ಬೆಂಗಳೂರು : ರಾಜ್ಯದಲ್ಲಿ ಬೇಡಿಕೆಗೆ ತಕ್ಕಂತೆ ವಿದ್ಯುತ್ ಪೂರೈಸಲಾಗುತ್ತಿದ್ದು, ಸದ್ಯಕ್ಕೆ ಲೋಡ್ ಶೆಡ್ಡಿಂಗ್ ಮಾಡುವ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದರು.
BREAKING : ಮೈಸೂರಿನಲ್ಲಿ ವಿದ್ಯುತ್ ಪ್ರವಹಿಸಿ ಎಲೆಕ್ಟ್ರಿಷಿಯನ್ ಸಾವು
ಬಿಜೆಪಿಯ ಛಲವಾದಿ ನಾರಾಯಣಸ್ವಾಮಿ ಅವರ ಪ್ರಶ್ನೆಗೆ ಉತ್ತರಿಸಿ, ಮಳೆ ಕೊರತೆ ಹಿನ್ನೆಲೆಯಲ್ಲಿ ಅಣೆಕಟ್ಟೆಗಳ ನೀರಿನಿಂದ ಬೇಡಿಕೆಗೆ ಅನುಗುಣವಾಗಿ ವಿದ್ಯುತ್ ಉತ್ಪಾದಿಸಿ ಪೂರೈಕೆ ಮಾಡಲಾಗುತ್ತಿದೆ. ವಿದ್ಯುತ್ ಕೊರತೆ ವೇಳೆ ದಿನವಹಿ ಆಧಾರದಲ್ಲಿ ವಿದ್ಯುತ್ ವಿನಿಮಯ ಕೇಂದ್ರಗಳಿಂದಲೇ ವಿದ್ಯುತ್ ಖರೀದಿಸಲಾಗುತ್ತಿದೆ ಎಂದರು.
ವಸತಿ ಶಾಲೆಗಳಲ್ಲಿ ಕುವೆಂಪು ಘೋಷ ವಾಕ್ಯ ಬದಲಾವಣೆ : ಸದನದಲ್ಲಿ ವಾಕ್ಸಮರ
ರಾಜ್ಯದಲ್ಲಿ ಜ.24ರವರೆಗೆ ವಿದ್ಯುತ್ ಉತ್ಪಾದನಾ ಸಾಮರ್ಥ್ಯ 36,697 ಮೆಗಾವ್ಯಾಟ್ ಇದೆ. ಬಹುತೇಕ ರೈತರು ಕೃಷಿ ಪಂಪ್‍ಸೆಟ್‍ಗಳಿಗೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದಿದ್ದರೂ, ಕೃಷಿ ಚಟುವಟಿಕೆಗೆ ತೊಂದರೆಯಾಗಬಾರದೆಂದು ವಿದ್ಯುತ್ ಸಂಪರ್ಕ ಕಡಿತಗೊಳಿಸಿಲ್ಲ ಎಂದು ತಿಳಿಸಿದರು.
ಆನೆಯಿಂದ ಸಾವಿಗೀಡಾದ ಕೇರಳದ ವ್ಯಕ್ತಿಗೆ ಪರಿಹಾರ : ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಬಿಜೆಪಿ
ಉತ್ತರ ಪ್ರದೇಶ ಹಾಗೂ ಪಂಜಾಬ್ ರಾಜ್ಯಗಳಿಂದ ನಿತ್ಯ 8.9 ದಶಲಕ್ಷ ಯೂನಿಟ್ ವಿದ್ಯುತ್ತನ್ನು ಬ್ಯಾಂಕಿಂಗ್ (ಬ್ಯಾಂಕಿಂಗ್/ ಸ್ವಾಪಿಂಗ್ ಆಫ್ ಪವರ್) ಮೂಲಕ ಪಡೆಯಲಾಗುತ್ತಿದೆ ಎಂದರು. ಕಳೆದ ವರ್ಷ ಡಿಸೆಂಬರ್ ಅಂತ್ಯದವರೆಗೆ ರಾಜ್ಯದಲ್ಲಿ 34,44,582 ಕೃಷಿ ಪಂಪ್‌ಸೆಟ್‌ಗಳು ಇದ್ದು, ಇವುಗಳಿಂದ 21,751 ದಶಲಕ್ಷ ಯೂನಿಟ್ ವಿದ್ಯುತ್ ಬಳಕೆಯಾಗುತ್ತಿದೆ.
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮಾ.4ರಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಪ್ರತಿಭಟನೆ
ಐಪಿ ಸೆಟ್ ಪಡೆದು ಸಕ್ರಮ ಮಾಡಿಕೊಳ್ಳುವಂತೆ ರೈತರಿಗೆ ಮನವಿ ಮಾಡುತ್ತಿದ್ದೇವೆ. ಗ್ರಾಮೀಣ ಭಾಗದಲ್ಲಿ ಸಮಸ್ಯೆಯಾದ ಟ್ರಾನ್ಸ್‌ಫಾರ್ಮರ್‌ಗಳನ್ನು 48 ಗಂಟೆಯೊಳಗೆ ಹಾಗೂ ನಗರ ವ್ಯಾಪ್ತಿಯಲ್ಲಿ 24 ಗಂಟೆಯೊಳಗೆ ಕೊಡಿ ಎಂದು ಸೂಚನೆ ನೀಡಿದ್ದೇನೆ ಎಂದರು.