ್ರತಿಪಾದಿಸಿದ ರಾಜ್ಯದ ವಕೀಲರು, ಸರ್ಕಾರವು ತನ್ನಂತೆಯೇ ವರ್ತಿಸದಿದ್ದರೆ ಸಾಂವಿಧಾನಿಕ ಕರ್ತವ್ಯವನ್ನು ನಿರ್ಲಕ್ಷಿಸಿದ್ದಕ್ಕಾಗಿ ತಪ್ಪಿತಸ್ಥನಾಗುತ್ತಿತ್ತು ಎಂದು ಸುಪ್ರೀಂ ಕೋರ್ಟ್ ನಲ್ಲಿ ವಾದಿಸಿದ್ದರು.
BIGG BREAKING NEWS : ಮುಸ್ಲಿಂ ವಿದ್ಯಾರ್ಥಿಗಳ ಮೇಲ್ಮನವಿ ಅರ್ಜಿ ವಜಾ : ಹಿಜಾಬ್ ಪ್ರಕರಣ ಸಿಜೆಐ ಪೀಠಕ್ಕೆ ವರ್ಗಾವಣೆ